For Quick Alerts
ALLOW NOTIFICATIONS  
For Daily Alerts

ಪ್ರಧಾನ ಮಂತ್ರಿ ಆವಾಸ ಯೋಜನೆಯಡಿ 1.8 ಕೋಟಿ ಗ್ರಾಮೀಣ ಮನೆಗಳ ನಿರ್ಮಾಣ

ಪ್ರಧಾನ ಮಂತ್ರಿ ಆವಾಸ ಯೋಜನೆಗೆ ಉತ್ತೇಜನ ನೀಡಲು ಮುಂದಾಗಿರುವ ನರೇಂದ್ರ ಮೋದಿ ಸರ್ಕಾರವು, ಪಿಎಂ ಅವಾಸ ಯೋಜನೆಯಡಿ 1.8 ಕೋಟಿ ಗ್ರಾಮೀಣ ಭಾಗಗಳ ಮನೆಗಳ ನಿರ್ಮಾಣಕ್ಕೆ ಸರ್ಕಾರ ಯೋಜಿಸಿದೆ.

|

ಪ್ರಧಾನ ಮಂತ್ರಿ ಆವಾಸ ಯೋಜನೆಗೆ ಉತ್ತೇಜನ ನೀಡಲು ಮುಂದಾಗಿರುವ ನರೇಂದ್ರ ಮೋದಿ ಸರ್ಕಾರವು, ಪಿಎಂ ಅವಾಸ ಯೋಜನೆಯಡಿ 1.8 ಕೋಟಿ ಗ್ರಾಮೀಣ ಭಾಗಗಳ ಮನೆಗಳ ನಿರ್ಮಾಣಕ್ಕೆ ಸರ್ಕಾರ ಯೋಜಿಸಿದೆ.
ಹೊಸ ಮನೆಗಳಿಗೆ ಹೆಚ್ಚುವರಿ ಸೌಲಭ್ಯ ನೀಡುವ ಸಲುವಾಗಿ ವಿದ್ಯುತ್ ಸಂಪರ್ಕ ಮತ್ತು ಅಡುಗೆ ಅನಿಲ ಅಳವಡಿಸಲಾಗುವುದು. ಮುಂದಿನ ಮೂರು ವರ್ಷಗಳಲ್ಲಿ ಮನೆ ನಿರ್ಮಾಣ ಕಾರ್ಯ ಸಂಪೂರ್ಣವಾಗಿ ಪೂರ್ಣಗೊಳ್ಳಲಿದೆ ಎಂದು ನಿರೀಕ್ಷಿಸಲಾಗಿದೆ. ಪ್ರಧಾನ ಮಂತ್ರಿ ಅವಾಸ ಯೋಜನೆ ಅರ್ಜಿ ಸಲ್ಲಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು?

 
ಪ್ರಧಾನ ಮಂತ್ರಿ ಆವಾಸ ಯೋಜನೆಯಡಿ 1.8 ಕೋಟಿ ಗ್ರಾಮೀಣ ಮನೆಗಳ ನಿರ್ಮಾಣ

2.6 ಲಕ್ಷ ಕೋಟಿ ಮೀಸಲು
ಪ್ರತಿ ವರ್ಷ 60 ಲಕ್ಷ ಮನೆ ನಿರ್ಮಾಣಕ್ಕೆ ಸರ್ಕಾರ ತಯಾರಿ ನಡೆಸುತ್ತಿದ್ದು, ಸದ್ಯ ವರ್ಷಕ್ಕೆ 4.5 ಮಿಲಿಯನ್ ಮನೆ ನಿರ್ಮಾಣ ಮಾಡಲಾಗುತ್ತಿದೆ. ಈ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರ ರೂ. 2.6 ಲಕ್ಷ ಕೋಟಿ ರೂಪಾಯಿ ಮೀಸಲಿಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹೊಸ ಮನೆಗೆ ಸೌಭಾಗ್ಯ ಯೋಜನೆಯಡಿ ವಿದ್ಯುತ್ ಸಂಪರ್ಕ ಹಾಗೂ ಉಜ್ವಲ ಯೋಜನೆಯಡಿ ಅಡುಗೆ ಅನಿಲ ಸಂಪರ್ಕ ಕಲ್ಪಿಸಲಾಗುವುದು.

 

ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಈ ವರ್ಷದ ಆರಂಭದಲ್ಲಿ ಪ್ರಧಾನ ಮಂತ್ರಿ ಆವಾಸ ಯೋಜನೆ (ನಗರ) ಅಡಿಯಲ್ಲಿ 5,60,695 ಅಗ್ಗದ ಮನೆಗಳನ್ನು ನಿರ್ಮಿಸಲು ಅನುಮತಿ ನೀಡಿತು. ರೂ. 8,404 ಕೋಟಿ ಕೇಂದ್ರ ಸಹಾಯದೊಂದಿಗೆ ರೂ. 33,873 ಕೋಟಿ ಯೋಜನೆಯ ವೆಚ್ಚದೊಂದಿಗೆ ಒಟ್ಟು 1,243 ಯೋಜನೆಗಳನ್ನು ಅನುಮೋದಿಸಲಾಗಿದೆ. 2016ರಲ್ಲಿ ಪ್ರಧಾನ ಮಂತ್ರಿ ಆವಾಸ ಯೋಜನೆಗೆ ಚಾಲನೆ ಸಿಕ್ಕಿದೆ. ಪ್ರಧಾನ ಮಂತ್ರಿ ಅವಾಸ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?

English summary

1.8 crore more rural houses in next three years tops government's agenda

In order to boost the Pradhan Mantri Awas Yojana, the government is planning to construct 18 million additional rural houses under the scheme.
Story first published: Tuesday, May 28, 2019, 12:52 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X