ಸಬ್ಸಿಡಿ ರಹಿತ ಅಡುಗೆ ಅನಿಲ (ಎಲ್ಪಿಜಿ) ಸಿಲಿಂಡರ್ ಬೆಲೆ ಅಗಸ್ಟ್ 1ರಿಂದ ಕಡಿಮೆಯಾಗಲಿದೆ ಎಂದು ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಸಂಸ್ಥೆ ಇಂಡಿಯನ್ ಆಯಿಲ್ ಕಾರ್ಪೋರೇಷನ್ (ಐಒಸಿ) ಹೇಳಿದೆ.
ಸಬ್ಸಿಡಿ ರಹಿತ ಅಡುಗೆ ಅನಿಲ (ಎಲ್ಪಿಜಿ) ಸಿಲಿಂಡರ್ ಬೆಲೆ ಅಗಸ್ಟ್ 1ರಿಂದ ಕಡಿಮೆಯಾಗಲಿದೆ ಎಂದು ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಸಂಸ್ಥೆ ಇಂಡಿಯನ್ ಆಯಿಲ್ ಕಾರ್ಪೋರೇಷನ್ (ಐಒಸಿ) ಹೇಳಿದೆ.
ಎಲ್ಪಿಜಿ ಗ್ರಾಹಕರಿಗೆ ಇದು ಸಿಹಿಸುದ್ದಿಯಾಗಿದ್ದು, ಇಂದಿನಿಂದ ಸಬ್ಸಿಡಿ ರಹಿತ ಅಡುಗೆ ಅನಿಲ ಬೆಲೆಯಲ್ಲಿ ಇಳಿಕೆಯಾಗಿದೆ.
ಸಬ್ಸಿಡಿ ರಹಿತ ಎಲ್ಪಿಜಿ ದರ
ಸಬ್ಸಿಡಿ ರಹಿತ ಅಡುಗೆ ಅನಿಲ (ಎಲ್ಪಿಜಿ) ಬೆಲೆಯನ್ನು ಸಿಲಿಂಡರ್ ಗೆ ರೂ. 62.50ಕ್ಕೆ ಕಡಿತಗೊಳಿಸಲಾಗಿದೆ. ಹಿಂದಿನ ತಿಂಗಳು 737.50 ಗಳಿಂದ ರೂ. 637ಕ್ಕೆ ಇಳಿಸಲಾಗಿತ್ತು. ಅಗಸ್ಟ್ ನಲ್ಲಿ ರೂ. 637 ದಿಂದ ರೂ. 574.50ಕ್ಕೆ ಇಳಿಸಲಾಗಿದೆ ಎಂದು ಐಒಸಿ ಬುಧವಾರ ರಾತ್ರಿ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದೆ. ನವದೆಹಲಿಯಲ್ಲಿ ಸಬ್ಸಿಡಿಯೇತರ 14.2 ಕೆಜಿ ಅಡುಗೆ ಅನಿಲ ಸಿಲಿಂಡರ್ ದರ ರೂ. 574. 50 ಇದೆ. ಸಬ್ಸಿಡಿ ರಹಿತ ಎಲ್ಪಿಜಿ ಬೆಲೆಯನ್ನು 2019 ರ ಜುಲೈನಲ್ಲಿ ರೂ. 100.50 ಪ್ರತಿ ಸಿಲಿಂಡರ್‌ಗೆ ಇಳಿಸಲಾಗಿತ್ತು. ಎರಡು ತಿಂಗಳಲ್ಲಿ ಒಟ್ಟು ರೂ. 163.00 ಸಿಲಿಂಡರ್ ಇಳಿಕೆಯಾಗಿರುವುದನ್ನು ಗಮನಿಸಬಹುದು.
ಸಬ್ಸಿಡಿ ಸಹಿತ ಎಲ್ಪಿಜಿ ದರ
ಹಿಂದಿನ ತಿಂಗಳಿನಂತೆ ಸಬ್ಸಿಡಿ ಸಹಿತ ಸಿಲಿಂಡರ್ ಬೆಲೆ ರೂ. 494.35 ಇರಲಿದೆ. ಯಾವುದೆ ಬದಲಾವಣೆ ಕಂಡುಬಂದಿಲ್ಲ. ಬಾಕಿ ಮೊತ್ತವನ್ನು ಪ್ರತಿ ಸಿಲಿಂಡರ್‌ಗೆ ರೂ. 142.35 ನ್ನು ಕೇಂದ್ರ ಸರ್ಕಾರವು ಸಬ್ಸಿಡಿಯಾಗಿ ಭರಿಸಲಿದೆ. ಎಲ್ಪಿಜಿ ಸಿಲಿಂಡರ್ ತುಂಬಿದ ನಂತರ ಗ್ರಾಹಕರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗಲಿದೆ. ಸಬ್ಸಿಡಿ ಸಹಿತ ಸಿಲಿಂಡರ್ ಗಳ ಬೆಲೆಯನ್ನು ಯಥಾ ಸ್ಥಿತಿಯಲ್ಲಿ ಮುಂದುವರೆಸಲಾಗಿದೆ.
ಹೊಸ ದರ ಜಾರಿ
ಅಡುಗೆ ಅನಿಲ (ಎಲ್ಪಿಜಿ) ಸಿಲಿಂಡರ್ ಮೇಲಿನ ಪರಿಷ್ಕೃತ ದರ ಅಗಸ್ಟ್ 1 ರಿಂದಲೇ ಜಾರಿಯಾಗಲಿದೆ. ಕಳೆದ ಮೇ ಮತ್ತು ಏಪ್ರಿಲ್ ತಿಂಗಳಲ್ಲಿ ಸಿಲಿಂಡರ್ ಬೆಲೆಯನ್ನು ಏರಿಕೆ ಮಾಡಲಾಗಿತ್ತು. ಆದರೆ ಸಬ್ಸಿಡಿ ರಹಿತ ಎಲ್ಪಿಜಿ ಬೆಲೆಯನ್ನು ಕಳೆದೆರಡು ತಿಂಗಳಿನಿಂದ ಭಾರೀ ಇಳಿಸಲಾಗಿದೆ.
ಬೆಲೆ ಇಳಿಕೆಗೆ ಕಾರಣ
ಅಂತರರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲದ ಬೆಲೆ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಎಲ್ಪಿಜಿ ಬೆಲೆ ಇಳಿಕೆ ಕಂಡಿದೆ. ಸಬ್ಸಿಡಿ ರಹಿತ ಎಲ್ಪಿಜಿ ದರ ಪ್ರತಿ ಸಿಲಿಂಡರ್ ಗೆ ರೂ. 62.50 ಇಳಿಕೆಯಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಆಧರಿಸಿ ದೇಶೀ ಮಾರುಕಟ್ಟೆಯಲ್ಲಿ ಬೆಲೆ ಏರಿಳಿತಕ್ಕೆ ಒಳಗಾಗುತ್ತದೆ. ಒಟ್ಟಿನಲ್ಲಿ ಜಾಗತಿಕ ಮಟ್ಟದಲ್ಲಿ ಕಚ್ಚಾತೈಲದ ಬೆಲೆ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಸಬ್ಸಿಡಿ ರಹಿತ ಅಡುಗೆ ಅನಿಲ ದರದಲ್ಲಿ ಇಳಿಕೆಯಾಗಿದೆ.
ಪ್ರತಿವರ್ಷ 12 ಸಿಲಿಂಡರ್
ದೇಶದ ಕುಟುಂಬಗಳು ಪ್ರತಿವರ್ಷ 12 ಸಬ್ಸಿಡಿ ಸಹಿತ ಸಿಲಿಂಡರ್ ಗಳನ್ನು ವಿಪಡೆಯಬಹುದಾಗಿದೆ. ಇದಕ್ಕಿಂತ ಹೆಚ್ಚಿನ ಸಿಲಿಂಡರ್ ಗಳನ್ನು ಸಬ್ಸಿಡಿ ರಹಿತ ಖರೀದಿಸಬೇಕಾಗುತ್ತದೆ. ಸಬ್ಸಿಡಿ ಮೊತ್ತವನ್ನು ಗ್ರಾಹಕರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ.
More From GoodReturns

Ugadi 2026: ಯುಗಾದಿ ನಂತರ ಈ ರಾಶಿಯವರಿಗೆ ಹಣವೋ ಹಣ; ನೀವೂ ಇದ್ದೀರಾ ನೋಡಿ

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!



Click it and Unblock the Notifications