ಪಡಿತರ ವಿತರಣೆಯಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, 'ಒನ್ ನೇಷನ್, ಒನ್ ರೇಶನ್ ಕಾರ್ಡ್' ಜಾರಿಗೊಳಿಸುವುದಾಗಿ ಹೇಳಿದೆ.
ಪಡಿತರ ವಿತರಣೆಯಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, 'ಒನ್ ನೇಷನ್, ಒನ್ ರೇಶನ್ ಕಾರ್ಡ್' ಜಾರಿಗೊಳಿಸುವುದಾಗಿ ಹೇಳಿದೆ.
ದೇಶಾದ್ಯಂತದ ಯಾವುದೇ ಪಿಡಿಎಸ್ ಅಂಗಡಿಯಿಂದ ಪಡಿತರ ಫಲಾನುಭವಿಗಳು ವಿಶೇಷವಾಗಿ ವಲಸೆ ಹೋಗುವ ಕಾರ್ಮಿಕರು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪ್ರಡೆಯಲು 'ಒನ್ ನೇಷನ್ ಒನ್ ರೇಷನ್ ಕಾರ್ಡ್' ಯೋಜನೆಯನ್ನು ಪ್ರಾರಂಭಿಸುವ ಯೋಜನೆಯಲ್ಲಿ ಕೇಂದ್ರ ಸರ್ಕಾರ ಕಾರ್ಯನಿರ್ವಹಿಸುತ್ತಿದೆ.
ಬಡ ಜನರು, ಕಾರ್ಮಿಕರು ಉದ್ಯೋಗ ಅಥವಾ ಇನ್ಯಾವುದೇ ಕಾರಣಕ್ಕೆ ಒಂದು ಕಡೆಯಿಂದ ಮತ್ತೊಂದು ಕಡೆಗೆ ವಲಸೆ ಹೋದಾಗ ತೊಂದರೆಯಿಲ್ಲದೇ ಆಹಾರ ಧಾನ್ಯ ಪಡೆಯಲು ಸಾಧ್ಯವಾಗುವಂತೆ 'ಒನ್ ನೇಷನ್, ಒನ್ ರೇಷನ್ ಕಾರ್ಡ್' ರೂಪಿಸಲಾಗುತ್ತಿದೆ.
ಸುಲಭ ವ್ಯವಸ್ಥೆ
ಸಾಮಾನ್ಯವಾಗಿ ಒಂದು ಕುಟುಂಬದವರು ಹಲವು ಕಾರ್ಡ್ ಗಳನ್ನು ಹೊಂದಿರುವ ಸಾಧ್ಯತೆ ಇರುತ್ತದೆ. ಇದನ್ನು ತಡೆಗಟ್ಟಲು ಒಬ್ಬ ವ್ಯಕ್ತಿ ಅಥವಾ ಕುಟುಂಬ ವಿವಿಧ ರಾಜ್ಯಗಳಲ್ಲಿ ಒಂದಕ್ಕಿಂತ ಹೆಚ್ಚು ರೇಶನ್ ಕಾರ್ಡ್‌ಗಳನ್ನು ಹೊಂದುವ ಅಗತ್ಯವನ್ನು ಪರಿಹರಿಸಲಾಗುತ್ತದೆ. ಇದರಿಂದ ದೇಶದ ಬೊಕ್ಕಸಕ್ಕೂ ಉಳಿತಾಯವಾಗುತ್ತದೆ.
ಯಾವುದೇ ಪಡಿತರ ಅಂಗಡಿಯಿಂದ ಆಹಾರಧಾನ್ಯ
ಒನ್ ನೇಷನ್, ಒನ್ ರೇಷನ್ ಕಾರ್ಡ್ ಯೋಜನೆ ಮುಖಾಂತರ ವಲಸೆ ಕಾರ್ಮಿಕರಿಗೆ ಹೆಚ್ಚಿನ ಪ್ರಯೋಜನವಾಗಲಿದೆ. ದೇಶದ ಯಾವ ಭಾಗಕ್ಕೂ ಹೋದರೂ ಕಾರ್ಮಿಕರಿಗೆ ಪೂರ್ಣ ಆಹಾರ ಭದ್ರತೆ ಸಿಗಲಿದೆ. ವಲಸೆ ಕಾರ್ಮಿಕರು ಯಾವುದೇ ನಿರ್ದಿಷ್ಟ ಪಡಿತರ ಅಂಗಡಿಯಿಂದ ಆಹಾರ ಧಾನ್ಯಗಳನ್ನು ಖರೀದಿಸಬೇಕಾಗಿಲ್ಲ. ತಮಗೆ ಸಮೀಪದ ಯಾವುದೇ ಪಡಿತರ ಅಂಗಡಿಯಿಂದಲೂ ಆಹಾರಧಾನ್ಯ ಖರೀದಿಸಬಹುದಾಗಿದೆ.
ನಕಲಿ ಕಾರ್ಡ್ ಮತ್ತು ಭ್ರಷ್ಟಾಚಾರ ತಡೆ
ಒನ್ ನೇಷನ್, ಒನ್ ರೇಷನ್ ಕಾರ್ಡ್ ಯೋಜನೆ ಜಾರಿಗಾಗಿ ಕೇಂದ್ರ ಆಹಾರ ಸಚಿವಾಲಯ ದೇಶದ ಎಲ್ಲ ರೇಷನ್ ಕಾರ್ಡ್‌ಗಳನ್ನು ಒಂದೇ ವ್ಯವಸ್ಥೆಯಡಿಗೆ ತರಲಿದೆ. ಇದರಿಂದ ನಕಲಿ ರೇಶನ್ ಕಾರ್ಡ್‌ಗಳನ್ನು ನಿವಾರಿಸಬಹುದಾಗಿದೆ. ಅಲ್ಲದೇ ಭ್ರಷ್ಟಾಚಾರಕ್ಕೂ ಕಡಿವಾಣ ಬೀಳಲಿದೆ ಎಂದು ಕೇಂದ್ರ ಆಹಾರ ಸಚಿವ ರಾಮ್ ವಿಲಾಸ್ ಪಾಸ್ವಾನ್ ತಿಳಿಸಿದ್ದಾರೆ.
ಐಎಂಪಿಡಿಎಸ್ ಜಾರಿ
ಈಗಾಗಲೇ ಕರ್ನಾಟಕ, ಕೇರಳ, ಆಂಧ್ರ ಪ್ರದೇಶ, ಗುಜರಾತ್, ಹರಿಯಾಣ, ಜಾರ್ಖಂಡ್, ಮಹಾರಾಷ್ಟ್ರ, ರಾಜಸ್ಥಾನ, ತೆಲಂಗಾಣ ಮತ್ತು ತ್ರಿಪುರಾ ರಾಜ್ಯಗಳಲ್ಲಿ ಐಎಂಪಿಡಿಎಸ್ ವ್ಯವಸ್ಥೆ ಜಾರಿಯಲ್ಲಿದೆ. ಈ ರಾಜ್ಯಗಳ ಫಲಾನುಭವಿಗಳು ತಮ್ಮ ಜಿಲ್ಲೆಯ ಯಾವುದೇ ಪಡಿತರ ಅಂಗಡಿಗಳಿಂದ ಆಹಾರ ಧಾನ್ಯ ಖರೀದಿಸಬಹುದಾಗಿದೆ.


Click it and Unblock the Notifications