ಕಬ್ಬು ಬೆಳೆಗಾರರಿಗೆ ಸಿಹಿಸುದ್ದಿ!
ಕೇಂದ್ರ ಸರ್ಕಾರವು, ಪೆಟ್ರೋಲ್ ಮಿಶ್ರಣಕ್ಕಾಗಿ ಬಳಸುವ ಕಬ್ಬಿನಿಂದ ಹೊರತೆಗೆಯಲಾದ ಎಥೆನಾಲ್ ಬೆಲೆಯನ್ನು ಪ್ರತಿ ಲೀಟರ್‌ಗೆ ರೂ. 1.84 ಏರಿಸಿದೆ.
ಕೇಂದ್ರ ಸರ್ಕಾರವು, ಪೆಟ್ರೋಲ್ ಮಿಶ್ರಣಕ್ಕಾಗಿ ಬಳಸುವ ಕಬ್ಬಿನಿಂದ ಹೊರತೆಗೆಯಲಾದ ಎಥೆನಾಲ್ ಬೆಲೆಯನ್ನು ಪ್ರತಿ ಲೀಟರ್‌ಗೆ ರೂ. 1.84 ಏರಿಸಿದೆ.

ಎಥೆನಾಲ್ ಖರೀದಿ ದರ ಏರಿಕೆ ಮಾಡಿರುವ ಕೇಂದ್ರ ಸರ್ಕಾರ, ಎಲ್ಲ ಡಿಸ್ಟಿಲರಿಗಳು ಎಥೆನಾಲ್ ಉತ್ಪಾದಿಸಿ ಆದಾಯ ಗಳಿಸಬಹುದು. ಎಥೆನಾಲ್ ಬೆಲೆ ಏರಿಸಿರುವುದರಿಂದ ರೈತರ ಮತ್ತು ಸಕ್ಕರೆ ಕಾರ್ಖಾನೆಗಳ ಆದಾಯ ವೃದ್ಧಿಸುವ ಸಾಧ್ಯತೆ ಇದೆ.
ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ಸಕ್ಕರೆ ಕಾರ್ಖಾನೆಗಳಿಂದ, ಪೆಟ್ರೋಲ್ ಮಿಶ್ರಣಕ್ಕಾಗಿ ಡಿಸೆಂಬರ್ 1 ರಿಂದ ಹೆಚ್ಚಿನ ದರದಲ್ಲಿ ಎಥೆನಾಲ್ ಖರೀದಿಸಲಿವೆ ಎಂದು ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.
2019 ರ ಡಿಸೆಂಬರ್ 1 ರಿಂದ ಪರಿಷ್ಕೃತ ದರ ಜಾರಿಯಾಗಲಿದ್ದು, ರೈತರ ಆದಾಯ ಹೆಚ್ಚಾಗುವ ನಿರೀಕ್ಷೆ ಇದೆ. ಸಕ್ಕರೆ ಕಾರ್ಖಾನೆಗಳು ಎಥೆನಾಲ್ ಉತ್ಪಾದನೆಯ ಮೂಲಕ ಆದಾಯದ ವೃದ್ಧಿಗೆ ಮುಂದಾಗುತ್ತಿದ್ದು, ದೊಡ್ಡಮಟ್ಟದಲ್ಲಿ ಹೂಡಿಕೆ ಮಾಡಲಾಗುತ್ತಿದೆ.
ತೈಲ ಕಂಪನಿಗಳು ಪೆಟ್ರೋಲ್ ಜೊತೆಗೆ ಶೇ. 10 ರಷ್ಟು ಎಥೆನಾಲ್ ಮಿಶ್ರಣ ಮಾಡಬಹುದಾಗಿದ್ದು, ಸರ್ಕಾರ ಎಥೆನಾಲ್ ಬ್ಲೆಂಡೆಡ್ ಪೆಟ್ರೋಲ್ ಎಂಬ ಪ್ರತ್ಯೇಕ ಯೋಜನೆ ರೂಪಿಸಿದೆ. ಕಬ್ಬಿನ ರಸ, ಸಕ್ಕರೆ ಮೂಲಕ ಉತ್ಪಾದಿಸಲ್ಪಡುವ ಎಥೆನಾಲ್ ದರವನ್ನು ಪ್ರತಿ ಲೀಟರ್ ಗೆ ರೂ. 59.48 ನಿಗದಿಪಡಿಸಲಾಗಿದೆ. ಎಥೆನಾಲ್ ಮಿಶ್ರಣದ ಪೆಟ್ರೋಲ್ ಬಳಕೆಯಿಂದ ವಾರ್ಷಿಕ ತೈಲ ಆಮದಿನಲ್ಲಿ ಸುಮಾರು ರೂ. 7000 ಕೋಟಿ ಉಳಿತಾಯ ನಿರೀಕ್ಷೆ ಮಾಡಲಾಗಿದೆ.


Click it and Unblock the Notifications