For Quick Alerts
ALLOW NOTIFICATIONS  
For Daily Alerts

ಜನರ ಜೇಬಿಗೆ ಕತ್ತರಿ! ವಿದ್ಯುತ್ ದರ ಏರಿಕೆ..?

ದಿನದಿಂದ ದಿನಕ್ಕೆ ಬೆಲೆಗಳು ಏರುತ್ತಾ ಸಾಗುತ್ತಿದ್ದರೆ, ಜನರು ಕುಗ್ಗಿ ಹೋಗುತ್ತಿದ್ದಾರೆ! ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಇಲ್ಲೊಂದು ಶಾಕಿಂಗ್ ಸುದ್ದಿ ಇದೆ.

|

ದಿನದಿಂದ ದಿನಕ್ಕೆ ಬೆಲೆಗಳು ಏರುತ್ತಾ ಸಾಗುತ್ತಿದ್ದರೆ, ಜನರು ಕುಗ್ಗಿ ಹೋಗುತ್ತಿದ್ದಾರೆ! ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಇಲ್ಲೊಂದು ಶಾಕಿಂಗ್ ಸುದ್ದಿ ಇದೆ.

 

ಜನರ ಜೇಬಿಗೆ ಕತ್ತರಿ! ವಿದ್ಯುತ್ ದರ ಏರಿಕೆ..?

ಲೋಕಸಭೆ ಚುನಾವಣೆಯ ಫಲಿತಾಂಶ ಬರುತ್ತಿದ್ದಂತೆ ವಿದ್ಯುತ್ ದರ ಏರಿಕೆಯಾಗಲಿದೆ. ವಿದ್ಯುತ್ ದರ ಹೆಚ್ಚಿಸುಂತೆ ವಿದ್ಯುತ್ ಸರಬರಾಜು ಕಂಪನಿಗಳು ಮನವಿ ಸಲ್ಲಿಸಿವೆ. ವಿದ್ಯುತ್ ದರ ಪರಿಷ್ಕರಣೆಗೆ ಕ್ರಮ ಕೈಗೊಳ್ಳಲಾಗಿದ್ದು, ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ನಂತರದಲ್ಲಿ ವಿದ್ಯುತ್ ದರ ಏರಿಕೆಯಾಗಲಿದೆ. ಆದರೆ ಕರ್ನಾಟಕ ವಿದ್ಯುಚ್ಚಕ್ತಿ ನಿಯಂತ್ರಣ ಮಂಡಳಿ ಯಾವುದೇ ಕ್ರಮ ಕಯಗೊಂಡಿಲ್ಲ ಎನ್ನಲಾಗಿದೆ.
ಕಳೆದ ನವೆಂಬರ್ ತಿಂಗಳಲ್ಲೇ ವಿದ್ಯುತ್ ದರ ಏರಿಕೆ ಮಾಡಬೇಕಿತ್ತು. ಆದರೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು.

ನೀರಿನ ದರ ಏರಿಕೆ
ಒಂದೇಡೆ ವಿದ್ಯುತ್ ದರ ಏರಿಕೆ ತಯಾರಿ ನಡೆಯುತ್ತಿದ್ದರೆ, ಇನ್ನೊಂದೆಡೆ ನೀರಿನ ದರ ಏರಿಕೆಗೆ ಬೆಂಗಳೂರು ಜಲಮಂಡಳಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಬೆಂಗಳೂರು ಜಲಮಂಡಳಿ ಕಳೆದ ಜನವರಿ-ಫೆಬ್ರವರಿಯಲ್ಲಿ ಪ್ರಸ್ತಾವನೆ ಸಲ್ಲಿಸಿದ್ದು, ಲೋಕಸಭೆ ಚುನಾವಣೆಯಿಂದಾಗಿ ದರ ಏರಿಕೆಗೆ ಮುಂದಾಗಿಲ್ಲ.

 

ಕುಮಾರಸ್ವಾಮಿ ಸಭೆ
ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಯವರು ಇಂಧನ ಮತ್ತು ಜಲಮಂಡಳಿ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಇದೇ ಮೇ 23 ರ ಲೋಕಸಭಾ ಚುನಾವಣಾ ಫಲಿತಾಂಶದ ನಂತರ ವಿದ್ಯುತ್ ಹಾಗೂ ನೀರಿನ ದರ ಏರಿಕೆ ಪರಿಷ್ಕರಣೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Read more about: money finance news
English summary

Electricity price will increase

The electricity price will increase as the results of the Lok Sabha elections are coming.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X