ಬೆಂಗಳೂರು, ಮಾರ್ಚ್ 8: ತೀವ್ರ ನೀರಿನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಕಾರು ತೊಳೆಯಲು, ತೋಟಗಾರಿಕೆ, ನಿರ್ಮಾಣ, ನೀರಿನ ಕಾರಂಜಿ ಮತ್ತು ರಸ್ತೆ ನಿರ್ಮಾಣ ಮತ್ತು ನಿರ್ವಹಣೆಗೆ ಕುಡಿಯುವ ನೀರಿನ ಬಳಕೆಯನ್ನು ನಿಷೇಧಿಸಿದೆ. ಆದೇಶ ಉಲ್ಲಂಘಿಸಿದರೆ 5,000 ರೂಪಾಯಿ ದಂಡವನ್ನೂ ವಿಧಿಸಲಿದೆ.
ಟ್ಯಾಂಕರ್ ಮಾಲೀಕರು ಗ್ರಾಹಕರನ್ನು ಸುಲಿಗೆ ಮಾಡುತ್ತಿದ್ದಾರೆ ಎಂಬ ನಿರಂತರ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲಾಡಳಿತ ಗುರುವಾರ ಟ್ಯಾಂಕರ್ ನೀರಿನ ದರ ನಿಗದಿಪಡಿಸಿ ಆದೇಶ ಹೊರಡಿಸಿದೆ.

ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆಎ ದಯಾನಂದ್ ಅವರು ಸುತ್ತೋಲೆ ಹೊರಡಿಸಿದ್ದಾರೆ. ತಾಂತ್ರಿಕ ಸಮಿತಿ ಶಿಫಾರಸು ಆಧರಿಸಿ ಈ ದರ ನಿಗದಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಬೆಂಗಳೂರು ಜಿಲ್ಲಾಡಳಿತದ ಪ್ರಕಾರ 5 ಕಿ.ಮೀ.ವರೆಗೆ 6000 ಲೀಟರ್ ನೀರಿನ ಟ್ಯಾಂಕರ್‌ಗೆ 600 ರೂ., 8000 ಲೀಟರ್ ನೀರಿನ ಟ್ಯಾಂಕರ್‌ಗೆ 700 ರೂ., 12,000 ಲೀಟರ್ ನೀರಿನ ಟ್ಯಾಂಕರ್‌ಗೆ 1000 ರೂ. ನಿಗದಿಪಡಿಸಿದೆ. 5 ರಿಂದ 10 ಕಿ.ಮೀ ಅಂತರದಲ್ಲಿದ್ದರೆ 6000 ಲೀಟರ್ ನೀರಿನ ಟ್ಯಾಂಕರ್ ಗೆ 750 ರೂ., 8000 ಲೀಟರ್ ನೀರಿನ ಟ್ಯಾಂಕರ್ ಗೆ 850 ರೂ., 12,000 ಲೀಟರ್ ವಾಟರ್ ಟ್ಯಾಂಕರ್ ಗೆ 1200 ರೂ. ವ್ಯಯಿಸಬೇಕಿದೆ.
ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿರುವ ಜಿಲ್ಲಾಧಿಕಾರಿಗಳು, ನೀರು ಸರಬರಾಜು ಮಾಡುವ ಖಾಸಗಿ ಟ್ಯಾಂಕರ್‌ಗಳು ಜಿಎಸ್‌ಟಿ ವ್ಯಾಪ್ತಿಗೆ ಬರುತ್ತವೆ ಮತ್ತು ಈ ದರಗಳಿಗೆ ಜಿಎಸ್‌ಟಿಯನ್ನು ಸೇರಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ತೀವ್ರ ನೀರಿನ ಸಮಸ್ಯೆಯಿಂದ ನಗರವು ಸಮಸ್ಯೆಗೀಡಾಗಿರುವುದರಿಂದ ಕರ್ನಾಟಕ ಸರ್ಕಾರವು ಈ ವಾರದ ಆರಂಭದಲ್ಲಿ ಸಮಸ್ಯೆಯನ್ನು ಪರಿಹರಿಸಲು ಪ್ರಮುಖ ಸಭೆಯನ್ನು ನಡೆಸಿದೆ. ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಸರ್ಕಾರವು ಇತರ ಕಾಮಗಾರಿಗಳಿಗಿಂತ ನೀರಾವರಿ ಮತ್ತು ನೀರು ನಿರ್ವಹಣೆ ಯೋಜನೆಗಳಿಗೆ ಆದ್ಯತೆ ನೀಡಲಿದೆ ಎಂದು ವಿಧಾನಸಭೆಯಲ್ಲಿ ಹೇಳಿದರು.
