ರೈತರ ಸಾಲ ಮನ್ನಾ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಯವರು ಉನ್ನತ ಮಟ್ಟದ ಸಭೆ ಕೈಗೊಂಡಿದ್ದು, ಅಧಿಕಾರಿಗಳಿಗೆ ಚುರುಕು ಮುಟ್ಟಿಸಿ ಶೀಘ್ರ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ರೈತರ ಸಾಲ ಮನ್ನಾ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಯವರು ಉನ್ನತ ಮಟ್ಟದ ಸಭೆ ಕೈಗೊಂಡಿದ್ದು, ಅಧಿಕಾರಿಗಳಿಗೆ ಚುರುಕು ಮುಟ್ಟಿಸಿ ಶೀಘ್ರ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ರೈತರ ಸಾಲ ಮನ್ನಾ ಯೋಜನೆ ತ್ವರಿತಗತಿಯ ಮತ್ತು ಕ್ರಮಬದ್ದ ಅನುಷ್ಠಾನಕ್ಕಾಗಿ ವಾರಕ್ಕೊಮ್ಮೆ ಪ್ರಗತಿ ಪರಿಶೀಲನೆ ಮಾಡುವಂತೆ ತಿಳಿಸಿದ್ದಾರೆ. ನಿಮ್ಮ ಬೆಳೆ ಸಾಲ ಮನ್ನಾ ಆಗಿದೆಯೋ? ಇಲ್ಲವೋ? ಇಲ್ಲಿ ಚೆಕ್ ಮಾಡಿ..

2018 ರ ಡಿಸೆಂಬರ್ ತಿಂಗಳಿನಿಂದ ರೈತರ ಸಾಲವನ್ನು ಹಂತ ಹಂತವಾಗಿ ಮನ್ನಾ ಮಾಡಲಾಗುತ್ತಿದೆ. ಇಲ್ಲಿಯವರೆಗೆ ಸಹಕಾರ ಸಂಘಗಳ 8.3 ಲಕ್ಷ ರೈತರ ಸಾಲ ಮನ್ನಾಕ್ಕಾಗಿ ರೂ. 3500 ಕೋಟಿ ಸಾಲ ಬಿಡುಗಡೆ ಮಾಡಲಾಗಿದೆ. ವಾಣಿಜ್ಯ ಬ್ಯಾಂಕುಗಳ ಸುಮಾರು 7.5 ಲಕ್ಷ ರೈತರಿಗೆ ರೂ. 3930 ಕೋಟಿ ಹಣ ಬಿಡುಗಡೆ ಮಾಡಲಾಗಿದ್ದು, ಇನ್ನೂ 1.5 ಲಕ್ಷ ರೈತರ ಸುಮಾರು ರೂ. 900 ಕೋಟಿ ಸಾಲ ಮೊತ್ತ ಬಿಡುಗಡೆ ಮಾಡಬೇಕಿದ್ದು, ಇದೇ ತಿಂಗಳ 23ರ ನಂತರ ಬಿಡುಗಡೆ ಸಾಧ್ಯತೆ ಇದೆ. ಇಲ್ಲಿಯವರೆಗೆ ಒಟ್ಟಾರೆ ವಾಣಿಜ್ಯ ಬ್ಯಾಂಕ್ ಹಾಗೂ ಸಹಕಾರಿ ಬ್ಯಾಂಕುಗಳ 15.5 ಲಕ್ಷ ರೈತರ ರೂ. 7417 ಕೋಟಿ ಮನ್ನಾ ಮಾಡಲಾಗಿದೆ ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದ್ದಾರೆ. ರೈತರ ಸಾಲಮನ್ನಾ ಆನಿಯಮಾವಳಿಗಳಂತೆ ಸಹಕಾರ ಸಂಘಗಳಲ್ಲಿ ರೈತರು ಅರ್ಹತೆ ಪಡೆದ ದಿನದಂದು ಅವರ ಖಾತೆಗೆ ಹಣ ಬಿಡುಗಡೆ ಮಾಡಲಾಗುತ್ತಿದೆ ಎಂದು ತಿಳಿಸಲಾಗಿದೆ.
ರೈತರ ಸಾಲ ಮನ್ನಾ ಯೋಜನೆಯ ಅನುಷ್ಠಾನವನ್ನು ವೈಜ್ಞಾನಿಕವಾಗಿ ನಿರ್ವಹಿಸಲಾಗುತ್ತಿದೆ. ಸಾಲಮನ್ನಾ ನಿಯಮಗಳ ವ್ಯಾಪ್ತಿಯಲ್ಲಿ ಬರುವ ಎಲ್ಲ ರೈತರ ಸಾಲಮನ್ನಾ ಇದೇ ಹಣಕಾಸು ವರ್ಷದಲ್ಲಿ ಪೂರ್ಣಗೊಳ್ಲಲಿದೆ.
