ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮಧ್ಯಂತರ ಬಜೆಟ್ ನಲ್ಲಿ ರೈತರು, ಮಧ್ಯಮ ವರ್ಗದವರು, ಉದ್ಯಮಿಗಳು ತಮಗೆ ಹೆಚ್ಚಿನ ಪ್ರಾಧಾನ್ಯತೆ ಸಿಗಬಹುದು ಎಂದು ನಿರೀಕ್ಷೆಯಲ್ಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಸ್ಟಾರ್ಟಅಪ್ ಕ್ಷೇತ್ರಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಿದ್ದು, ಕಾಲಕಾಲಕ್ಕೆ ಉತ್ತೇಜನ ನೀಡುತ್ತಾ ಬಂದಿದ್ದಾರೆ. ಕೇಂದ್ರ ಸರ್ಕಾರ ತನ್ನ ಆಡಳಿತಾವಧಿಯ ಕೊನೆಯ ಬಜೆಟ್ ಅನ್ನು ಫೆಬ್ರವರಿ 1 ರ ಶುಕ್ರವಾರದಂದು ಮಂಡಿಸಲಿದೆ.
ನವೋದ್ಯಮ (ಸ್ಟಾರ್ಟಅಪ್) ಕ್ಷೇತ್ರ ಕೆಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಸರ್ಕಾರ ಬರುವ ಮಧ್ಯಂತರ ಬಜೆಟ್ 2109 ರಲ್ಲಿ ಹೆಚ್ಚಿನ ಕೊಡುಗೆಗಳನ್ನು ನೀಡಬಹುದು ಎಂದು ನಿರೀಕ್ಷಿಸಲಾಗಿದೆ.
ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮಧ್ಯಂತರ ಬಜೆಟ್ ನಲ್ಲಿ ರೈತರು, ಮಧ್ಯಮ ವರ್ಗದವರು, ಉದ್ಯಮಿಗಳು ತಮಗೆ ಹೆಚ್ಚಿನ ಪ್ರಾಧಾನ್ಯತೆ ಸಿಗಬಹುದು ಎಂದು ನಿರೀಕ್ಷೆಯಲ್ಲಿದ್ದಾರೆ. ಕೇಂದ್ರ ಬಜೆಟ್ 2019: ಮೋದಿ ಸರ್ಕಾರ ಬಜೆಟ್‌ನಲ್ಲಿ ಏನೇನೆಲ್ಲ ಘೋಷಿಸಬಹುದು?
ರೈತರಿಗೆ ವಿಶೇಷ ಪ್ಯಾಕೇಜ್
ಕೃಷಿಕರ ಬಿಕ್ಕಟ್ಟನ್ನು ಪರಿಹರಿಸಲು ಮತ್ತು ರೈತರ ಆದಾಯವನ್ನು ಹೆಚ್ಚಿಸುವ ಸಲುವಾಗಿ ರೈತರ ಪ್ಯಾಕೇಜ್ ಅನ್ನು ಸರ್ಕಾರ ಘೋಷಿಸುವ ನಿರೀಕ್ಷೆಯಿದೆ. ಸಾಲ ಮನ್ನಾ ಬದಲಿಗೆ ರೈತರ ಖಾತೆಗಳಿಗೆ ನಿಗದಿತ ಮೊತ್ತವನ್ನು ನೇರವಾಗಿ ಪಾವತಿಸುವ ಯೋಜನೆಯನ್ನು ಘೋಷಿಸುವ ನಿರೀಕ್ಷೆ ಇದೆ. ಜೊತೆಗೆ ಬ್ಯಾಂಕುಗಳಿಂದ ಸಾಲ ಪಡೆಯಲು ಬಯಸುವ ರೈತರಿಗೆ ಸರಳೀಕೃತ ವ್ಯವಸ್ಥೆ ಜಾರಿಗೆ ಬರುವ ಸಾಧ್ಯತೆ ಇದೆ.
ಆದಾಯ ತೆರಿಗೆಯ ಮಿತಿ
ಆದಾಯ ತೆರಿಗೆಯ ಮಿತಿಯನ್ನು ರೂ. 2.5 ಲಕ್ಷದಿಂದ ರೂ. 5 ಲಕ್ಷಕ್ಕೆ ಹೆಚ್ಚಿಸುವ ನಿರೀಕ್ಷೆಯಿದೆ. ಜೊತೆಗೆ ಗೃಹ ಸಾಲದ ಬಡ್ಡಿ ವಿನಾಯಿತಿ ಮಿತಿಯನ್ನು ರೂ. 2 ಲಕ್ಷದಿಂದ ರೂ. 2.50 ಲಕ್ಷ ಗಳಿಗೆ ಹೆಚ್ಚಿಸುವ ಸಾಧ್ಯತೆ ಇದೆ. ಎಂಎಸ್ಎಂಇ (MSME) ವಲಯಕ್ಕೂ ಕೆಲವು ಸಕಾರಾತ್ಮಕ ಪ್ರಕಟಣೆಯನ್ನು ನಿರೀಕ್ಷಿಸಲಾಗಿದೆ.
