ಜಿಯೋ ಪ್ರವೇಶಾತಿ ನಂತರ ಏರ್ಟೆಲ್, ವೋಡಾಫೋನ್, ಐಡಿಯಾ, ಬಿಎಸ್ಎನ್ಎಲ್ ನಂತಹ ಪ್ರಮುಖ ಕಂಪನಿಗಳು ಹರಸಾಹಸ ಪಡುತ್ತಲೇ ಇವೆ!
ದೂರಸಂಪರ್ಕ ಮಾರುಕಟ್ಟೆಯಲ್ಲಿ ತಮ್ಮ ಗ್ರಾಹಕರನ್ನು ಆಕರ್ಷಿಸಲು ಟೆಲಿಕಾಂ ಕಂಪನಿಗಳು ಹೊಸ ಹೊಸ ಪ್ಲಾನ್ ಗಳನ್ನು ಘೋಷಿಸುತ್ತವೆ. ಜಿಯೋ ಪ್ರವೇಶಾತಿ ನಂತರ ಏರ್ಟೆಲ್, ವೋಡಾಫೋನ್, ಐಡಿಯಾ, ಬಿಎಸ್ಎನ್ಎಲ್ ನಂತಹ ಪ್ರಮುಖ ಕಂಪನಿಗಳು ಹರಸಾಹಸ ಪಡುತ್ತಲೇ ಇವೆ!
ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ತನ್ನ ಗ್ರಾಹಕರನ್ನು ಸೆಳೆಯಲು ಸಾಕಷ್ಟು ಹೊಸ ಯೋಜನೆಗಳನ್ನು ಬಿಡುಗಡೆ ಮಾಡಿದೆ. ಆದರೆ ಈ ಬಾರಿ ಗ್ರಾಹಕರಿಗೆ ಶಾಕಿಂಗ್ ಸುದ್ದಿ ನೀಡಿದ್ದು, ಬಿಎಸ್ಎನ್ಎಲ್ ರೂ. 99 ಪ್ಲಾನ್ ನಲ್ಲಿ ಎರಡು ಮಹತ್ವದ ಬದಲಾವಣೆ ಮಾಡಿದೆ.

ರೂ. 99 ಯೋಜನೆ ಬದಲಾವಣೆ
- ರೂ. 99 ಯೋಜನೆಯ ವ್ಯಾಲಿಡಿಟಿ ಅವಧಿಯಲ್ಲಿ ಬದಲಾವಣೆ ಮಾಡಿದ್ದು, ಈ ಹಿಂದೆ ಇದ್ದ 26 ದಿನಗಳ ವ್ಯಾಲಿಡಿಟಿಯನ್ನು ಇದೀಗ 24 ದಿನಗಳಿಗೆ ಇಳಿಸಿದೆ.
- ಬಿಎಸ್ಎನ್ಎಲ್ ಇನ್ನೊಂದು ನಿರ್ಧಾರ ಕೈಗೊಂಡಿದ್ದು, ಸಿಮ್ ಬದಲಿ (sim replacement) ಶುಲ್ಕ ಶೇ. 10ರಷ್ಟು ಹೆಚ್ಚಿಸಿ ಗ್ರಾಹಕರಿಗೆ ಶಾಕ್ ನೀಡಿದೆ.
ಮೊದಲು ಸಿಮ್ ರಿಪ್ಲೇಸ್ಮೆಂಟ್ ಗಾಗಿ ಗ್ರಾಹಕರು ರೂ. 10 ನೀಡುತ್ತಿದ್ದರು. ಇನ್ಮುಂದೆ ರೂ. 100 ನೀಡಬೇಕಾಗಿದೆ.
- ಪ್ರಿಪೇಡ್ ಹಾಗೂ ಪೋಸ್ಟ್ ಪೇಡ್ ಎರಡೂ ವಿಧದ ಗ್ರಾಹಕರಿಗೆ ಇದು ಅನ್ವಯವಾಗಲಿದೆ. ಹೊಸ ನಿಯಮ ಜನವರಿ 21, 2019 ರಿಂದ ಜಾರಿಗೆ ಬಂದಿದೆ.
More From GoodReturns

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಸಗಟು ಬೆಲೆ ಸೂಚ್ಯಂಕ: ನಿಮ್ಮ ಜೇಬಿಗೆ ಕಾದಿದೆಯಾ ಶಾಕ್?

ಚಿನ್ನದ ಬೆಲೆ ಏರಿಕೆ: ಅಕ್ಷಯ ತೃತೀಯಕ್ಕೆ ಹೂಡಿಕೆ ಮಾಡುವುದು ಹೇಗೆ?

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಅಂಬೇಡ್ಕರ್ ಜಯಂತಿ ರಜೆ: ನಿಮ್ಮ ಎಸ್ಐಪಿ ಹಣಕ್ಕೆ ಕಾದಿದೆಯಾ ಸಂಕಷ್ಟ?

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!

ಸಾವರಿನ್ ಗೋಲ್ಡ್ ಬಾಂಡ್ ಹೂಡಿಕೆದಾರರೇ, ಇಂದೇ ನಗದೀಕರಿಸಿಕೊಳ್ಳಿ ನಿಮ್ಮ ಲಾಭ!



Click it and Unblock the Notifications