ನಿರೀಕ್ಷೆಗೆ ತಕ್ಕಂತೆ ಪ್ರಗತಿ ಸಾಧಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಸರಕಾರಗಳು ಜಾಗತಿಕ ಆರ್ಥಿಕ ತಲ್ಲಣಗಳನ್ನು ಎದುರಿಸಲು ಸಿದ್ಧವಾಗಿರಬೇಕು ಎಂದು ಅಂತರರಾಷ್ಟ್ರೀಯ ಹಣಕಾಸು ಸಂಸ್ಥೆಯು ಭಾನುವಾರ ಎಚ್ಚರಿಕೆ ನೀಡಿದೆ. ನಾವು ನಿರೀಕ್ಷೆ ಮಾಡಿದ್ದಕ್ಕಿಂತ ನಿಧಾನವಾಗಿ ಆರ್ಥಿಕ ಪ್ರಗತಿ ಆಗುತ್ತಿದೆ ಎಂದು ಐಎಂಎಫ್ ನ ಕಾರ್ಯನಿರ್ವಾಹಕ ನಿರ್ದೇಶಕಿ ಕ್ರಿಸ್ಟಿನ್ ಲಗಾರ್ಡೆ ದುಬೈನಲ್ಲಿ ನಡೆದ ವಿಶ್ವದ ಸರಕಾರಗಳ ಸಮಾವೇಶದಲ್ಲಿ ಹೇಳಿದ್ದಾರೆ.
ಕಳೆದ ತಿಂಗಳಷ್ಟೇ ಐಎಂಎಫ್ ಜಾಗತಿಕ ಆರ್ಥಿಕ ಪ್ರಗತಿಯ ಅಂದಾಜನ್ನು 3.7 ಪರ್ಸೆಂಟ್ ನಿಂದ 3.5 ಪರ್ಸೆಂಟ್ ಗೆ ಇಳಿಸಿತ್ತು. ಲಗಾರ್ಡೆ ಮಾತನಾಡಿ, ಜಾಗತಿಕ ಆರ್ಥಿಕತೆಯಲ್ಲಿ ತಲ್ಲಣ ಕಾಣಿಸಿಕೊಳ್ಳಬಹುದು ಎಂದು ನಾಲ್ಕು ಕಾರಣಗಳನ್ನು ಸಹ ಹೇಳಿದ್ದಾರೆ.
ಜಾಗತಿಕ ಮಟ್ಟದ ವ್ಯಾಪಾರ ಒತ್ತಡ, ಆರ್ಥಿಕ ಬಿಕ್ಕಟ್ಟು, ಬ್ರೆಕ್ಸಿಟ್ ಫಲಿತಾಂಶ ಮತ್ತು ಚೀನಾದ ಆರ್ಥಿಕ ಹಿಂಜರಿತದ ಪರಿಣಾಮವು ಜಾಗತಿಕ ಮಟ್ಟದಲ್ಲಿ ಆಗಬಹುದು ಎಂದು ಹೇಳಿದ್ದಾರೆ. ವಿಶ್ವದ ಎರಡು ಅತಿ ದೊಡ್ಡ ಆರ್ಥಿಕ ಶಕ್ತಿ ಅಮೆರಿಕ ಹಾಗೂ ಚೀನಾ ಮಧ್ಯ ನಡೆಯುತ್ತಿರುವ ವ್ಯಾಪಾರ ಪೈಪೋಟಿ ಈಗಾಗಲೇ ಜಾಗತಿಕವಾಗಿ ಪರಿಣಾಮ ಬೀರಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಆರ್ಥಿಕ ಹಿಂಜರಿತದ ಪರಿಣಾಮ ಹೇಗೆ ಆಗಬಹುದು ಎಂಬ ಬಗ್ಗೆ ನಮಗೆ ಯಾವುದೇ ಸೂಚನೆ ಇಲ್ಲ. ಆದರೆ ಈಗಾಗಲೇ ವ್ಯಾಪಾರ- ವ್ಯವಹಾರ, ಮಾರುಕಟ್ಟೆಯಲ್ಲಿನ ನಂಬಿಕೆ ಮೇಲೆ ಪರಿಣಾಮ ಅಗಿದೆ ಎಂದು ಆಕೆ ಹೇಳಿದ್ದಾರೆ. ನಾಲ್ಕಾರು ಆತಂಕದ ಕಾರ್ಮೋಡ ಇದ್ದಾಗ ಒಂದು ಮಿಂಚಿನ ಮೂಲಕ ಸಿಡಿಲು ಬಡಿಯಬಹುದು ಎಂದು ಅವರು ಹೇಳಿದ್ದಾರೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications