For Quick Alerts
ALLOW NOTIFICATIONS  
For Daily Alerts

ಭರ್ಜರಿ ಗುಡ್ ನ್ಯೂಸ್! ಎಲ್ಪಿಜಿ ಸಿಲಿಂಡರ್ ಬೆಲೆ ಭಾರೀ ಇಳಿಕೆ

ಅಡುಗೆ ಅನಿಲ (ಎಲ್ಪಿಜಿ) ಸಿಲಿಂಡರ್ ಬೆಲೆ ಜುಲೈ 1ರಿಂದ ಕಡಿಮೆಯಾಗಲಿದೆ ಎಂದು ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಸಂಸ್ಥೆ ಇಂಡಿಯನ್‌ ಆಯಿಲ್‌ ಕಾರ್ಪೋರೇಷನ್‌ (ಐಒಸಿ) ಹೇಳಿದೆ.

|

ಅಡುಗೆ ಅನಿಲ (ಎಲ್ಪಿಜಿ) ಸಿಲಿಂಡರ್ ಬೆಲೆ ಜುಲೈ 1ರಿಂದ ಕಡಿಮೆಯಾಗಲಿದೆ ಎಂದು ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಸಂಸ್ಥೆ ಇಂಡಿಯನ್‌ ಆಯಿಲ್‌ ಕಾರ್ಪೋರೇಷನ್‌ (ಐಒಸಿ) ಹೇಳಿದೆ.
ಎಲ್ಪಿಜಿ ಗ್ರಾಹಕರಿಗೆ ಇದು ಸಿಹಿಸುದ್ದಿಯಾಗಿದ್ದು, ಸೋಮವಾರದಿಂದ ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭರ್ಜರಿ ಇಳಿಕೆಯಾಗಿದೆ.

ಸಬ್ಸಿಡಿ ರಹಿತ ಎಲ್ಪಿಜಿ ದರ

ಸಬ್ಸಿಡಿ ರಹಿತ ಎಲ್ಪಿಜಿ ದರ

ಸಬ್ಸಿಡಿ ರಹಿತ ಗ್ಯಾಸ್ ಸಿಲಿಂಡರ್ ಬೆಲೆ ರೂ. 737.50 ಗಳಿಂದ ರೂ. 637ಕ್ಕೆ ಇಳಿದಿದೆ ಎಂದು ಐಒಸಿ ಭಾನುವಾರ ರಾತ್ರಿ ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಒಟ್ಟು ನೂರು ರೂಪಾಯಿ ಇಳಿಕೆಯಾದಂತಾಗಿದೆ.

ಸಬ್ಸಿಡಿ ಸಹಿತ ಎಲ್ಪಿಜಿ ದರ

ಸಬ್ಸಿಡಿ ಸಹಿತ ಎಲ್ಪಿಜಿ ದರ

ಸಬ್ಸಿಡಿ ಸಹಿತ ಸಿಲಿಂಡರ್ ಬೆಲೆ ರೂ. 494.35 ಇರಲಿದೆ. ಬಾಕಿ ಮೊತ್ತವನ್ನು ಪ್ರತಿ ಸಿಲಿಂಡರ್‌ಗೆ ರೂ. 142.35 ನ್ನು ಕೇಂದ್ರ ಸರ್ಕಾರವು ಸಬ್ಸಿಡಿಯಾಗಿ ಭರಿಸಲಿದೆ. ಗ್ಯಾಸ್ ತುಂಬಿದ ನಂತರ ಗ್ರಾಹಕರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸಬ್ಸಿಡಿ ಸಹಿತ ಸಿಲಿಂಡರ್‌ ಗಳ ಬೆಲೆಯನ್ನು ಯಥಾ ಸ್ಥಿತಿಯಲ್ಲಿ ಮುಂದುವರೆಸಲಾಗಿದೆ.