ಸ್ಟಾರ್ಟಅಪ್ ವಲಯದ ನಿರೀಕ್ಷೆಗಳೇನು?
1. Angel Tax ನಲ್ಲಿ ಹೆಚ್ಚು ಸ್ಪಷ್ಟತೆ
2. ಡಿಜಿಟಲ್ ವಹಿವಾಟು ಹೆಚ್ಚಿಸಲು ನೀತಿ ಒತ್ತಡ
3. ಕನಿಷ್ಠ ಪರ್ಯಾಯ ತೆರಿಗೆಯ ಸಂಪೂರ್ಣ ನಿಷೇಧ
4.ಸರ್ಕಾರಿ ನೋಂದಾಯಿತ ಉದ್ಯಮಗಳಿಗೆ 3 ರಿಂದ 5 ವರ್ಷಗಳಿಗೆ ತೆರಿಗೆ ಲಾಭ
6. ನಿಧಿಗಳ ನಿಧಿಯಿಂದ ವಿತರಿಸುವ ಬಗ್ಗೆ ಹೆಚ್ಚು ಸ್ಪಷ್ಟತೆ
7. ESOP ಗಳ ಮೇಲೆ ತೆರಿಗೆಯ ಸ್ಪಷ್ಟತೆ
8. ಇನ್ಕ್ಯುಬೇಟರ್ ಮತ್ತು ವೇಗವರ್ಧಕಗಳನ್ನು (incubators and accelerators) ಸ್ಥಾಪಿಸುವುದು.
9. ಜಿಎಸ್ಟಿ ದರವನ್ನು ಕಡಿಮೆಗೊಳಿಸುವಿಕೆ
10. ಹೂಡಿಕೆ ಆಕರ್ಷಣೆಗಾಗಿ ಪ್ರತ್ಯೇಕವಾದ ನೀತಿ
ಆರೋಗ್ಯಕ್ಕೆ ಹೆಚ್ಚಿನ ಒತ್ತು
ದೇಶದ ಬಡಜನರ ಆರೋಗ್ಯಕ್ಕಾಗಿ ಹಲವಾರು ಯೋಜನೆಗಳನ್ನು 2018 ರಲ್ಲಿನ ಬಜೆಟ್‌ನಲ್ಲಿ ಘೋಷಿಸಲಾಗಿತ್ತು. ಈ ಬಾರಿ ಆರೋಗ್ಯ ಕ್ಷೇತ್ರಕ್ಕಾಗಿ ಮತ್ತಷ್ಟು ಕ್ರಮಗಳನ್ನು ಘೋಷಿಸುವ ಸಾಧ್ಯತೆಗಳಿವೆ. ಆದಾಯ ತೆರಿಗೆ ಕಾಯ್ದೆ 80ಡಿ ಯಡಿ ವೈದ್ಯಕೀಯ ಚಿಕಿತ್ಸೆ ಹಾಗೂ ರೋಗಪೂರ್ವ ಚೆಕ್ ಅಪ್‌ಗಳಿಗೆ ತೆರಿಗೆ ವಿನಾಯಿತಿಯನ್ನು ಹೆಚ್ಚಿಸಬಹುದಾಗಿದೆ. ಆಯುಷ್ಮಾನ್ ಯೋಜನೆಗೆ ಹೆಚ್ಚು ಒತ್ತು ನೀಡಬಹುದು.
ಬಜೆಟ್ ಮಂಡನೆ
ಹಣಕಾಸು ಸಚಿವರಾಗಿದ್ದ ಅರುಣ್ ಜೇಟ್ಲಿ ಅನಾರೋಗ್ಯದ ಹಿನ್ನೆಲೆಯಲ್ಲಿ ವಿದೇಶದಲ್ಲಿ ಚಿಕಿತ್ಸೆ ಪಡೆಯುತ್ತಿರುವುದರಿಂದ ರೇಲ್ವೆ ಸಚಿವರಾದ ಪಿಯೂಷ್ ಗೋಯಲ್ ಅವರು ಹಂಗಾಮಿ ಹಣಕಾಸು ಸಚಿವರಾಗಿ ಬಜೆಟ್ ಮಂಡನೆ ಮಾಡಲಿದ್ದಾರೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications