ಕೇಂದ್ರ ಸರ್ಕಾರ ಕಳೆದ ಕೆಲ ತಿಂಗಳುಗಳಲ್ಲಿ ಎಲ್ಪಿಜಿ ಗ್ರಾಹಕರಿಗೆ ಸಿಹಿಸುದ್ದಿ ನೀಡಿತ್ತು. ಇಳಿಕೆಯ ಹಾದಿಯಲ್ಲಿದ್ದ ಅಡುಗೆ ಅನಿಲ (ಎಲ್ಪಿಜಿ) ಈ ತಿಂಗಳು ಏರಿಕೆ ಕಂಡಿದೆ.
ಕೇಂದ್ರ ಸರ್ಕಾರ ಕಳೆದ ಕೆಲ ತಿಂಗಳುಗಳಲ್ಲಿ ಎಲ್ಪಿಜಿ ಗ್ರಾಹಕರಿಗೆ ಸಿಹಿಸುದ್ದಿ ನೀಡಿತ್ತು. ಇಳಿಕೆಯ ಹಾದಿಯಲ್ಲಿದ್ದ ಅಡುಗೆ ಅನಿಲ (ಎಲ್ಪಿಜಿ) ಈ ತಿಂಗಳು ಏರಿಕೆ ಕಂಡಿದೆ. ಹೊಸ ವರ್ಷ ಹಾಗು ಬಜೆಟ್ ಮಂಡನೆಯ ಸಂದರ್ಭದಲ್ಲಿ ಸರ್ಕಾರ ಸಿಲಿಂಡರ್ ಬೆಲೆ ಇಳಿಸಿ ಗ್ರಾಹಕರನ್ನು ಸಮಾಧಾನ ಪಡಿಸಿತ್ತು. ಎಲ್ಪಿಜಿ ಹೊಸ ದರಗಳು ಮಾರ್ಚ್ 1ರಿಂದ ಜಾರಿಯಾಗಲಿವೆ. ಎಲ್ಪಿಜಿ ಸಬ್ಸಿಡಿ ಖಾತೆಗೆ ಬರುತ್ತಿದೆಯೇ ಎಂಬುದನ್ನು ಚೆಕ್ ಮಾಡೋದು ಹೇಗೆ?
ಸಬ್ಸಿಡಿ ಸಹಿತ ಎಲ್ಪಿಜಿ ದರ
14.2 ಕೆ.ಜಿ ತೂಕದ ಸಬ್ಸಿಡಿ ಇರುವ ಎಲ್ಪಿಜಿ ಸಿಲಿಂಡರ್ ಬೆಲೆ ರೂ. 2.08 ಏರಿಕೆ ಮಾಡಲಾಗಿದೆ. ಕಳೆದ ತಿಂಗಳು ಸಿಲಿಂಡರ್ ಬೆಲೆ 1.46 ರೂಪಾಯಿ ಇಳಿಕೆ ಯಾಗಿತ್ತು. ಕಳೆದ ಜನೆವರಿ ತಿಂಗಳಲ್ಲಿ ಎಲ್‌ಪಿಜಿ ಬೆಲೆ ರೂ. 5.91 ಇಳಿಕೆಯಾಗಿತ್ತು. ಸಬ್ಸಿಡಿ ಸಹಿತ ಸಿಲಿಂಡರ್ ಬೆಲೆ ರೂ. 2.08 ಏರಿಕೆಯೊಂದಿಗೆ ರೂ. 495.61ಕ್ಕೆ ಏರಿಕೆಯಾಗಿದೆ.
ಸಬ್ಸಿಡಿ ರಹಿತ ಸಿಲಿಂಡರ್
ಸಬ್ಸಿಡಿ ರಹಿತ ಸಿಲಿಂಡರ್ ಬೆಲೆ 42.50 ರೂ. ಏರಿಕೆಯಾಗಿದೆ. ಫೆಬ್ರವರಿಯಲ್ಲಿ ಸಬ್ಸಿಡಿ ರಹಿತ 14.2 ಕೆಜಿ ತೂಕದ ಸಿಲಿಂಡರ್ ದರ ರೂ. 30 ಇಳಿಕೆಯಾಗಿತ್ತು. ಸಬ್ಸಿಡಿ ರಹಿತ ಸಿಲಿಂಡರ್ ಬೆಲೆ ರೂ. 42.50 ಹೆಚ್ಚಳವಾಗಿರುವುದರಿಂದ ಎಲ್ಪಿಜಿ ಬೆಲೆ ದೆಹಲಿಯಲ್ಲಿ ರೂ. 701.50 ಆಗಿದೆ.
ಬೆಲೆ ಏರಿಕೆಗೆ ಕಾರಣ
ಪ್ರತಿವರ್ಷ 12 ಸಿಲಿಂಡರ್
ದೇಶದ ಕುಟುಂಬಗಳು ಪ್ರತಿವರ್ಷ 12 ಸಬ್ಸಿಡಿ ಸಹಿತ ಸಿಲಿಂಡರ್ ಗಳನ್ನು ವಿಪಡೆಯಬಹುದಾಗಿದೆ. ಇದಕ್ಕಿಂತ ಹೆಚ್ಚಿನ ಸಿಲಿಂಡರ್ ಗಳನ್ನು ಸಬ್ಸಿಡಿ ರಹಿತ ಖರೀದಿಸಬೇಕಾಗುತ್ತದೆ. ಸಬ್ಸಿಡಿ ಮೊತ್ತವನ್ನು ಗ್ರಾಹಕರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ.
ಉಜ್ವಲ ಯೋಜನೆ
ಕೇಂದ್ರದ ಸರ್ಕಾರ ಕಳೆದ ನಾಲ್ಕು ವರ್ಷಗಳಲ್ಲಿ ಉಜ್ವಲ ಯೋಜನೆಯ ಮೂಲಕ 10 ಕೋಟಿ ಮನೆಗಳಿಗೆ ಎಲ್ಪಿಜಿ ಸಂಪರ್ಕ ಒದಗಿಸಿದೆ. ಈ ಯೋಜನೆ ಸಾಕಾರಕ್ಕಾಗಿ ಸರ್ಕಾರಿ ಸ್ವಾಮ್ಯ ತೈಲ ಕಂಪನಿಗಳು ಕೈಜೋಡಿಸಿವೆ. ಕೇಂದ್ರದ ಉಜ್ವಯ ಯೋಜನೆಯಂತೆ ರಾಜ್ಯದಲ್ಲಿ ಅನಿಲಭಾಗ್ಯ ಯೋಜನೆ ಅನುಷ್ಠಾನವಾಗಿದೆ. ಕೇಂದ್ರ ಸರ್ಕಾರ ತಯಾರಿಸಿರುವ ಫಲಾನುಭವಿಗಳ ಪಟ್ಟಿಯಲ್ಲಿ ರಾಜ್ಯದ ಶೇ. 60ರಷ್ಟು ಕುಟುಂಬಗಳು ಬರುತ್ತಿರಲಿಲ್ಲ. ಹೀಗಾಗಿ ಅನಿಲ ಭಾಗ್ಯ ಯೋಜನೆ ಅಡಿಯಲ್ಲಿ ಅವರೆಲ್ಲರಿಗೂ ಅಡುಗೆ ಅನಿಲ (ಗ್ಯಾಸ್) ನೀಡುವ ಉದ್ದೇಶ ಹೊಂದಿದೆ.


Click it and Unblock the Notifications