ರೈತರ ಸಾಲ ಮನ್ನಾ ಯೋಜನೆಗೆ ಹಣಕಾಸು ಕೊರತೆ ಇಲ್ಲ. ಅಲ್ಲದೇ ಸರ್ಕಾರ ಈಗಾಗಲೇ ಘೋಷಿಸಿರುವ ಯೋಜನಗಳಿಗೆ ಸಾಲ ಮನ್ನಾದಿಂದ ಯಾವುದೇ ಅಡ್ಡಿ ಆಗುವುದಿಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸ್ಪಷ್ಟನೆ ನೀಡಿದ್ದಾರೆ. ರೈತರ ಸಾಲ ಮನ್ನಾ ಯೋಜನೆಯ ಉನ್ನತ ಮಟ್ಟದ ಸಭೆಯಲ್ಲಿ, ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ, ಸಹಕಾರ ಸಚಿವ ಬಂಡೆಪ್ಪ ಕಾಶ್ಯಂಪುರ, ಪಶುಸಂಗೋಪನಾ ಸಚಿವ ನಾಡಗೌಡ ಹಾಗೂ ಸಹಕಾರ ಹಾಗೂ ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸಾಲ ಮನ್ನಾ ಷರತ್ತುಗಳೇನು?
ಒಂದು ಕುಟುಂಬದ ಗರಿಷ್ಠ ರೂ. 1 ಲಕ್ಷವರೆಗೆ ಮಾತ್ರ ಸಾಲ ಮನ್ನಾ ಎಂಬ ಷರತ್ತು ಸಡಿಲಗೊಳಿಸಲಾಗಿದೆ. ಸಹಕಾರಿ ಬ್ಯಾಂಕ್/ಸಂಘಗಳು (ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಲ್ಯಾಂಪ್ಸ್, ಡಿಸಿಸಿ ಬ್ಯಾಂಕ್ ಮತ್ತು ಪಿಕಾರ್ಡ್ ಬ್ಯಾಂಕ್) ವಿತರಿಸಿದ ಅಲ್ಪಾವಧಿ ಬೆಳೆ ಸಾಲ ಜುಲೈ 10, 2018ಕ್ಕೆ ಹೊರ ಬಾಕಿ ಸಾಲಕ್ಕೆ ಮಾತ್ರ ಅನ್ವಯ ಆಗುತ್ತದೆ. ಈ ಅವಧಿಯೊಳಗೆ ಸಾಲ ಪಡೆದು ರೈತರು ಮೃತ ಪಟ್ಟಿದ್ದಲ್ಲಿ ಆ ರೈತರ ವಾರಸುದಾರರಿಗೆ ಈ ಸೌಲಭ್ಯ ಸಿಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಥವಾ ಹೊಸ ಬದಲಾವಣೆಗಳಿದ್ದಲ್ಲಿ ನಿಮ್ಮ ಹತ್ತಿರದ ಇಲಾಖೆಗಳಲ್ಲಿ ಮಾಹಿತಿ ಪಡೆಯಿರಿ.
ಸಾಲಮನ್ನಾ ಯಾರಿಗೆ ಅನ್ವಯವಾಗಲ್ಲ
- ಕಳೆದ 3 ವರ್ಷದ ಅವಧಿಯಲ್ಲಿ ಯಾವುದಾದರೂ ಹಣಕಾಸು ವರ್ಷದಲ್ಲಿ ಆದಾಯ ತೆರಿಗೆ ಪಾವತಿಸಿದ್ದಲ್ಲಿ ಅಂತಹ ರೈತರಿಗೆ ಸಾಲ ಮನ್ನಾ ಪ್ರಯೋಜನ ಲಭ್ಯವಿರುವುದಿಲ್ಲ.
- ಸಾಲ ಪಡೆದ ರೈತರು ಸರ್ಕಾರಿ, ಸಹಕಾರಿ ಅಥವಾ ಇನ್ನಿತರೆ ಕ್ಷೇತ್ರದ ನೌಕರರಾಗಿ ತಿಂಗಳಿಗೆ 20,000ಕ್ಕಿಂತ ಹೆಚ್ಚಿನ ವೇತನ ಅಥವಾ ಪಿಂಚಣಿ ಪಡೆಯುತ್ತಿದ್ದರೆ ಈ ಯೋಜನೆ ಅನ್ವಯ ಆಗಲ್ಲ.
- ಕೃಷಿ ಉತ್ಪನ್ನಗಳನ್ನು ಅಡ ಇಟ್ಟು ನೀಡುವ ಸಾಲ, ಚಿನ್ನಾಭರಣ ಅಡವಿಟ್ಟು ನೀಡುವ ಸಾಲ, ವಾಹನ ಖರೀದಿ ಸಾಲ, ಪಶು ಭಾಗ್ಯ ಯೋಜನೆ ಅಡಿ ಪಶು ಆಹಾರ ಖರೀದಿಗೆ ನೀಡುವ ಸಾಲ, ಮೀನುಗಾರಿಕೆ ಉದ್ದೇಶಗಳಿಗೆ ನೀಡುವ ಸಾಲ, ಸ್ವಸಹಾಯ ಗುಂಪುಗಳಿಗೆ ಮತ್ತು ಜಂಟಿ ಬಾಧ್ಯತಾ ಗುಂಪುಗಳಿಗೆ ನೀಡಿದ್ದ ಸಾಲಗಳಿಗೆ ಈ ಯೋಜನೆ ಅನ್ವಯಿಸುವುದಿಲ್ಲ. ಪಿಎಂ ಕಿಸಾನ್ ಯೋಜನೆ: ರೈತರು 6 ಸಾವಿರ ಸಹಾಯಧನ ಪಡೆಯುವುದು ಹೇಗೆ?
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications