ರೈತರಿಗೆ ಗುಡ್ ನ್ಯೂಸ್, ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಬಂಪರ್
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಜುಲೈ 5 ಮಂಡನೆಯಾಗಲಿರುವ ಬಜೆಟ್ ನಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರಿಗೆ ನೀಡುವ ಸಹಾಯಧನ ಹೆಚ್ಚಿಸಬಹುದು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಜುಲೈ 5 ಮಂಡನೆಯಾಗಲಿರುವ ಬಜೆಟ್ ನಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರಿಗೆ ನೀಡುವ ಸಹಾಯಧನ ಹೆಚ್ಚಿಸಬಹುದು.
ಲೋಕಸಭಾ ಚುನಾವಣೆಯ ಪೂರ್ವದ ಮಧ್ಯಂತರ ಬಜೆಟ್ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಪರಿಚಯಿಸಿ, ರೈತರಿಗೆ ವಾರ್ಷಿಕ 6 ಸಾವಿರ ರೂಪಾಯಿ ನೀಡುವ ಘೋಷಣೆ ಮಾಡಲಾಗಿತ್ತು.

ಲೋಕಸಭೆ ಚುನಾವಣೆ ನಡೆಯುವ ಪೂರ್ವದಲ್ಲಿ ರೈತರ ಖಾತೆಗೆ ಹಣ ಕೂಡ ವರ್ಗಾವಣೆಯಾಗಿತ್ತು. ಇದು ಬಿಜೆಪಿ ಗೆಲುವಿನಲ್ಲಿ ಪ್ರಮುಖ ವಹಿಸಿತ್ತು ಎನ್ನಲಾಗಿದೆ. ಪ್ರಸ್ತುತ ಬಜೆಟ್ ನಲ್ಲಿ ಮೋದಿ ಸರ್ಕಾರ ರೂ. 6 ಸಾವಿರ ಬದಲು ರೂ. 8 ಸಾವಿರ ನೀಡುವ ಸಾಧ್ಯತೆ ಇದೆ.
ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು 14 ಕೋಟಿ ರೈತರಿಗೆ ವಿಸ್ತರಿಸುವುದು ಸಕಾರಾತ್ಮಕ ಹೆಜ್ಜೆಯಾಗಿದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಮೂಹ ಮುಖ್ಯ ಆರ್ಥಿಕ ಸಲಹೆಗಾರ ಡಾ. ಸೌಮ್ಯಾ ಕಾಂತಿ ಘೋಷ್ ತಮ್ಮ ಸಂಶೋಧನಾ ಪ್ರಬಂಧವೊಂದರಲ್ಲಿ ತಿಳಿಸಿದ್ದಾರೆ. ಮುಂದಿನ ಐದು ವರ್ಷಗಳವರೆಗೆ ಇದನ್ನು ವಾರ್ಷಿಕ ರೂ. 6000 ದಿಂದ ರೂ. 8000ಕ್ಕೆ ಹೆಚ್ಚಿಸಬೇಕು ಎಂದಿದ್ದಾರೆ.
ತೆಲಂಗಾಣ, ಒಡಿಶಾ ಸರ್ಕಾರಗಳು ನರೇಂದ್ರ ಮೋದಿ ಸರ್ಕಾರ ನೀಡುವುದಕ್ಕಿಂತ ಹೆಚ್ಚು ಹಣವನ್ನು ರೈತರಿಗೆ ನೀಡುತ್ತಿವೆ. ಇದನ್ನು ಗಮನದಲ್ಲಿಟ್ಟುಕೊಂಡಿರುವ ಕೇಂದ್ರ ಸರ್ಕಾರ, ಗ್ರಾಮೀಣ ಪ್ರದೇಶದ ಆರ್ಥಿಕ ಪರಿಸ್ಥಿತಿ ಸುಧಾರಣೆ ಹಾಗೂ ವಿಧಾನಸಭೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಹಣದ ಮೊತ್ತ ಹೆಚ್ಚಳಕ್ಕೆ ಚಿಂತಿಸುತ್ತಿದೆ.


Click it and Unblock the Notifications