For Quick Alerts
ALLOW NOTIFICATIONS  
For Daily Alerts

ಉದ್ಯೋಗಾಕಾಂಕ್ಷಿಗಳಿಗೆ ಕೇಂದ್ರದಿಂದ ಗುಡ್ ನ್ಯೂಸ್! 2.94 ಲಕ್ಷ ಹುದ್ದೆಗಳಿಗೆ ನೇಮಕಾತಿ

ಉದ್ಯೋಗದ ನಿರೀಕ್ಷೆಯಲ್ಲಿರುವ ಆಕಾಂಕ್ಷಿಗಳಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದ್ದು, ಖಾಲಿ ಇರುವ 2.94 ಲಕ್ಷ ಹುದ್ದೆಗಳಿಗೆ ನೇಮಕಾತಿ ಮಾಡಲಿದೆ.

|

ಉದ್ಯೋಗದ ನಿರೀಕ್ಷೆಯಲ್ಲಿರುವ ಆಕಾಂಕ್ಷಿಗಳಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದ್ದು, ಖಾಲಿ ಇರುವ 2.94 ಲಕ್ಷ ಹುದ್ದೆಗಳಿಗೆ ನೇಮಕಾತಿ ಮಾಡಲಿದೆ.
ಈ ವರ್ಷದ ಜೂನ್ 1 ರ ಹೊತ್ತಿಗೆ ರೈಲ್ವೆ ಇಲಾಖೆಯಲ್ಲಿ 298,000 ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇದ್ದು, 294,000 ಉದ್ಯೋಗಿಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ ಎಂದು ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಲೋಕಸಭೆಯಲ್ಲಿ ಮಾಹಿತಿ ನೀಡಿದ್ದಾರೆ.

ರೈಲ್ವೆ ಇಲಾಖೆಯಲ್ಲಿ ನೇಮಕ

ರೈಲ್ವೆ ಇಲಾಖೆಯಲ್ಲಿ ನೇಮಕ

ಕಳೆದ ಒಂದು ದಶಕದಲ್ಲಿ ರೈಲ್ವೆಯಲ್ಲಿ 461,000 ಲಕ್ಷಕ್ಕೂ ಹೆಚ್ಚು ಜನರನ್ನು ನೇಮಕ ಮಾಡಿಕೊಳ್ಳಲಾಗಿದೆ. ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದು ನಿರಂತರ ಪ್ರಕ್ರಿಯೆಯಾಗಿದೆ ಎಂದು ರೈಲ್ವೆ ಸಚಿವ ಪಿಯೂಷ್ ಗೋಯಲ್ ಬುಧವಾರ ಹೇಳಿದ್ದಾರೆ.
ರಜೆ ಮೀಸಲು ಮತ್ತು ತರಬೇತಿ ಮೀಸಲು ಸೇರಿದಂತೆ ವಿವಿಧ ಅಂಶಗಳನ್ನು ಗಣನೆಗೆ ತೆಗೆದುಕೊಂಡ ನಂತರ ಕೇಡರ್ ಬಲವನ್ನು ನಿರ್ಧರಿಸಲಾಗುತ್ತದೆ.
1991ರಲ್ಲಿ ರೇಲ್ವೆ ಇಲಾಖೆಯಲ್ಲಿ ಉದ್ಯೋಗಿಗಳ ಸಂಖ್ಯೆ 16,54,985 ಹಾಗು 2019ರಲ್ಲಿ 12,48,101 ರಷ್ಟು ಉದ್ಯೋಗಿಗಳಿದ್ದರು ಎಂದು ಹೇಳಿರುವ ಗೋಯಲ್ ಆದಾಗ್ಯೂ, ಇದು ರೈಲ್ವೆಯ ಸೇವೆಯ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದು ತಿಳಿಸಿದ್ದಾರೆ.

ಆರ್‌ಆರ್‌ಬಿ, ಆರ್‌ಆರ್‌ಸಿ

ಆರ್‌ಆರ್‌ಬಿ, ಆರ್‌ಆರ್‌ಸಿ

ರೈಲ್ವೆ ನೇಮಕಾತಿ ಮಂಡಳಿ(ಆರ್‌ಆರ್‌ಬಿ) ಮತ್ತು ರೈಲ್ವೆ ನೇಮಕಾತಿ ಕೋಶಗಳ(ಆರ್‌ಆರ್‌ಸಿ) ಮೂಲಕ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಲಿಖಿತ ಉತ್ತರದಲ್ಲಿ ನೀಡಲಾದ ಮಾಹಿತಿಯ ಪ್ರಕಾರ, ಜೂನ್ 1, 2019 ರ ಹೊತ್ತಿಗೆ ರೈಲ್ವೆಯಲ್ಲಿ ಎ, ಬಿ, ಸಿ ಮತ್ತು ಹಿಂದಿನ ಡಿ ವಿಭಾಗಗಳಲ್ಲಿ 2,98,574 ಹುದ್ದೆಗಳು ಖಾಲಿ ಇದ್ದವು.

ಉದ್ಯೋಗ ಅಧಿಸೂಚನೆ

ಉದ್ಯೋಗ ಅಧಿಸೂಚನೆ

ಪ್ರಸ್ತುತ 2,94,420 ಉದ್ಯೋಗಿಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ.
1,51,843 ಹುದ್ದೆಗಳಿಗೆ ಪರೀಕ್ಷೆಗಳು ನಡೆದಿವೆ ಮತ್ತು 2019-20ರಲ್ಲಿ 1,42,577 ಹುದ್ದೆಗಳಿಗೆ ಪರೀಕ್ಷೆ ನಡೆಯಲಿದೆ. ಇದಕ್ಕಾಗಿ 2019 ರಲ್ಲಿ ಉದ್ಯೋಗ ಅಧಿಸೂಚನೆ ಹೊರಡಿಸಲಾಗಿದ್ದು, ಆರ್ಥಿಕವಾಗಿ ದುರ್ಬಲ ವಿಭಾಗ (ಇಡಬ್ಲ್ಯೂಎಸ್) ಕೋಟಾವನ್ನು ಗಣನೆಗೆ ತೆಗೆದುಕೊಂಡಿದೆ.

English summary

Indian Railways recruitment process, to fill up 294,000 vacancies: Goyal tells LS

More than 298,000 positions were vacant at Railways as on June 1 this year and recruitment process is going on for over 294,000 employees, according to the government.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X