For Quick Alerts
ALLOW NOTIFICATIONS  
For Daily Alerts

ಕೇಂದ್ರ ನೌಕರರಿಗೆ ಗುಡ್ ನ್ಯೂಸ್: ಶೇ. 3ರಷ್ಟು ತುಟ್ಟಿ ಭತ್ಯೆ ಹೆಚ್ಚಳ

ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು (ಡಿಎ) ಶೇ. 3ರಷ್ಟು ಏರಿಕೆ ಮಾಡಲು ಕೇಂದ್ರ ಸಚಿವ ಸಂಪುಟ ಸಭೆ ಮಂಗಳವಾರ ಒಪ್ಪಿಗೆ ನೀಡಿದೆ. ಡಿಎ ಹೆಚ್ಚಳದಿಂದ ಸುಮಾರು 1.1 ಕೋಟಿ ಕೇಂದ್ರ ಸರ್ಕಾರಿ ನೌಕರರು ಹಾಗು ಪಿಂಚಣಿದಾರರು ಪ್ರಯೋಜನ ಪಡೆಯಲಿದ್

|

ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು (ಡಿಎ) ಶೇ. 3ರಷ್ಟು ಏರಿಕೆ ಮಾಡಲು ಕೇಂದ್ರ ಸಚಿವ ಸಂಪುಟ ಸಭೆ ಮಂಗಳವಾರ ಒಪ್ಪಿಗೆ ನೀಡಿದೆ. ಡಿಎ ಹೆಚ್ಚಳದಿಂದ ಸುಮಾರು 1.1 ಕೋಟಿ ಕೇಂದ್ರ ಸರ್ಕಾರಿ ನೌಕರರು ಹಾಗು ಪಿಂಚಣಿದಾರರು ಪ್ರಯೋಜನ ಪಡೆಯಲಿದ್ದಾರೆ.

ಕೇಂದ್ರ ನೌಕರರಿಗೆ ಗುಡ್ ನ್ಯೂಸ್: ಶೇ. 3ರಷ್ಟು ತುಟ್ಟಿ ಭತ್ಯೆ ಹೆಚ್ಚಳ

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದ ಸಭೆಯಲ್ಲಿ ನೌಕರರ ತುಟ್ಟಿ ಭತ್ಯೆ ಏರಿಕೆಗೆ ಒಪ್ಪಿಗೆ ನೀಡಲಾಗಿದೆ.

ಜನೆವರಿ 1, 2019ರಿಂದ ಪೂರ್ವಾನ್ವಯವಾಗುವಂತೆ ತುಟ್ಟಿ ಭತ್ಯೆ ಏರಿಕೆಯನ್ನು ಜಾರಿ ತರಲಾಗುವುದು ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. ಪ್ರಸ್ತುತ ಕೇಂದ್ರ ಸರ್ಕಾರಿ ನೌಕರರು ಶೇ. 9ರಷ್ಟು ತುಟ್ಟಿ ಭತ್ಯೆ ಪಡೆಯುತ್ತಿದ್ದು, ಇದೀಗ ಶೇ. 3ರಷ್ಟು ಏರಿಕೆಯೊಂದಿಗೆ ಶೇ. 12ಕ್ಕೆ ತಲುಪಿದೆ.

48.41 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 62.03 ಲಕ್ಷ ಪಿಂಚಣಿದಾರರು ಡಿಎ ಏರಿಕೆಯ ಲಾಭ ಪಡೆಯಲಿದ್ದಾರೆ. ಏಳನೇ ವೇತನ ಆಯೋಗದ ಶಿಫಾರಸ್ಸಿನ ಆಧಾರದ ಮೇಲೆ ಈ ಹೆಚ್ಚಳವಾಗಿದೆ. ಅಂತೂ ಲೋಕಸಭಾ ಚುನಾವಣೆಗೂ ಮುನ್ನ ನರೇಂದ್ರ ಮೋದಿ ಸರ್ಕಾರ ಕೇಂದ್ರ ನೌಕರರಿಗೆ ಸಿಹಿಸುದ್ದಿ ನೀಡಿದೆ.

English summary

Centre hikes DA by 3%, to benefit 1.1 crore employees and pensioners

The Union Cabinet on Tuesday increased the dearness allowance by 3 per cent effective from January 1, 2019.
Story first published: Wednesday, February 20, 2019, 11:04 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X