ನವದೆಹಲಿ ರೈಲು ನಿಲ್ದಾಣದಲ್ಲಿ ವ್ಯಕ್ತಿಯೊಬ್ಬನಿಂದ 3.26 ಕೋಟಿ ಮೌಲ್ಯದ ಆರು ಕೇಜಿಗೂ ಹೆಚ್ಚಿನ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದು ಸೋಮವಾರ ಅಧಿಕಾರಿಗಳು ಹೇಳಿದ್ದಾರೆ. ಈ ಸಂಬಂಧವಾಗಿ ಇಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಕೋಲ್ಕತ್ತಾದ ಹೌರಾದಿಂದ ರಾಜಧಾನಿ ಎಕ್ಸ್ ಪ್ರೆಸ್ ಮೂಲಕ ಬಂದ ವ್ಯಕ್ತಿಯನ್ನು ನವದೆಹಲಿಯ ನಿಲ್ದಾಣದಲ್ಲಿ 19.11.2020ರಂದು ಕಸ್ಟಮ್ಸ್ ಅಧಿಕಾರಿಗಳಿಂದ ಪರಿಶೀಲನೆ ನಡೆಸಲಾಯಿತು. ಆ ವ್ಯಕ್ತಿಯನ್ನು ಪರಿಶೀಲನೆ ಮಾಡಿದ ಮೇಲೆ 3.26 ಕೋಟಿ ಮೌಲ್ಯದ 6.3 ಕೇಜಿ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ವಶಕ್ಕೆ ಪಡೆದ ಚಿನ್ನವು ಬಿಸ್ಕತ್ ರೂಪದಲ್ಲಿ ಇತ್ತು. ಅದನ್ನು ತುಂಡುಗಳಾಗಿ ಮಾಡಲಾಗಿತ್ತು. ಈಶಾನ್ಯದ ಗಡಿಯಿಂದ ಚಿನ್ನವನ್ನು ದೇಶದೊಳಗೆ ಕಳ್ಳಸಾಗಣೆ ಮಾಡಲಾಗಿದೆ ಎಂದು ಅನುಮಾನ ವ್ಯಕ್ತವಾಗಿದೆ. ಆ ಚಿನ್ನ ಮೂಲತಃ ವಿದೇಶೀ ಮೂಲದ್ದು ಎನ್ನಲಾಗಿದೆ.

ಮಾರ್ಚ್ ಹಾಗೂ ಆ ನಂತರದಲ್ಲಿ ಹದಿನೈದು ಬಾರಿ ಎರಡರಿಂದ ಆರು ಕೇಜಿ ಚಿನ್ನವನ್ನು ಕಳ್ಳಸಾಗಣೆ ಮಾಡಿದ್ದಾಗಿ ಬಂಧಿತ ಒಪ್ಪಿಕೊಂಡಿದ್ದಾನೆ. ಹಾಗೆ ಕಳ್ಳಸಾಗಣೆ ಆಗಿರುವ ಚಿನ್ನದ ತೂಕ 60 Kg ಎನ್ನಲಾಗಿದ್ದು, ಮೌಲ್ಯ 30 ಕೋಟಿ ರುಪಾಯಿ ಎಂಬ ಅಂದಾಜಿದೆ (ಸರಾಸರಿ ಮೌಲ್ಯದ ಅಂದಾಜು). ಬಂಧಿತನನ್ನು ಹದಿನಾಲ್ಕು ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
More From GoodReturns

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಓಂ ಪವರ್ ಟ್ರಾನ್ಸ್ಮಿಷನ್ ಐಪಿಒ: ಹೂಡಿಕೆದಾರರ ಪಾಲಿಗೆ ಲಾಭದಾಯಕವೇ?

ಆರ್ಬಿಐ ನಿರ್ಧಾರದ ನಂತರ ನಿಮ್ಮ ಹಣಕ್ಕೆ ಯಾವುದು ಬೆಸ್ಟ್?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ



Click it and Unblock the Notifications