For Quick Alerts
ALLOW NOTIFICATIONS  
For Daily Alerts

ಆರ್ಬಿಐ ಡೆಪ್ಯುಟಿ ಗವರ್ನರ್ ವಿರಳ್ ಆಚಾರ್ಯ ರಾಜೀನಾಮೆ

ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಡೆಪ್ಯುಟಿ ಗವರ್ನರ್ ವಿರಳ್ ಆಚಾರ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಶಾಕ್ ನೀಡಿದ್ದಾರೆ.

|

ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಡೆಪ್ಯುಟಿ ಗವರ್ನರ್ ವಿರಳ್ ಆಚಾರ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಶಾಕ್ ನೀಡಿದ್ದಾರೆ.

ಆರ್ಬಿಐ ಡೆಪ್ಯುಟಿ ಗವರ್ನರ್ ವಿರಳ್ ಆಚಾರ್ಯ ರಾಜೀನಾಮೆ

ವಿರಳ್ ಆಚಾರ್ಯ ಅವರು ತಮ್ಮ ಅಧಿಕಾರಾವಧಿ ಇನ್ನೂ ಆರು ತಿಂಗಳ ಕಾಲ ಇದ್ದರೂ ಅವಧಿಗೂ ಮುನ್ನವೇ ರಾಜೀನಾಮೆ ನೀಡಿದ್ದಾರೆ. ಜನೆವರಿ 20, 2020ರಂದು ಅವರ ಅಧಿಕಾರವಧಿ ಮುಕ್ತಾಯಗೊಳ್ಳಲಿತ್ತು.
ವಿರಳ್ ಆಚಾರ್ಯ ಅವರು 2017 ರ ಜನವರಿ 23 ರಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಡೆಪ್ಯುಟಿ ಗವರ್ನರ್ ಆಗಿ ನೇಮಕಗೊಂಡಿದ್ದರು. ಡೆಪ್ಯುಟಿ ಗವರ್ನರ್ ಹುದ್ದೆಗೆ ನೇಮಕಗೊಂಡಿದ್ದ ಅತಿ ಕಿರಿಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.
ಕಳೆದ ವರ್ಷದ ಡಿಸೆಂಬರ್ ತಿಂಗಳಲ್ಲಿ ಆರ್ಬಿಐ ಗವರ್ನರ್ ಉರ್ಜಿತ್ ಪಟೇಲ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಅವರು ಕೂಡ ತಮ್ಮ ಅಧಿಕಾರವಧಿ ಮುಗಿಯುವ 9 ತಿಂಗಳ ಮುನ್ನವೇ ಸ್ಥಾನ ತೊರೆದಿದ್ದು, ಹಲವಾರು ಚರ್ಚೆಗಳಿಗೆ ಗ್ರಾಸವಾಗಿತ್ತು. ಇದರಿಂದಾಗಿ ಒಟ್ಟು ಆರು ತಿಂಗಳ ಅವಧಿಯಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಇಬ್ಬರು ಪ್ರಮುಖ ಅಧಿಕಾರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದಂತಾಗಿದೆ.

Read more about: rbi money finance news
English summary

RBI's deputy governor Viral Acharya quits six months before his term ends

Viral Acharya who had made a fervent pitch for autonomy for the regulator, has reportedly quit six months before the scheduled end of his term.
Story first published: Monday, June 24, 2019, 10:58 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X