2017-18ರ ಹಣಕಾಸು ವರ್ಷದಲ್ಲಿ ಪ್ರಮುಖ ಕಂಪನಿಗಳಾದ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್), ವಿಪ್ರೋ, ಇನ್ಫೋಸಿಸ್ ಮತ್ತು ಎಚ್ಸಿಎಲ್ ಟೆಕ್ನಾಲಜೀಸ್ ಒಟ್ಟಾಗಿ 70,000 ಉದ್ಯೋಗಿಗಳನ್ನು ನೇಮಕ ಮಾಡಿದೆ.
ದೇಶದ ಮಾಹಿತಿ ತಂತ್ರಜ್ಞಾನ (ಐಟಿ) ವಲಯದಲ್ಲಿ ಕಳೆದ ಒಂಬತ್ತು ತಿಂಗಳಲ್ಲಿ 70 ಸಾವಿರ ಉದ್ಯೋಗ ಸೃಷ್ಟಿಯಾಗಿದೆ.
2017-18ರ ಹಣಕಾಸು ವರ್ಷದಲ್ಲಿ ಪ್ರಮುಖ ಕಂಪನಿಗಳಾದ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್), ವಿಪ್ರೋ, ಇನ್ಫೋಸಿಸ್ ಮತ್ತು ಎಚ್ಸಿಎಲ್ ಟೆಕ್ನಾಲಜೀಸ್ ಒಟ್ಟಾಗಿ 70,000 ಉದ್ಯೋಗಿಗಳನ್ನು ನೇಮಕ ಮಾಡಿದೆ. ಕಳೆದ ಒಂಬತ್ತು ತಿಂಗಳಲ್ಲಿ ಟಿಸಿಎಸ್ 22,931 ಉದ್ಯೋಗಿಗಳನ್ನು ನೇಮಿಸಿದೆ ಎಂದು ದಿ ಎಕನಾಮಿಕ್ ಟೈಮ್ಸ್ ವರದಿ ಮಾಡಿದೆ.

ಕಳೆದ ವರ್ಷಗಳಲ್ಲಿ ದೇಶದ ಐಟಿ ಕ್ಷೇತ್ರದಲ್ಲಿ ಹಾಗು ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿಸುವಲ್ಲಿ ವಿಫಲವಾಗಿರುವುದು ಉದ್ಯೋಗಿಗಳ ಆತಂಕಕ್ಕೆ ಕಾರಣವಾಗಿತ್ತು. ಡಿಜಿಟಲ್ ಟ್ರಾನ್ಸ್‌ಫರ್‌ಮೇಶನ್ ಸೇವೆ ಹೊಸ ಅವಕಾಶಗಳನ್ನು ಸೃಷ್ಟಿಸುವಲ್ಲಿ ಟಿಸಿಎಸ್ ಗೆ ಸಹಾಯ ಮಾಡಿದೆ.
ಪ್ರಸಕ್ತ ಸಾಲಿನ ಮೊದಲ ತ್ರೈಮಾಸಿಕದಲ್ಲಿ ಐಟಿ ದೈತ್ಯ ಇನ್ಫೋಸಿಸ್ 21398 ಉದ್ಯೋಗಿಗಳನ್ನು ನೇಮಕ ಮಾಡಿಕೊಂಡಿದ್ದರೆ, ಕಳೆದ ಸಾಲಿನ ಇದೇ ಸಮಯದಲ್ಲಿ 3743 ಜನರಿಗೆ ಉದ್ಯೋಗ ಅವಕಾಶ ಲಭಿಸಿತ್ತು. ಹೆಚ್ಸಿಎಲ್ 12,247 ಹಾಗೂ ವಿಪ್ರೋ 12,456 ಉದ್ಯೋಗಿಗಳನ್ನು ನೇಮಕ ಮಾಡಿಕೊಂಡಿವೆ.
ಟಿಸಿಎಸ್ ಹಿರಿಯ ಅಧಿಕಾರಿಯೊಬ್ಬರು ಹೇಳಿರುವಂತೆ, ಮಾರುಕಟ್ಟೆ ಬೆಳೆಯುತ್ತಿರುವುದರಿಂದ ಹೆಚ್ಚು ಕೆಲಸಗಾರರಿಗೆ ಅವಕಾಶ ನೀಡಲಾಗುತ್ತಿದೆ.


Click it and Unblock the Notifications