ತಿರುವನಂತಪುರಂ, ಜುಲೈ 30: ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿಯ ವಿವಿಧ ಗುಡ್ಡಗಾಡು ಪ್ರದೇಶಗಳಲ್ಲಿ ಮಂಗಳವಾರ ಮುಂಜಾನೆ ಕಂಡುಕೇಳರಿಯದ ಭೂಕುಸಿತ ಸಂಭವಿಸಿದ್ದು ಅಲ್ಲಿ ಸಂಭವಿಸಿದ ಸಾವು ನೋವುಗಳನ್ನು ಪ್ರಸ್ತುತ ಲೆಕ್ಕಹಾಕಲು ಸಾಧ್ಯವಾಗುತ್ತಿಲ್ಲ. ಈವರೆಗೆ ಮೂವರು ಮಕ್ಕಳು ಸೇರಿದಂತೆ 41 ಮಂದಿಯ ಮೃತದೇಹ ಪತ್ತೆಯಾಗಿದ್ದು, ನೂರಾರು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಭಾರೀ ಭೂಕುಸಿತದ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ ಸಂಸ್ಥೆಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ. ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳನ್ನು ಪೀಡಿತ ಪ್ರದೇಶಕ್ಕೆ ನಿಯೋಜಿಸಲಾಗಿದೆ.
ತೊಂಡರ್ನಾಡ್ ಗ್ರಾಮದಲ್ಲಿ ವಾಸಿಸುತ್ತಿದ್ದ ನೇಪಾಳಿ ಕುಟುಂಬದ ಒಂದು ವರ್ಷದ ಮಗು ಭೂಕುಸಿತದಲ್ಲಿ ಸಾವನ್ನಪ್ಪಿದೆ ಎಂದು ವಯನಾಡ್ ಜಿಲ್ಲೆಯ ಅಧಿಕಾರಿಗಳು ತಿಳಿಸಿದ್ದಾರೆ. ಎನ್‌ಡಿಆರ್‌ಎಫ್‌ನ ಹೆಚ್ಚುವರಿ ತಂಡ ವಯನಾಡ್‌ಗೆ ತೆರಳುತ್ತಿದೆ. ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಕೆಎಸ್‌ಡಿಎಂಎ) ವಯನಾಡ್‌ಗೆ ತೆರಳಲು ಕಣ್ಣೂರು ರಕ್ಷಣಾ ಭದ್ರತಾ ದಳದ ಎರಡು ತಂಡಗಳಿಗೆ ಸೂಚನೆ ನೀಡಲಾಗಿದೆ.

ಕಾರ್ಯಾಚರಣೆ ಮತ್ತಷ್ಟು ಚುರುಕುಗೊಳಿಸಲಾಗುವುದು, ರಕ್ಷಣಾ ಚಟುವಟಿಕೆಗಳನ್ನು ಮುನ್ನಡೆಸಲು ರಾಜ್ಯದ ಸಚಿವರು ದುರಂತದ ಪ್ರದೇಶಗಳಿಗೆ ತಲುಪಲಿದ್ದಾರೆ ಎಂದು ಮುಖ್ಯಮಂತ್ರಿ ವಿಜಯನ್ ಕಚೇರಿ ಪ್ರಕಟನೆ ತಿಳಿಸಿದೆ."ಫೈರ್ ಅಂಡ್ ರೆಸ್ಕ್ಯೂ, ಸಿವಿಲ್ ಡಿಫೆನ್ಸ್, ಎನ್‌ಡಿಆರ್‌ಎಫ್ ಮತ್ತು ಸ್ಥಳೀಯ ತುರ್ತು ಪ್ರತಿಕ್ರಿಯೆ ತಂಡದ 250 ಸದಸ್ಯರು ವಯನಾಡ್ ಚುರಲ್‌ಮಲಾದಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಎನ್‌ಡಿಆರ್‌ಎಫ್‌ನ ಹೆಚ್ಚುವರಿ ತಂಡವನ್ನು ತಕ್ಷಣವೇ ಸ್ಥಳಕ್ಕೆ ತಲುಪುವಂತೆ ಸೂಚಿಸಲಾಗಿದೆ: ಎಂದು ಸಿಎಂಒ ತಿಳಿಸಿದೆ.
ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ, ಮೋದಿ, "ವಯನಾಡ್‌ನ ಕೆಲವು ಭಾಗಗಳಲ್ಲಿ ಭೂಕುಸಿತದಿಂದ ತೊಂದರೆಗೀಡಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರೆಲ್ಲರ ಜೊತೆ ನಾವಿದ್ದೇವೆ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ. ಎಲ್ಲಾ ಸಂತ್ರಸ್ತರಿಗೆ ಸಹಾಯ ಮಾಡಲು ಪ್ರಸ್ತುತ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಕೇರಳ ಸಿಎಂ ಪಿಣರಾಯಿ ವಿಜಯನ್ ಅವರೊಂದಿಗೆ ಮಾತನಾಡಿದ್ದೇನೆ ಮತ್ತು ಕೇಂದ್ರದಿಂದ ಸಾಧ್ಯವಿರುವ ಎಲ್ಲ ಸಹಾಯ ನೀಡುವ ಭರವಸೆ ನೀಡಿದ್ದೇನೆ ಎಂದು ಅವರು ಹೇಳಿದರು.

ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಕೆಎಸ್‌ಡಿಎಂಎ) ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಎಫ್ ತಂಡಗಳನ್ನು ಪೀಡಿತ ಪ್ರದೇಶಕ್ಕೆ ನಿಯೋಜಿಸಲಾಗಿದೆ, ಹೆಚ್ಚುವರಿ ಎನ್‌ಡಿಆರ್‌ಎಫ್ ತಂಡ ವಯನಾಡ್‌ಗೆ ತೆರಳುತ್ತಿದೆ. ವಯನಾಡ್ ಜಿಲ್ಲೆಯಲ್ಲಿ ಭೂಕುಸಿತ ಮತ್ತು ಇತರ ಮಳೆ ಸಂಬಂಧಿತ ಅನಾಹುತಗಳ ಹಿನ್ನೆಲೆಯಲ್ಲಿ, ಆರೋಗ್ಯ ಇಲಾಖೆ -- ರಾಷ್ಟ್ರೀಯ ಆರೋಗ್ಯ ಮಿಷನ್ - ನಿಯಂತ್ರಣ ಕೊಠಡಿಯನ್ನು ತೆರೆದಿದೆ. ತುರ್ತು ಸಹಾಯದ ಅಗತ್ಯವಿರುವವರು ಈ ಎರಡು ಸಂಖ್ಯೆಗಳ ಮೂಲಕ ಅಧಿಕಾರಿಗಳನ್ನು ಸಂಪರ್ಕಿಸಬಹುದು -- 9656938689 ಮತ್ತು 8086010833 -- ಪ್ರಕಟಣೆ ತಿಳಿಸಿದೆ.
ಕೆಎಸ್‌ಡಿಎಂಎ ಫೇಸ್‌ಬುಕ್ ಪೋಸ್ಟ್‌ನ ಪ್ರಕಾರ, ಕಣ್ಣೂರು ರಕ್ಷಣಾ ಭದ್ರತಾ ದಳದ ಎರಡು ತಂಡಗಳಿಗೆ ರಕ್ಷಣಾ ಕಾರ್ಯಗಳಲ್ಲಿ ಸಹಾಯ ಮಾಡಲು ವಯನಾಡ್‌ಗೆ ತೆರಳಲು ಸೂಚನೆ ನೀಡಲಾಗಿದೆ. ಹಲವಾರು ಕುಟುಂಬಗಳನ್ನು ವಿವಿಧ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ಜಿಲ್ಲೆಯ ಅಧಿಕಾರಿಗಳ ಪ್ರಕಾರ, ಭೂಕುಸಿತದ ಹಿನ್ನೆಲೆಯಲ್ಲಿ ಹಲವಾರು ಕುಟುಂಬಗಳನ್ನು ವಿವಿಧ ಶಿಬಿರಗಳಿಗೆ ಅಥವಾ ಅವರ ಸಂಬಂಧಿಕರ ಮನೆಗಳಿಗೆ ಸ್ಥಳಾಂತರಿಸಲಾಗಿದೆ. ಕಣ್ಣೂರು ರಕ್ಷಣಾ ಡಿಕ್ಯೂರಿಟಿ ಕಾರ್ಪೊರೇಷನ್‌ಗಳ ಎರಡು ತಂಡಗಳಿಗೆ ರಕ್ಷಣಾ ಕಾರ್ಯಗಳಲ್ಲಿ ಸಹಾಯ ಮಾಡಲು ವಯನಾಡ್‌ಗೆ ತೆರಳಲು ಸೂಚನೆ ನೀಡಲಾಗಿದೆ.
ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು, "ವೈಲ್ತಿರಿ, ಕಲ್ಪಟ್ಟಾ, ಮೆಪ್ಪಾಡಿ ಮತ್ತು ಮಾನಂತವಾಡಿ ಆಸ್ಪತ್ರೆಗಳು ಸೇರಿದಂತೆ ಎಲ್ಲಾ ಆಸ್ಪತ್ರೆಗಳು ಸಿದ್ಧವಾಗಿವೆ. ರಾತ್ರಿಯೇ ಎಲ್ಲ ಆರೋಗ್ಯ ಕಾರ್ಯಕರ್ತರು ಸೇವೆಗೆ ಆಗಮಿಸಿದ್ದರು. ವಯನಾಡಿನಲ್ಲಿ ಆರೋಗ್ಯ ಕಾರ್ಯಕರ್ತರ ಹೆಚ್ಚಿನ ತಂಡಗಳನ್ನು ನಿಯೋಜಿಸಲಾಗುವುದು" ಎಂದು ಹೇಳಿದ್ದಾರೆ.


Click it and Unblock the Notifications