For Quick Alerts
ALLOW NOTIFICATIONS  
For Daily Alerts

ಮೇ 28ಕ್ಕೆ ನಡೆಯಲಿದೆ 43ನೇ ಜಿಎಸ್‌ಟಿ ಕೌನ್ಸಿಲ್ ಸಭೆ : ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆ

|

ಮುಂಬರುವ 43ನೇ ಜಿಎಸ್‌ಟಿ ಕೌನ್ಸಿಲ್ ಸಭೆಯು ಮೇ 28ರಂದು ನವದೆಹಲಿಯಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಹಣಕಾಸು ಸಚಿವಾಲಯ ಶನಿವಾರ ಪ್ರಕಟಿಸಿದೆ.

 

ಚಿನ್ನದ ಬೆಲೆ ಮತ್ತಷ್ಟು ಏರಿಕೆ: ಮೇ 15ರ ಬೆಲೆ ಇಲ್ಲಿದೆಚಿನ್ನದ ಬೆಲೆ ಮತ್ತಷ್ಟು ಏರಿಕೆ: ಮೇ 15ರ ಬೆಲೆ ಇಲ್ಲಿದೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಹಣಕಾಸು ರಾಜ್ಯ ಸಚಿವ ಅನುರಾಗ್ ಸಿಂಗ್ ಠಾಕೂರ್ ಜೊತೆಗೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಹಣಕಾಸು ಸಚಿವರು ಮತ್ತು ಕೇಂದ್ರ ಸರ್ಕಾರ ಮತ್ತು ರಾಜ್ಯಗಳ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.

 
ಮೇ 28ಕ್ಕೆ ನಡೆಯಲಿದೆ 43ನೇ ಜಿಎಸ್‌ಟಿ ಕೌನ್ಸಿಲ್ ಸಭೆ !

'' ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಂನ್ ಅವರು ಮೇ 28ರಂದು ಬೆಳಿಗ್ಗೆ 11 ಗಂಟೆ ನವದೆಹಲಿಯಲ್ಲಿ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ 43ನೇ ಜಿಎಸ್‌ಟಿ ಕೌನ್ಸಿಲ್ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ'' ಎಂದು ಹಣಕಾಸು ಸಚಿವಾಲಯ ಟ್ವೀಟ್ ಮಾಡಿದೆ.

ಭಾರತದಲ್ಲಿ ಕೋವಿಡ್-19 ಸಾಂಕ್ರಾಮಿಕದ ಎರಡನೇ ಅಲೆಯ ಮಧ್ಯೆ, ಆರು ತಿಂಗಳಿಗಿಂತ ಹೆಚ್ಚಿನ ಸಮಯದ ನಂತರ ಈ ಸಭೆ ನಡೆಯುತ್ತಿದೆ. ವರದಿಗಳ ಪ್ರಕಾರ, ಆರ್ಥಿಕತೆಯ ಮೇಲೆ ಕೋವಿಡ್-19 ರ ಪರಿಣಾಮ, ಜಿಎಸ್‌ಟಿ ಪರಿಹಾರದ ಕೊರತೆ, ಕೆಲವು ಕೋವಿಡ್-19 ಸಂಬಂಧಿತ ಪರಿಹಾರದ ಮೇಲೆ ಜಿಎಸ್‌ಟಿಯನ್ನು ಸಡಿಲಿಸುವುದು ಸಭೆಯಲ್ಲಿ ಚರ್ಚೆಯಾಗಬಹುದು.

ಲೋಕಸಭೆಯಲ್ಲಿ ಹಣಕಾಸು ಮಸೂದೆ 2021 ರ ಚರ್ಚೆಗೆ ಉತ್ತರಿಸಿದ ಸೀತಾರಾಮನ್, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ತೆರಿಗೆ ವಿಧಿಸುತ್ತವೆ. ಆದಾಗ್ಯೂ, ಕೇಂದ್ರವು ಇಂಧನದ ಮೇಲಿನ ತೆರಿಗೆ ಸಂಗ್ರಹವನ್ನು ರಾಜ್ಯಗಳೊಂದಿಗೆ ಹಂಚಿಕೊಳ್ಳುತ್ತದೆ ಎಂದಿದ್ದಾರೆ.

English summary

43rd GST Council Meet: FM Sitharaman To Chair 43rd Meeting On 28 May

The Ministry Of Finace on saturday announced that the 43rd GST Council meeting will be held on 28 May In New Delhi At 11am
Story first published: Saturday, May 15, 2021, 18:16 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X