For Quick Alerts
ALLOW NOTIFICATIONS  
For Daily Alerts

ನಿರುದ್ಯೋಗದ ಪ್ರಮಾಣ ಕಳೆದ 45 ವರ್ಷಗಳಲ್ಲೇ ಅತಿ ಹೆಚ್ಚು, ಸತ್ಯ ಒಪ್ಪಿಕೊಂಡ ಕೇಂದ್ರ ಸರ್ಕಾರ

ಪ್ರಧಾನಿ ನರೇಂದ್ರ ಮೋದಿ ಅವಧಿಯಲ್ಲಿ ನಿರುದ್ಯೋಗದ ಪ್ರಮಾಣ ಕಳೆದ 45 ವರ್ಷಗಳಲ್ಲೇ ಅತಿ ಹೆಚ್ಚು ದಾಖಲಾಗಿದೆ ಎಂಬ ವರದಿಯನ್ನು ಕೇಂದ್ರ ಸರ್ಕಾರ ಕೊನೆಗೂ ಒಪ್ಪಿಕೊಂಡಿದೆ.

|

ಪ್ರಧಾನಿ ನರೇಂದ್ರ ಮೋದಿ ಅವಧಿಯಲ್ಲಿ ನಿರುದ್ಯೋಗದ ಪ್ರಮಾಣ ಕಳೆದ 45 ವರ್ಷಗಳಲ್ಲೇ ಅತಿ ಹೆಚ್ಚು ದಾಖಲಾಗಿದೆ ಎಂಬ ವರದಿಯನ್ನು ಕೇಂದ್ರ ಸರ್ಕಾರ ಕೊನೆಗೂ ಒಪ್ಪಿಕೊಂಡಿದೆ.

ನಿರುದ್ಯೋಗದ ಪ್ರಮಾಣ ಕಳೆದ 45 ವರ್ಷಗಳಲ್ಲೇ ಅತಿ ಹೆಚ್ಚು

ಎರಡನೇ ಅವಧಿಗೆ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಎರಡನೇ ದಿನಕ್ಕೆ ಈ ಅಂಕಿಅಂಶ ಬಿಡುಗಡೆಯಾಗಿದೆ.2017-18ನೇ ಆರ್ಥಿಕ ವರ್ಷದಲ್ಲಿ ದೇಶದ ನಿರುದ್ಯೋಗ ಪ್ರಮಾಣವು ಶೇ. 6.01ರಷ್ಟಿದೆ ಎಂದು ಅಂಕಿ ಅಂಶಗಳ ಸಚಿವಾಲಯ ಶುಕ್ರವಾರ ತಿಳಿಸಿದೆ. ಇದೇ ಅಂಕಿ ಅಂಶ ಜನವರಿಯಲ್ಲಿ ಪತ್ರಿಕೆಯೊಂದರಲ್ಲಿ ಸೋರಿಕೆಯಾಗಿತ್ತು. ಆದರೆ ಆಗ ಕೇಂದ್ರ ಸರ್ಕಾರವು ಅಂಕಿ ಅಂಶವನ್ನು ಅಲ್ಲಗಳೆದಿತ್ತು. ಆದರೆ ಈಗ 1972-73 ರ ನಂತರ ನಿರುದ್ಯೋಗವು 45 ವರ್ಷಗಳಲ್ಲಿಯೇ ಹೆಚ್ಚಿನ ಪ್ರಮಾಣದಲ್ಲಿದೆ ಎಂದು ಸರ್ಕಾರ ಅಧಿಕೃತವಾಗಿ ತಿಳಿಸಿದೆ.

ಪ್ರಧಾನಿ ನರೇಂದ್ರ ಮೊದಿಯವರು ಹೆಚ್ಚು ಮೌಲ್ಯದ ನೋಟುಗಳನ್ನು ರದ್ದುಗೊಳಿಸಿದ ನಂತರ ನಿರುದ್ಯೋಗದ ಪ್ರಮಾಣ ಕಳೆದ ೪೫ ವರ್ಷಗಳಲ್ಲೆ ಅತಿಹೆಚ್ಚು ಪ್ರಮಾಣದಲ್ಲಿ ದಾಖಲಾಗಿತ್ತು.

ನಗರದ ಎಲ್ಲಾ ಉದ್ಯೋಗಶೀಲ ಯುವಕರಲ್ಲಿ ಶೇ. 7.8 ರಷ್ಟು ಜನರು ನಿರುದ್ಯೋಗಿಗಳಾಗಿದ್ದಾರೆ ಎಂದು ಕಾರ್ಮಿಕ ಸಚಿವಾಲಯ ಹೇಳಿದೆ. ಗ್ರಾಮೀಣ ಭಾಗದಲ್ಲಿ ಇದರ ಪ್ರಮಾಣ ಶೇ. 5.3 ರಷ್ಟಿದೆ. ಭಾರತದಲ್ಲಿ ನಿರುದ್ಯೋಗ ಪ್ರಮಾಣವು ಶೇ. 6.2 ರಷ್ಟಿದ್ದರೆ, ಮಹಿಳೆಯರಲ್ಲಿ ಶೇ. 5.7 ರಷ್ಟಿದೆ ಎಂದು ಕಾರ್ಮಿಕ ಸಚಿವಾಲಯ ಹೇಳಿದೆ.
ಕೃಷಿ ಮತ್ತು ಉತ್ಪಾದನಾ ವಲಯಗಳಲ್ಲಿನ ಬೆಳವಣಿಗೆ ಕುಂಠಿತಗೊಂಡಿರುವುದು ದೇಶದ ಆರ್ಥಿಕ ಬೆಳವಣಿಗೆ ಮೇಲೆ ಕೆಟ್ಟ ಪರಿಆಣಮ ಬೀರಿದೆ.

Read more about: unemployment jobs money
English summary

Unemployment Rate At 6.1%; Calling It 45-Year High Unfair, Says Centre

The country's unemployment rate was at 6.1 per cent in 2017-18, the statistics ministry said on Friday.
Story first published: Saturday, June 1, 2019, 16:50 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X