ಹೊಸ ದರ ಜಾರಿ

ಹೊಸ ದರ ಜಾರಿ

ಅಡುಗೆ ಅನಿಲ (ಎಲ್ಪಿಜಿ) ಸಿಲಿಂಡರ್ ಮೇಲಿನ ಪರಿಷ್ಕೃತ ದರ ಜುಲೈ 1 ರಿಂದಲೇ ಜಾರಿಯಾಗಲಿದೆ. ಕಳೆದ ಮೇ ಮತ್ತು ಏಪ್ರಿಲ್ ತಿಂಗಳಲ್ಲಿ ಸಿಲಿಂಡರ್ ಬೆಲೆಯನ್ನು ಏರಿಕೆ ಮಾಡಲಾಗಿತ್ತು. ಕಳೆದ ಬಾರಿ ತೈಲ ಕಂಪನಿಗಳು ಮಾರುಕಟ್ಟೆಯಲ್ಲಿ ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 5 ರೂ.ವರೆಗೆ, ಸಬ್ಸಿಡಿ ಸಹಿತ ಸಿಲಿಂಡರ್ ದರ 25 ಪೈಸೆ ಹೆಚ್ಚಳ ಮಾಡಿದ್ದವು.

ಬೆಲೆ ಏರಿಕೆಗೆ ಕಾರಣ

ಬೆಲೆ ಏರಿಕೆಗೆ ಕಾರಣ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯಾಗಿರುವುದರಿಂದ ಎಲ್ಪಿಜಿ ದರಗಳು ಇಳಿಕೆ ಕಂಡಿವೆ. ಅಲ್ಲದೇ ವಿದೇಶಿ ವಿನಿಮಯ ದರದ ಬದಲಾವಣೆಗಳನ್ನು ಅವಲಂಬಿಸಿದ್ದು, ಡಾಲರ್ ಎದುರು ರೂಪಾಯಿ ಮೌಲ್ಯ ಚೇತರಿಸಿಕೊಂಡ ಹಿನ್ನೆಲೆಯಲ್ಲಿ ಬೆಲೆ ಇಳಿಕೆ ಕಂಡಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೋರೇಷನ್ ಹೇಳಿದೆ.

ಪ್ರತಿವರ್ಷ 12 ಸಿಲಿಂಡರ್

ಪ್ರತಿವರ್ಷ 12 ಸಿಲಿಂಡರ್

ದೇಶದ ಕುಟುಂಬಗಳು ಪ್ರತಿವರ್ಷ 12 ಸಬ್ಸಿಡಿ ಸಹಿತ ಸಿಲಿಂಡರ್ ಗಳನ್ನು ವಿಪಡೆಯಬಹುದಾಗಿದೆ. ಇದಕ್ಕಿಂತ ಹೆಚ್ಚಿನ ಸಿಲಿಂಡರ್ ಗಳನ್ನು ಸಬ್ಸಿಡಿ ರಹಿತ ಖರೀದಿಸಬೇಕಾಗುತ್ತದೆ. ಸಬ್ಸಿಡಿ ಮೊತ್ತವನ್ನು ಗ್ರಾಹಕರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ.

ಎಲ್ಪಿಜಿ ಸಬ್ಸಿಡಿ ಖಾತೆಗೆ ಬರುತ್ತಿದೆಯೇ ಎಂಬುದನ್ನು ಚೆಕ್ ಮಾಡೋದು ಹೇಗೆ? ಎಲ್ಪಿಜಿ ಸಬ್ಸಿಡಿ ಖಾತೆಗೆ ಬರುತ್ತಿದೆಯೇ ಎಂಬುದನ್ನು ಚೆಕ್ ಮಾಡೋದು ಹೇಗೆ?

English summary

LPG Cooking Gas Cylinders Cheaper By Rs. 100.50 From Today

LPG cylinders will cost cheaper by Rs 100.50 from today, the Indian Oil Corporation (IOC) said in its release
Story first published: Monday, July 1, 2019, 11:31 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X