ಮಧ್ಯಪ್ರದೇಶದ ಪನ್ನಾ ಜಿಲ್ಲೆಯ ಗಣಿಯೊಂದರಲ್ಲಿ ಅಂದಾಜು 50 ಲಕ್ಷ ಮೌಲ್ಯದ 10.69 ಕ್ಯಾರೆಟ್ ನ ವಜ್ರವು ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಣಿಪುರ ಪ್ರದೇಶದಲ್ಲಿ 35 ವರ್ಷದ ಆನಂದಿಲಾಲ್ ಖುಷ್ವಾ ಎಂಬುವವರು ಗಣಿಯನ್ನು ಭೋಗ್ಯಕ್ಕೆ ಪಡೆದಿದ್ದು, ಅವರು 10.69 ಕ್ಯಾರೆಟ್ ನ ವಜ್ರವನ್ನು ಸ್ಥಳೀಯ ವಜ್ರದ ಕಚೇರಿಯಲ್ಲಿ (ಹೀರಾ ಕಾರ್ಯಾಲಯ) ನೀಡಿದ್ದಾರೆ ಎಂದು ಸ್ಥಳೀಯ ಅಧಿಕಾರಿ ಆರ್.ಕೆ. ಪಾಂಡೆ ಮಾಹಿತಿ ನೀಡಿದ್ದಾರೆ.
ಈಚೆಗೆ ಖುಷ್ವಾ 70 ಸೆಂಟ್ ವಜ್ರವನ್ನು ಡೆಪಾಸಿಟ್ ಮಾಡಿದ್ದರು ಎಂದು ತಿಳಿಸಲಾಗಿದ್ದು, ಜಿಲ್ಲೆಯಲ್ಲಿ ಕೊರೊನಾ ಲಾಕ್ ಡೌನ್ ವಿನಾಯಿತಿ ನೀಡಿದ ಮೇಲೆ ಸಿಕ್ಕಂಥ ಮೊದಲ ದೊಡ್ಡ ವಜ್ರ ಇದು ಎಂದು ಅಧಿಕಾರಿಗಳು ಹೇಳಿದ್ದಾರೆ. ಅಂದ ಹಾಗೆ ವಜ್ರವನ್ನು ಇನ್ನೂ ಮೌಲ್ಯಮಾಪನ ಮಾಡಿಲ್ಲ. ಆದರೆ ಸ್ಥಳೀಯ ತಜ್ಞರು ಹೇಳುವಂತೆ, ಈ ವಜ್ರದ ಗುಣಮಟ್ಟ ಆಧರಿಸಿ 50 ಲಕ್ಷ ರುಪಾಯಿ ತನಕ ಹಣ ಬರಬಹುದು.

ಖುಷ್ವಾ ಅವರು ಮಾಧ್ಯಮಗಳ ಜತೆ ಮಾತನಾಡಿ, ನಾನು ಹಾಗೂ ನನ್ನ ಪಾರ್ಟನರ್ ಗಳು ಕಳೆದ ಆರು ತಿಂಗಳಿಂದ ಗಣಿಯಲ್ಲಿ ಬಹಳ ಕಷ್ಟಪಟ್ಟು ಕೆಲಸ ಮಾಡಿದ್ದೀವಿ. ಈಗ ಸಿಕ್ಕಿರುವ ವಜ್ರದಿಂದ ಬಹಳ ಖುಷಿ ಆಗಿದ್ದೇವೆ ಎಂದು ತಿಳಿಸಿದ್ದಾರೆ. ಪನ್ನಾ ಜಿಲ್ಲೆ ಇರುವುದು ಮಧ್ಯಪ್ರದೇಶದ ಬುಂದೇಲ್ ಖಂಡ್ ಭಾಗದಲ್ಲಿ. ಇಲ್ಲಿ ವಜ್ರದ ನಿಕ್ಷೇಪಗಳಿಗೆ ಹೆಸರುವಾಸಿಯಾಗಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications