For Quick Alerts
ALLOW NOTIFICATIONS  
For Daily Alerts

ಗುಡ್ ನ್ಯೂಸ್! ಜಿಎಸ್ಟಿ ಸಲ್ಲಿಕೆಗೆ ಗಡುವು ವಿಸ್ತರಣೆ

ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವಾರ್ಷಿಕ ರಿಟರ್ನ್ಸ್ ಸಲ್ಲಿಸುವ ಕೊನೆಯ ದಿನಾಂಕವನ್ನು ನವೆಂಬರ್ 30ರವರೆಗೆ ಮೂರು ತಿಂಗಳವರೆಗೆ ವಿಸ್ತರಿಸಲಾಗಿದೆ.

|

ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವಾರ್ಷಿಕ ರಿಟರ್ನ್ಸ್ ಸಲ್ಲಿಸುವ ಕೊನೆಯ ದಿನಾಂಕವನ್ನು ನವೆಂಬರ್ 30ರವರೆಗೆ ಮೂರು ತಿಂಗಳವರೆಗೆ ವಿಸ್ತರಿಸಲಾಗಿದೆ. ಐಟಿಆರ್ ಸಲ್ಲಿಸುವಾಗ ಎದುರಾದ ತಾಂತ್ರಿಕ ಸಮಸ್ಯೆ, ಗೊಂದಲಗಳಿಂದ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ತೆರಿಗೆದಾರರಿಗೆ ಸಹಾಯವಾಗಲಿ ಎಂಬ ಉದ್ದೇಶದಿಂದ ಅವಧಿ ವಿಸ್ತರಿಸಲಾಗಿದೆ ಎಂದು ಹಣಕಾಸು ಸಚಿವಾಲಯ ಸೋಮವಾರ ತಿಳಿಸಿದೆ.

 

ಗುಡ್ ನ್ಯೂಸ್! ಜಿಎಸ್ಟಿ ಸಲ್ಲಿಕೆಗೆ ಗಡುವು ವಿಸ್ತರಣೆ

ಈ ಹಿಂದೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಐಟಿ ರಿಟರ್ನ್ಸ್‌ ಸಲ್ಲಿಕೆಗೆ 2019 ಆಗಸ್ಟ್‌ 31ರವರೆಗೆ ಗಡುವು ನೀಡಲಾಗಿತ್ತು. ಈಗ ಮತ್ತೊಮ್ಮೆ ಅವಧಿಯನ್ನು ವಿಸ್ತರಿಸಲಾಗಿದೆ.
"2017-18ರ ಹಣಕಾಸು ವರ್ಷಕ್ಕೆ ಫಾರ್ಮ್ ಜಿಎಸ್ಟಿಆರ್ -9/ಜಿಎಸ್ಟಿಆರ್ -9ಎ ಮತ್ತು ಜಿಎಸ್ಟಿಆರ್ -9ಸಿ ಫಾರ್ಮ್ ನಲ್ಲಿ ವಾರ್ಷಿಕ ಆದಾಯವನ್ನು ನೀಡುವ ಕೊನೆಯ ದಿನಾಂಕವನ್ನು ಆಗಸ್ಟ್ 31, 2019 ರಿಂದ ನವೆಂಬರ್ ವರೆಗೆ ವಿಸ್ತರಿಸಲಾಗಿದೆ ಎಂದು ಕೇಂದ್ರ ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿ (ಸಿಬಿಐಸಿ) ಪ್ರಕಟಣೆಯಲ್ಲಿ ತಿಳಿಸಿದೆ.
ಜಿಎಸ್ಟಿಆರ್-9 ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಅಡಿಯಲ್ಲಿ ನೋಂದಾಯಿಸಲ್ಪಟ್ಟ ತೆರಿಗೆದಾರರಿಂದ ವಾರ್ಷಿಕವಾಗಿ ಸಲ್ಲಿಸಬೇಕಾದ ವಾರ್ಷಿಕ ರಿಟರ್ನ್ ಆಗಿದೆ. ಇದು ವಿಭಿನ್ನ ತೆರಿಗೆ ಮುಖ್ಯಸ್ಥರ ಅಡಿಯಲ್ಲಿ ಮಾಡಿದ ಅಥವಾ ಸ್ವೀಕರಿಸಿದ ಬಾಹ್ಯ ಮತ್ತು ಆಂತರಿಕ ಸರಬರಾಜುಗಳ ವಿವರಗಳನ್ನು ಒಳಗೊಂಡಿದೆ.

ಆದಾಯ ತೆರಿಗೆ ರಿಟರ್ನ್ ಸಲ್ಲಿಸುವುದು ಹೇಗೆ? ಸ್ಟೆಪ್ ಬೈ ಸ್ಟೆಪ್ ಮಾಹಿತಿ ಇಲ್ಲಿದೆಆದಾಯ ತೆರಿಗೆ ರಿಟರ್ನ್ ಸಲ್ಲಿಸುವುದು ಹೇಗೆ? ಸ್ಟೆಪ್ ಬೈ ಸ್ಟೆಪ್ ಮಾಹಿತಿ ಇಲ್ಲಿದೆ

English summary

Deadline to file GST annual returns extended till Nov 30

The last date for filing annual GST returns has been extended by three months to November 30.
Story first published: Tuesday, August 27, 2019, 8:50 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X