ನವದೆಹಲಿ, ಜುಲೈ 26: ಭಾರತದ 5ಜಿ ಸ್ಪೆಕ್ಟ್ರಮ್ ಹರಾಜು ಪ್ರಕ್ರಿಯೆ ಮಂಗಳವಾರ(ಜುಲೈ 26) ಬೆಳಗ್ಗೆ ಆರಂಭವಾಗಿದೆ. ರಿಲಯನ್ಸ್ ಜಿಯೋ, ಭಾರ್ತಿ ಏರ್‌ಟೆಲ್, ವೊಡಾಫೋನ್ ಐಡಿಯಾ ಮತ್ತು ಕ್ಷೇತ್ರಕ್ಕೆ ಹೊಸದಾಗಿ ಎಂಟ್ರಿ ಕೊಟ್ಟಿರುವ ಅದಾನಿ ಡೇಟಾ ನೆಟ್‌ವರ್ಕ್ ನಡುವೆ ತೀವ್ರ ಪೈಪೋಟಿ ನಿರೀಕ್ಷಿಸಲಾಗಿದೆ.
5G ಸ್ಪೆಕ್ಟ್ರಮ್ ಹರಾಜಿನಲ್ಲಿ 4.3 ಲಕ್ಷ ಕೋಟಿ ಮೌಲ್ಯದ 72 GHz ರೇಡಿಯೊವೇವ್‌ಗಳಿಗೆ ಬಿಡ್ಡಿಂಗ್ ನಡೆಯಲಿದೆ. ಹರಾಜು ಪ್ರಕ್ರಿಯೆಯು ಬೆಳಗ್ಗೆ 10 ಗಂಟೆಗೆ ಪ್ರಾರಂಭವಾಗಿದ್ದು, ಸಂಜೆ 6 ರವರೆಗೆ ನಡೆಯಲಿದೆ. ಟೆಲಿಕಾಂ ಇಲಾಖೆ (DoT) ಮೂಲಗಳ ಪ್ರಕಾರ, ರೇಡಿಯೊವೇವ್‌ಗಳ ನಿಜವಾದ ಬೇಡಿಕೆ ಮತ್ತು ವೈಯಕ್ತಿಕ ಬಿಡ್‌ದಾರರು ಬಳಸುವ ತಂತ್ರಗಳನ್ನು ಅವಲಂಬಿಸಿ ಹರಾಜು ಪ್ರಕ್ರಿಯೆ ನಡೆಯಲಿದೆ.
ಮುಂಬರುವ 5G ಸೇವೆಗಳು ಹೊಸ ಯುಗದ ವ್ಯವಹಾರಗಳನ್ನು ರಚಿಸುವ ಸಾಮರ್ಥ್ಯವನ್ನು ಹೊಂದಿವೆ, ಉದ್ಯಮಗಳಿಗೆ ಹೆಚ್ಚುವರಿ ಆದಾಯವನ್ನು ಗಳಿಸುತ್ತವೆ ಮತ್ತು ತಂತ್ರಜ್ಞಾನಗಳ ನಿಯೋಜನೆಯಿಂದ ಉಂಟಾಗುವ ಉದ್ಯೋಗವನ್ನು ಒದಗಿಸುತ್ತವೆ.
ಇದು 600 MHz, 700 MHz, 800 MHz, 900 MHz, 1800 MHz, 2100 MHz, 2300 MHz, 2500 MHz, 3300 MHz ಹಾಗೂ 26 GHz ಅನ್ನು ಬಳಕೆ ಮಾಡುವ ಹಕ್ಕಿಗೆ ಸಂಬಂಧಿಸಿ ನಡೆಯುವ ಹರಾಜು ಇದಾಗಿದೆ. ಹರಾಜಿನಲ್ಲಿ ಗೆಲುವು ಸಾಧಿಸಿದ ಸಂಸ್ಥೆಯು 20 ವರ್ಷಗಳ ಕಾಲ 5ಜಿ ಸ್ಪೆಕ್ಟ್ರಮ್ ಬಳಕೆಯ ಹಕ್ಕು ಹೊಂದಲಿದ್ದಾರೆ.

ಜಿಯೋ ಸಂಸ್ಥೆಯು 5 ಜಿಗಾಗಿ 14,000 ಕೋಟಿ ರೂಪಾಯಿಗಳ ಇಎಂಡಿಯನ್ನು ಈಗಾಗಲೇ ಸಲ್ಲಿಕೆ ಮಾಡಿದೆ. ಅದಾನಿ ಡೇಟಾ ನೆಟ್‌ವರ್ಕ್‌ಗಳು 100 ಕೋಟಿ ರೂಪಾಯಿ ಸಂಗ್ರಹಿಸಿವೆ. ಭಾರ್ತಿ ಏರ್‌ಟೆಲ್ 5500 ಕೋಟಿ ರೂಪಾಯಿ ಇಎಮ್‌ಡಿ ಇರಿಸಿದೆ. ಹಣಕಾಸು ಕೊರತೆಯಿರುವ ವೊಡಾಫೋನ್ ಐಡಿಯಾ (VI) 2,200 ಕೋಟಿ ರೂಪಾಯಿಗಳ ಇಎಮ್‌ಡಿ ಸಲ್ಲಿಕೆ ಮಾಡುವ ಮೂಲಕ ಅಚ್ಚರಿ ಮೂಡಿಸಿದೆ.
ಜೂನ್ ತಿಂಗಳಿನಲ್ಲಿ 5ಜಿ ಸ್ಪೆಕ್ಟ್ರಮ್ ಹರಾಜಿಗೆ ಅನುಮೋದನೆ ನೀಡಿದೆ. ಸೆಕ್ಟರ್ ರೆಗ್ಯುಲೇಟರ್ ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (ಟ್ರಾಯ್) ಶಿಫಾರಸು ಮಾಡಿದ ಮೀಸಲು ಬೆಲೆಯಲ್ಲಿ ಹರಾಜಿಗೆ ಅನುಮೋದನೆ ನೀಡಿದೆ.
20 ಕಂತಿನ ಮೂಲಕ ಬಿಡ್ ಗೆದ್ದವರು ಹಣವನ್ನು ಪಾವತಿ ಮಾಡಬಹುದು. ಪ್ರತಿ ವರ್ಷದ ಆರಂಭದಲ್ಲಿ ಮುಂಗಡವಾಗಿ ಪಾವತಿ ಮಾಡಬೇಕಾಗುತ್ತದೆ. ಬೆಂಗಳೂರು ಸೇರಿ ಪ್ರಮುಖ 13 ನಗರಗಳಲ್ಲಿ 5ಜಿ ಕಾರ್ಯಕ್ಷಮತೆ ಆರಂಭಿಕ ಪರೀಕ್ಷೆ ಯಶಸ್ವಿಯಾಗಿದೆ. ಕಡಿಮೆ ಫ್ರಿಕ್ವೆನ್ಸಿಯಲ್ಲಿ 100 Mbps ನೆಟ್‌ವರ್ಕ್ ಸ್ಪೀಡ್ ಲಿಮಿಟ್ ಇರಲಿದೆ. ಇನ್ನು ಹೆಚ್ಚು ಫ್ರಿಕ್ವೆನ್ಸಿಯಲ್ಲಿ 20 Gbps ಗೂ ವರೆಗೆ ನೆಟ್‌ವರ್ಕ್ ಸ್ಪೀಡ್ ಇರಲಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications