ಕೊರೊನಾವೈರಸ್ ಜಗತ್ತಿನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಅದರಲ್ಲೂ ವಿಶ್ವದ ಪ್ರಮುಖ ಆರ್ಥಿಕ ಶಕ್ತಿಗಳ ಜಂಘಾಬಲವೇ ಉಡುಗಿ ಹೋಗಿದೆ.
ಅಭಿವೃದ್ದಿಶೀಲ ರಾಷ್ಟ್ರವಾದ ಭಾರತದ ಮೇಲೆ ಕೊರೊನಾ ಬಹಳ ಕೆಟ್ಟ ಪರಿಣಾಮ ಬೀರುತ್ತಿದೆ. ಆರ್ಥಿಕ ಕುಸಿತ, ನಿರುದ್ಯೋಗ, ಬಡತನ ಹೆಚ್ಚಳದಂತಹ ಗಂಭೀರ ಸಮಸ್ಯೆಗಳು ಮತ್ತಷ್ಟು ದೊಡ್ಡದಾಗುತ್ತಿವೆ. ಕುಸಿಯುತ್ತಿರುವ ಆರ್ಥಿಕ ಶಕ್ತಿಯನ್ನು ಎತ್ತಿ ಹಿಡಿಯಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತೀವ್ರ ಹೆಣಗಾಡುತ್ತಿವೆ.
ಎರಡು ತಿಂಗಳಿಗೂ ಹೆಚ್ಚು ದೇಶವೇ ಲಾಕ್‌ಡೌನ್ ಆಗಿರುವ ಪರಿಣಾಮ ಆರ್ಥಿಕತೆ ಪಾತಾಳಕ್ಕೆ ಕುಸಿಯುವ ಹಂತ ತಲುಪಿದೆ. ಇಂತಹ ಪರಿಸ್ಥಿತಿಯಲ್ಲಿ ದೇಶದ ಕುಸಿಯುತ್ತಿರುವ ಆರ್ಥಿಕತೆಯನ್ನು ಎತ್ತಿ ಹಿಡಿಯುವವರಾರು? ಎಂಬ ಪ್ರಶ್ನೆ ಸಹಜವಾಗಿ ಮೂಡುತ್ತದೆ. ಸದ್ಯದ ಮಟ್ಟಿಗೆ ದೇಶದ ಐದು ರಾಜ್ಯಗಳು ಆ ಕೆಲಸವನ್ನು ಮಾಡಲಿವೆ ಎನ್ನುತ್ತದೆ Elara Securities Inc ವರದಿ.
ಐದು ರಾಜ್ಯಗಳು ಯಾವವು?
ಒಟ್ಟು ದೇಶೀಯ ಉತ್ಪನ್ನಕ್ಕೆ (ಜಿಡಿಪಿ) ಸುಮಾರು 27% ರಷ್ಟು ಕೊಡುಗೆ ನೀಡುವ ಐದು ರಾಜ್ಯಗಳಾದ ಕರ್ನಾಟಕ, ಪಂಜಾಬ್, ತಮಿಳುನಾಡು, ಹರಿಯಾಣ ಮತ್ತು ಕೇರಳದಲ್ಲಿ ನಾಲ್ಕನೇ ಹಂತದ ಲಾಕ್‌ಡೌನ್ ಸಡಿಲಿಕೆಯ ನಂತರ ಆರ್ಥಿಕ ಚಟುವಟಿಕೆಗಳು ಗರಿಗೆದರಿರುವುದು ಬೇರೆ ರಾಜ್ಯಗಳಿಗೆ ಹೋಲಿಸಿದರೆ ಹೆಚ್ಚು ಎಂದು ವರದಿ ಹೇಳುತ್ತದೆ.
ಗರಿಗೆದರಿದ ಆರ್ಥಿಕ ಚಟುವಟಿಕೆಗಳು
ವಿದ್ಯುತ್ ಬಳಕೆ, ಜನ ಸಂಚಾರ, ಸಗಟು ಮಾರುಕಟ್ಟೆಗಳಲ್ಲಿ ಕೃಷಿ ಉತ್ಪನ್ನಗಳ ಆಗಮನ ಮತ್ತು ಗೂಗಲ್ ದತ್ತಾಂಶಗಳ ವಿಶ್ಲೇಷಣೆಯ ಆಧಾರದ ಮೇಲೆ ಕರ್ನಾಟಕ, ಪಂಜಾಬ್, ತಮಿಳುನಾಡು, ಹರಿಯಾಣ ಮತ್ತು ಕೇರಳದಲ್ಲಿ ಆರ್ಥಿಕ ಚಟುವಟಿಕೆಗಳು ಉನ್ನತ ಮಟ್ಟದಲ್ಲಿ ಏರುವ ಲಕ್ಷಣ ನೀಡಿವೆ. ಈ ಐದೂ ರಾಜ್ಯಗಳು ದೇಶದ ಆರ್ಥಿಕತೆಯನ್ನು ಮೇಲಕೆತ್ತಲಿವೆ ಎಂದು ವರದಿ ಹೇಳುತ್ತದೆ.
ಹಿಂದುಳಿದ ಮಹಾರಾಷ್ಟ್ರ, ಗುಜರಾತ್
ವ್ಯಾಪಕ ಕೈಗಾರಿಕೆಗಳನ್ನು ಹೊಂದಿರುವ ಹಾಗೂ ಜಿಡಿಪಿ ಕೊಡುಗೆಯಲ್ಲಿ ಮೇಲೆ ಹೇಳಲಾದ ರಾಜ್ಯಗಳಿಗಿಂತಲೂ ಹೆಚ್ಚು ಕೊಡುಗೆ ನೀಡುವ ರಾಜ್ಯಗಳಾದ ಮಹಾರಾಷ್ಟ್ರ ಮತ್ತು ಗುಜರಾತ್ ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ಜರ್ಜರಿತವಾಗಿವೆ. ಇನ್ನೂ ಈ ರಾಜ್ಯಗಳಲ್ಲಿ ಲಾಕ್‌ಡೌನ್ ಸಡಿಲಿಕೆ ಅಷ್ಟೊಂದು ಪ್ರಮಾಣದಲ್ಲಿ ಆಗಿಲ್ಲ. ಹೀಗಾಗಿ ದೇಶದ ಆರ್ಥಿಕತೆಗೆ ಬೆಂಬಲವಾಗಿ ನಿಲ್ಲಲು ಈ ರಾಜ್ಯಗಳು ಹಿಂದುಳಿಯಬಹುದು ಎಂದು ವರದಿ ಹೇಳುತ್ತದೆ.
ಬೇಡಿಕೆ ಮುಂದುವರಿಯುತ್ತದೆ
"ಮುಂಬರುವ ತಿಂಗಳುಗಳಲ್ಲಿ ಬೇಡಿಕೆ ಮುಂದುವರಿಯುತ್ತದೆ. ಅಲ್ಲದೇ ಕೊರೊನಾವೈರಸ್ ನಂತರದ ಬದಲಾವಣೆ ಖಂಡಿತವಾಗಿಯೂ ಆರ್ಥಿಕತೆಗೆ ಹೊಸ ದಿಕ್ಕು ತೋರಿಸುತ್ತದೆ'' ಎಂದು Elara Securities Inc ನ ಗರಿಮಾ ಕಪೂರ್ ಹೇಳುತ್ತಾರೆ.
More From GoodReturns

ಓಮ್ ಪವರ್ ಟ್ರಾನ್ಸ್ಮಿಷನ್ ಐಪಿಒ: ಸೋಮವಾರ ಹೂಡಿಕೆದಾರರಿಗೆ ಅಗ್ನಿಪರೀಕ್ಷೆ?

ಮಿಂತ್ರಾ ಫ್ಯಾಶನ್ ಕಾರ್ನಿವಲ್: ಇಂದೇ ಕೊನೆಯ ಅವಕಾಶ, ತಪ್ಪಿಸಿಕೊಳ್ಳಬೇಡಿ!

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಚಿನ್ನದ ಬೆಲೆ ಏರಿಕೆ: ಅಕ್ಷಯ ತೃತೀಯಕ್ಕೆ ಹೂಡಿಕೆ ಮಾಡುವುದು ಹೇಗೆ?

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಅಂಬೇಡ್ಕರ್ ಜಯಂತಿ ರಜೆ: ನಿಮ್ಮ ಎಸ್ಐಪಿ ಹಣಕ್ಕೆ ಕಾದಿದೆಯಾ ಸಂಕಷ್ಟ?

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!



Click it and Unblock the Notifications