ಬೆಂಗಳೂರು, ಫೆಬ್ರವರಿ 08 : ಕರ್ನಾಟಕದಲ್ಲಿ 176 ಪಬ್ಲಿಕ್ ಸ್ಕೂಲ್‌ಗಳನ್ನು ಆರಂಭಿಸಲಾಗುತ್ತದೆ ಎಂದು
ಹಣಕಾಸು ಸಚಿವರು ಆಗಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ.
ಶುಕ್ರವಾರ ಎಚ್.ಡಿ.ಕುಮಾರಸ್ವಾಮಿ ಅವರು 2019-20ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಬಜೆಟ್‌ನಲ್ಲಿ 176 ಕರ್ನಾಟಕ ಪಬ್ಲಿಕ್ ಸ್ಕೂಲ್ ಸ್ಥಾಪನೆ ಮಾಡುವುದಾಗಿ ಮುಖ್ಯಮಂತ್ರಿಗಳು ಘೋಷಿಸಿದರು.
ಹಿಂದೆ ಸರ್ಕಾರ ಪ್ರತಿ ತಾಲೂಕಿಗೆ ಒಂದು ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಸ್ಥಾಪನೆ ಮಾಡುವ ಚಿಂತನೆ ಇದೆ ಎಂದು ಹೇಳಿತ್ತು. ಈ ಬಾರಿಯ ಬಜೆಟ್‌ನಲ್ಲಿ ಸ್ಕೂಲ್ ಸ್ಥಾಪನೆ ಮಾಡುವುದಾಗಿ ಘೋಷಿಸಲಾಗಿದೆ.

ಗ್ರಾಮೀಣ ಪ್ರದೇಶದ ಮಕ್ಕಳು 1 ರಿಂದ 12ನೇ ತರಗತಿ ತನಕ ಒಂದೇ ಸೂರಿನಡಿ ಶಿಕ್ಷಣ ಪಡೆಯಬೇಕು ಎಂಬ ಆಶಯದಿಂದ ಕರ್ನಾಟಕ ಜ್ಞಾನ ಆಯೋಗ ಪಬ್ಲಿಕ್ ಸ್ಕೂಲ್ ಸ್ಥಾಪನೆ ಮಾಡಬೇಕು ಎಂದು ಸರ್ಕಾರಕ್ಕೆ ಶಿಫಾರಸು ಮಾಡಿತ್ತು.
ಈ ಶಿಫಾರಸಿನ ಅನ್ವಯ 176 ಪಬ್ಲಿಕ್ ಸ್ಕೂಲ್‌ಗಳನ್ನು ಸ್ಥಾಪನೆ ಮಾಡಲಾಗುತ್ತಿದೆ. ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ಉದ್ದೇಶದಿಂದ ಪಬ್ಲಿಕ್ ಸ್ಕೂಲ್‌ಗಳನ್ನು ಗ್ರಾಮೀಣ ಪ್ರದೇಶದಲ್ಲಿ ಸ್ಥಾಪಿಸಲಾಗುತ್ತಿದೆ.
ರಾಜ್ಯದಲ್ಲಿ 44,615 ಪ್ರಾಥಮಿಕ, 5240 ಪ್ರೌಢಶಾಲೆ ಹಾಗೂ 1299 ಸರ್ಕಾರಿ ಪಿಯು ಕಾಲೇಜುಗಳಲ್ಲಿ 50 ಲಕ್ಷ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. 6882 ಅನುದಾನಿತ ಶಾಲೆ, 796 ಪಿಯು ಕಾಲೇಜುಗಳಿವೆ.


Click it and Unblock the Notifications