ಪಿಎಂ ಶ್ರಮಯೋಗಿ ಮಾನ್ ಧನ್ ಯೋಜನೆಯಡಿ 3000 ಪಿಂಚಣಿಗಾಗಿ ಯಾರು ಅರ್ಜಿ ಸಲ್ಲಿಸಬಹುದು?

ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಯನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ನಲ್ಲಿ ಘೋಷಣೆ ಮಾಡಿದ್ದರು.

ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಯನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ನಲ್ಲಿ ಘೋಷಣೆ ಮಾಡಿದ್ದರು. ಪಿಎಂ ಶ್ರಮಯೋಗಿ ಮಾನ್ ಧನ್ ಯೋಜನೆಯಡಿ ವಾರ್ಷಿಕ ವಹಿವಾಟು ರೂ. 1.50 ಕೋಟಿಯಿರುವ ಅಂಗಡಿ ಮಾಲೀಕರಿಗೆ ಪಿಂಚಣಿ ನೀಡಲಾಗುವುದು ಎಂದು ಬುಧವಾರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಮಾಹಿತಿ ನೀಡಿದ್ದಾರೆ.

ಪಿಎಂ ಶ್ರಮಯೋಗಿ ಮಾನ್ ಧನ್ ಯೋಜನೆಯಡಿ ಯಾರು ಅರ್ಜಿ ಸಲ್ಲಿಸಬಹುದು?

ಈ ಯೋಜನೆ ಪ್ರಕಾರ, ಆದಾಯ ತೆರಿಗೆ ಪಾವತಿ ಮಾಡುವ ಅಂಗಡಿ ಮಾಲೀಕರಿಗೆ ಈ ಯೋಜನೆ ಲಾಭ ಸಿಗುವುದಿಲ್ಲ. ಇಂತಹ ಗ್ರಾಹಕರು ಪಿಂಚಣಿಗಾಗಿ ಅರ್ಜಿ ಸಲ್ಲಿಸುವಂತಿಲ್ಲ.
ಪಿಎಂ ಶ್ರಮಯೋಗಿ ಮಾನ್ ಧನ್ ಯೋಜನೆಯಡಿ ಚಿಲ್ಲರೆ ವ್ಯಾಪಾರಿಗಳು, ಅಂಗಡಿಯವರು ಮತ್ತು ಸ್ವಯಂ ಉದ್ಯೋಗಿಗಳಿಗೆ 60 ವರ್ಷದ ನಂತರ ತಿಂಗಳಿಗೆ ರೂ. 3000 ಸಿಗಲಿದೆ. ಜಿಎಸ್ಟಿಎನ್ ನೋಂದಾಯಿತ ಮತ್ತು ವಾರ್ಷಿಕವಾಗಿ ರೂ. 1.50 ಕೋಟಿಗಿಂತ ಕಡಿಮೆ ವಹಿವಾಟು ಹೊಂದಿರುವ ಅಂಗಡಿಯವರು, ಚಿಲ್ಲರೆ ವ್ಯಾಪಾರಿ ಮತ್ತು ಸ್ವಯಂ ಉದ್ಯೋಗಿ ಈ ಯೋಜನೆ ಲಾಭ ಪಡೆಯಲಿದ್ದಾರೆಂದು ಪಿಯೂಷ್ ಗೋಯಲ್ ಹೇಳಿದ್ದಾರೆ.
18-40 ವರ್ಷ ವಯೋಮಿತಿಯವರು ಈ ಯೋಜನೆಗಾಗಿ ಅರ್ಜಿ ಸಲ್ಲಿಸಬಹುದು. ಸಾರ್ವಜನಿಕ ಸೇವಾ ಕೇಂದ್ರದಲ್ಲಿ ಹೆಸರು ನೋಂದಾಯಿಸಬೇಕು. ಈ ಯೋಜನೆಯ ಲಾಭಕ್ಕಾಗಿ ಆಧಾರ್ ಹಾಗೂ ಬ್ಯಾಂಕ್ ಖಾತೆ ಮಾಹಿತಿ ನೀಡಿದರೆ ಸಾಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+