For Quick Alerts
ALLOW NOTIFICATIONS  
For Daily Alerts

ಇಂದು 43ನೇ ಜಿಎಸ್‌ಟಿ ಕೌನ್ಸಿಲ್ ಸಭೆ: ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆ

|

43ನೇ ಜಿಎಸ್‌ಟಿ ಕೌನ್ಸಿಲ್ ಸಭೆಯು ಇಂದು (ಮೇ 28) ನವದೆಹಲಿಯಲ್ಲಿ ಬೆಳಿಗ್ಗೆ 11 ಗಂಟೆಗೆ ಪ್ರಾರಂಭಗೊಂಡಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಈ ಸಭೆಯಲ್ಲಿ ಹಣಕಾಸು ರಾಜ್ಯ ಸಚಿವ ಅನುರಾಗ್ ಸಿಂಗ್ ಠಾಕೂರ್ ಜೊತೆಗೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಹಣಕಾಸು ಸಚಿವರು ಮತ್ತು ಕೇಂದ್ರ ಸರ್ಕಾರ ಮತ್ತು ರಾಜ್ಯಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದಾರೆ.

 
ಇಂದು 43ನೇ ಜಿಎಸ್‌ಟಿ ಕೌನ್ಸಿಲ್ ಸಭೆ: ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆ

ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ನಡೆಯುತ್ತಿರುವ ಈ ಸಭೆಯಲ್ಲಿ ಆರ್ಥಿಕತೆಯ ಮೇಲೆ ಕೋವಿಡ್-19 ರ ಪರಿಣಾಮ, ಜಿಎಸ್‌ಟಿ ಪರಿಹಾರದ ಕೊರತೆ, ಕೆಲವು ಕೋವಿಡ್-19 ಸಂಬಂಧಿತ ಪರಿಹಾರದ ಮೇಲೆ ಜಿಎಸ್‌ಟಿಯನ್ನು ಸಡಿಲಿಸುವುದು ಸಭೆಯಲ್ಲಿ ಚರ್ಚೆಯಾಗಬಹುದು. ಜೊತೆಗೆ ಪ್ರಮುಖ ಕ್ಷೇತ್ರಗಳಲ್ಲಿನ ತೆರಿಗೆ ಕುಸಿತದ ಕುರಿತಾದ ವಿಷಯವನ್ನು ಕೈಗೆತ್ತಿಕೊಳ್ಳಬಹುದು.

 

ಭಾರತದಲ್ಲಿ ಕೋವಿಡ್-19 ಸಾಂಕ್ರಾಮಿಕದ ಎರಡನೇ ಅಲೆಯ ಮಧ್ಯೆ, ಆರು ತಿಂಗಳಿಗಿಂತ ಹೆಚ್ಚಿನ ಸಮಯದ ನಂತರ ಈ ಸಭೆ ನಡೆಯುತ್ತಿದೆ. ಕೋವಿಡ್-19 ಚಿಕಿತ್ಸೆಗೆ ಸಂಬಂಧಿಸಿದ ಉತ್ಪನ್ನಗಳ ಮೇಲೆ ಜಿಎಸ್‌ಟಿ ದರ ಕಡಿಮೆಯಾಗುವ ಸಾಧ್ಯತೆಯಿದೆ.

English summary

43rd GST Council Meet Today: Tax Free Status For Covid-19 Goods Likely

The Goods and Services Tax (GST) Council, in its meeting on May 28, may take up the issue of inverted duty structures in key sectors that ends up making import duties on input goods higher than on finished goods
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X