ನೀರಾವರಿ ಯೋಜನೆಗಳ ಅಭಿವೃದ್ಧಿ ಮತ್ತು ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ಕೆ ಆದ್ಯತೆ ನೀಡಲಾಗಿದೆ. ರಸ್ತೆಗಳಂತಹ ಇತರ ಕಾಮಗಾರಿಗಳನ್ನು ನಂತರ ಕೈಗೆತ್ತಿಕೊಳ್ಳಲಾಗುವುದು, ನಾವು ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದೇವೆ ಎಂದು ಶಿವಕುಮಾರ್ ಹೇಳಿದರು.
ಅಲ್ಲದೆ, ಮಾರ್ಚ್ 7 ರ ಗಡುವಿನೊಳಗೆ ಅಧಿಕಾರಿಗಳೊಂದಿಗೆ ನೋಂದಣಿ ಮಾಡದಿದ್ದರೆ ಅವರ ಟ್ಯಾಂಕರ್‌ಗಳನ್ನು ಸರ್ಕಾರ ವಶಪಡಿಸಿಕೊಳ್ಳಲಿದೆ ಎಂದು ಉಪ ಮುಖ್ಯಮಂತ್ರಿ ರಾಜ್ಯದ ನೀರಿನ ಟ್ಯಾಂಕರ್ ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ. "ಬೆಂಗಳೂರು ನಗರದಲ್ಲಿ ಒಟ್ಟು 3,500 ನೀರಿನ ಟ್ಯಾಂಕರ್‌ಗಳಲ್ಲಿ, ಕೇವಲ 10% , ಅಂದರೆ 219 ಟ್ಯಾಂಕರ್‌ಗಳನ್ನು ಅಧಿಕಾರಿಗಳಲ್ಲಿ ನೋಂದಾಯಿಸಲಾಗಿದೆ, ಅವರು ಗಡುವಿನೊಳಗೆ ನೋಂದಾಯಿಸದಿದ್ದರೆ ಸರ್ಕಾರ ಅವುಗಳನ್ನು ವಶಪಡಿಸಿಕೊಳ್ಳುತ್ತದೆ" ಎಂದು ಅವರು ಹೇಳಿದರು.
"ನೀರು ಯಾವುದೇ ವ್ಯಕ್ತಿಯ ಸ್ವತ್ತಲ್ಲ ಸರಕಾರಕ್ಕೆ ಸೇರಿದ ಸಂಪತ್ತು, ಜಲಮೂಲಗಳ ಮೇಲೆ ಹಿಡಿತ ಸಾಧಿಸುವ ಹಕ್ಕು ಸರಕಾರಕ್ಕಿದೆ.ನೀರು ಪೂರೈಕೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಂತರ್ಜಲ ಸಮೃದ್ಧವಾಗಿರುವ ಪ್ರದೇಶಗಳಿಂದ, BWSSB ಈಗಾಗಲೇ ನೀರು ಸರಬರಾಜು ಮಾಡಲು 210 ಟ್ಯಾಂಕರ್‌ಗಳನ್ನು ಬಳಸುತ್ತಿದೆ, ನೀರು ಸರಬರಾಜು ಮಾಡಲು ಚುನಾವಣಾ ನೀತಿ ಸಂಹಿತೆ ಅಡ್ಡಿಯಾಗುವುದಿಲ್ಲ" ಎಂದು ಅವರು ಹೇಳಿದ್ದಾರೆ.


Click it and Unblock the Notifications