ಬಹುನಿರೀಕ್ಷೆಯ ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ (Bengaluru 2nd Airport) ಯಾವಾಗ ನಿರ್ಮಾಣವಾಗುತ್ತೆ ಎಂಬ ಪ್ರಶ್ನೆ ಎಲ್ಲರಿಗೂ ಇದೆ. ಆದರೆ ಕೆಲವು ನೀತಿ-ನಿಯಮಗಳಿಂದ ಎರಡನೇ ವಿಮಾನ ನಿಲ್ದಾಣ ನಿರ್ಮಾಣವಾಗೋಕೆ ಇನ್ನೂ ಐದು ವರ್ಷಗಳು ಬೇಕಾಗುತ್ತೆ ಎನ್ನಲಾಗುತ್ತಿದೆ. ಆದ್ರೆ ನಿರ್ಮಾಣದ ಪೂರ್ವ ಸಿದ್ಧತಾ ಕಾರ್ಯಗಳು ಈಗಾಗಲೇ ನಡೆಯುತ್ತಿದೆ. ಈಗಾಗಲೇ ಸರ್ಕಾರ ಮೂರು ಸ್ಥಳಗಳನ್ನು ಗುರುತಿಸಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ (AAI) ಕಳುಹಿಸಿದೆ. ಆದ್ರೆ ಎಎಐ ಎಲ್ಲಾ ನಿಯಮಗಳನ್ನು, ಸುರಕ್ಷತಾ ಕ್ರಮಗಳನ್ನು ನೋಡಿಕೊಂಡು ಯಾವುದನ್ನು ಫೈನಲ್ ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಇದೀಗ ಮತ್ತೊಂದು ಅಚ್ಚರಿಯ ವಿಷಯ ಹೊರಬಿದ್ದಿದೆ ನೋಡಿ.

ಹಲವು ವಿಷಯಗಳಲ್ಲಿ ಬೆಂಗಳೂರು ನಗರ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ಈ ಮಧ್ಯೆ ಎರಡನೇ ವಿಮಾನ ನಿಲ್ದಾಣಕ್ಕೂ ಬೆಂಗಳೂರು ಸಜ್ಜಾಗುತ್ತಿದೆ. ಆದ್ರೆ ಒಂದಲ್ಲಾ ಒಂದು ಅಡ್ಡಿ ಎದುರಾಗುತ್ತಲೇ ಇದೆ. ಸರ್ಕಾರಕ್ಕೂ ಕೂಡಾ ದಿನ ಹೋದಂತೆ ಒತ್ತಡವೂ ಹೆಚ್ಚಾಗುತ್ತಿದೆ. ಅಂತೂ 2033ರ ವೇಳೆ ಬೆಂಗಳೂರಿಗೆ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣವಾಗೋದು ಪಕ್ಕಾ ಎಂದು ಸರ್ಕಾರ ಈಗಾಗಲೇ ಹೇಳಿದೆ. ಅಲ್ಲದೇ ಪೂರ್ವ ಸಿದ್ಧತಾ ಕಾರ್ಯಗಳನ್ನು ಸಹ ಆರಂಭಿಸಿದೆ.
ಎರಡನೇ ವಿಮಾನ ನಿಲ್ದಾಣದ ಬಗ್ಗೆ ಅಚ್ಚರಿಯ ಹೇಳಿಕೆ!
ವಿಧಾನ ಪರಿಷತ್‌ನಲ್ಲಿ ಮಾತನಾಡಿದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಮಾತನಾಡಿದ್ದು, ಬೆಂಗಳೂರಿನಲ್ಲಿ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣವಾಗಬೇಕೆಂದರೆ 4,500 ಎಕರೆ ಭೂಮಿಯ ಅವಶ್ಯಕತೆ ಇದೆ ಎಂದು ಹೇಳಿದ್ದಾರೆ.
ಈಗಾಗಲೇ ಸರ್ಕಾರ ಕೂಡಾ ಕೆಲವು ಕ್ರಮಗಳನ್ನು ಆಧರಿಸಿ ಮೂರು ಸ್ಥಳಗಳನ್ನು ಗುರುತಿಸಿ, ವರದಿ ಸಲ್ಲಿಸುವಂತೆ ವಿಮಾನಯಾನ ಪ್ರಾಧಿಕಾರಕ್ಕೆ ನೀಡಿದೆ. ಆ ಪ್ರಕಾರ ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ಸೋಮನಹಳ್ಳಿ ಮತ್ತು ಚೂಡಹಳ್ಳಿ, ಮತ್ತೊಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಸಮೀಪದ ಗುಡೆಮಾರನಹಳ್ಳಿ ಪ್ರದೇಶಗಳನ್ನು ಗುರುತಿಸಲಾಗಿದೆ ಆದ್ರೆ ಇದರಲ್ಲಿ ಯಾವುದನ್ನು ಅಂತಿಮ ಮಾಡಲಿದ್ದಾರೆ ಎಂದು ಕಾದು ನೋಡಬೇಕಿದೆ.
ಈಗಾಗಲೇ ನಾಗರಿಕ ವಿಮಾನಯಾನ ಸಚಿವಾಲಯದ ಅಧಿಕಾರಿಗಳು, ಸರ್ಕಾರ ಗುರುತಿಸಿದ ಸ್ಥಳಗಳಿಗೆ ಭೇಟಿ ನೀಡಿ ಪೂರ್ವ ಕಾರ್ಯಸಾಧ್ಯತಾ ವರದಿ, ಸಮಸ್ಯೆಗಳ ಬಗ್ಗೆ ವರದಿ ನೀಡಿದ್ದಾರೆ. ಆ ಪ್ರಕಾರ ಸಂಪೂರ್ಣ ಕಾರ್ಯಸಾಧ್ಯತಾ ವರದಿ ತಯಾರಿಸುವ ನಿಟ್ಟಿನಲ್ಲಿ ಸಮಾಲೋಚಕರ ನೇಮಕಕ್ಕೆ ಟೆಂಡರ್ ಕೂಡಾ ಆಹ್ವಾನಿಸಲಾಗಿದೆ.
ಅಡ್ಡಿಯಾದ ವಿಮಾನ ನಿಲ್ದಾಣ!
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣವಾಗಬೇಕೆಂದರೆ "ಬೆಂಗಳೂರು ಇಂಟರ್ನ್ಯಾಷನಲ್ ಏರ್‌ಪೋರ್ಡ್ ಲಿಮಿಟೆಡ್"ನ (BIAL) ಅನುಮತಿ ಬೇಕು. ಅಲ್ಲದೇ ಇದಕ್ಕೆ 2033ರವರೆಗೂ ಕಾಲಾವಕಾಶವಿದೆ.
ಈಗಾಗಲೇ ದೇವನಹಳ್ಳಿ ಸಮೀಪದಲ್ಲಿ ಈಗ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಕಾರ್ಯನಿರ್ವಹಿಸುತ್ತಿದೆ. ಆದ್ದರಿಂದ 2033ರವರೆಗೂ 150 ಕಿ.ಮೀ ಸುತ್ತಮುತ್ತಲಿನ ಪ್ರದೇಶದಲ್ಲಿ ಮತ್ತೊಂದು ವಿಮಾನ ನಿಲ್ದಾಣ ನಿರ್ಮಿಸಬಾರದು ಎಂಬ ಷರತ್ತು ಇದೆ. ಆದ್ದರಿಂದ ಸದ್ಯ ನಿರ್ಮಾಣ ಕಾರ್ಯ ವಿಳಂಬವಾಗುತ್ತಿದೆ ಎಂದಿದ್ದಾರೆ.


Click it and Unblock the Notifications