For Quick Alerts
ALLOW NOTIFICATIONS  
For Daily Alerts

ಎಸ್‌ಸಿ, ಎಸ್‌ಟಿ ಉದ್ದಿಮೆದಾರರಿಗೆ ಬಿ.ಎಸ್.ವೈ ಬಂಪರ್ ಕೊಡುಗೆ

ಕರ್ನಾಟಕ ಸರ್ಕಾರವು ಹೊಸ ಕೈಗಾರಿಕಾ ನೀತಿ ರೂಪಿಸುತ್ತಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ದಿಮೆದಾರರಿಗೆ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ.

|

ಕರ್ನಾಟಕ ಸರ್ಕಾರವು ಹೊಸ ಕೈಗಾರಿಕಾ ನೀತಿ ರೂಪಿಸುತ್ತಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ದಿಮೆದಾರರಿಗೆ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉದ್ದಿಮೆಶೀಲರಿಗೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ದೊರೆಯುವ ಸವಲತ್ತುಗಳ ಕಾರ್ಯಕ್ರಮದಲ್ಲಿ ಮಾತನಾಡಿ, ಕೈಗಾರಿಕೆ ನಿವೇಶನಕ್ಕೆ ಶೇಕಡಾ 75 ರಷ್ಟು ರಿಯಾಯಿತಿ ನೀಡಲು ಸರ್ಕಾರ ಮುಂದಾಗಿದೆ ಎಂದರು.

ಶೇಕಡಾ 75ರಷ್ಟು ರಿಯಾಯಿತಿ

ಶೇಕಡಾ 75ರಷ್ಟು ರಿಯಾಯಿತಿ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ದಿಮೆಶೀಲರಿಗೆ ವಿವಿಧ ಮಂಡಳಿ, ನಿಗಮಗಳಿಂದ ಶೇಕಡಾ 50ರಷ್ಟು ರಿಯಾಯಿತಿ ದರದಲ್ಲಿ ಹಂಚಿಕೆ ಮಾಡಲಾಗುವ ಕೈಗಾರಿಕಾ ನಿವೇಶನ, ಶೆಡ್, ಫ್ಲಾಟ್ ಗಳನ್ನು ಇನ್ನು ಮುಂದೆ ಶೇ. 75 ರಷ್ಟು ರಿಯಾಯಿತಿಯಲ್ಲಿ ನೀಡಲಾಗುವುದು ಎಂದು ಯಡಿಯೂರಪ್ಪ ಹೇಳಿದ್ದಾರೆ.

ನಿವೇಶನವೇ ಖಾತರಿ

ನಿವೇಶನವೇ ಖಾತರಿ

ಬ್ಯಾಂಕುಗಳು, ಸಹಕಾರಿ ಸಂಸ್ಥೆಗಳು ಎನ್ಪಿಎ ನೆಪವೊಡ್ಡಿ ಬಡ್ಡಿ ಸಾಲ ನೀಡಲು ತೊಂದರೆ ಕೊಡುತ್ತಿದ್ದಾರೆ. ಈ ಬಗ್ಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದ್ದು, ಕೈಗಾರಿಕೋದ್ಯಮಿಗಳಿಗೆ ಸಾಲ ನೀಡುವ ಸಂದರ್ಭದಲ್ಲಿ ಕೈಗಾರಿಕಾ ನಿವೇಶನವನ್ನು ಜಾಮೀನು ಎಂದು ಪರಿಗಣಿಸುವಂತೆ ಸೂಚನೆ ನೀಡಲಾಗಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಾಪ್ಟ್ ಸ್ಪೀಡ್ ಕ್ಯಾಪಿಟಲ್

ಸಾಪ್ಟ್ ಸ್ಪೀಡ್ ಕ್ಯಾಪಿಟಲ್

ಹಣಕಾಸು ಸಂಸ್ಥೆಗಳಿಂದ ಸಾಲ ಪಡೆದು ಹೊಸ ಕೈಗಾರಿಕೆ ಸ್ಥಾಪಿಸುವ ಪ್ರಾಜೆಕ್ಟ್ ವೆಚ್ಚಗಳಿಗೆ ಆರಂಭಿಕ ಬಂಡವಾಳ ಹೂಡಿಕೆಯ ಶೇಕಡಾ 50ರಷ್ಟು ಬಡ್ಡಿರಹಿತ ಸಾಪ್ಟ್ ಸ್ಪೀಡ್ ಕ್ಯಾಪಿಟಲ್ ರೂಪದಲ್ಲಿ ಹಣಕಾಸು ಸಹಾಯ ಮಾಡಲಾಗುವುದು ಎಂದಿದ್ದಾರೆ.

English summary

BSY Contribution to SC, ST Entrepreneurs, site guarantee for loan

BSY Bumper Contribution to SC, ST Entrepreneurs and industrial site guarantee for loan.
Story first published: Friday, September 20, 2019, 12:37 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X