14 ರಾಜ್ಯಗಳಿಗೆ 6,195 ಕೋಟಿ ರೂ ಅನುದಾನ ಬಿಡುಗಡೆ ಮಾಡಿದ ಕೇಂದ್ರ
ನವದೆಹಲಿ, ಜುಲೈ 9: 15 ನೇ ಹಣಕಾಸು ಆಯೋಗದ ಶಿಫಾರಸ್ಸಿನ ಪ್ರಕಾರ ಕೇಂದ್ರ ಸರ್ಕಾರ 14 ರಾಜ್ಯಗಳಿಗೆ 6,195 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಿದೆ.
ನಾಲ್ಕನೇ ಕಂತಿನ ರೂಪದಲ್ಲಿ ಈ ಹಣವನ್ನು ಬಿಡುಗಡೆ ಮಾಡಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಈ ಅನುದಾನವು ಕೋವಿಡ್ -19 ಬಿಕ್ಕಟ್ಟಿನ ಸಂದರ್ಭದಲ್ಲಿ ರಾಜ್ಯಗಳಿಗೆ ಹೆಚ್ಚುವರಿ ಸಂಪನ್ಮೂಲಗಳನ್ನು ಒದಗಿಸುತ್ತದೆ ಎಂದು ಹಣಕಾಸು ಸಚಿವರ ಕಚೇರಿ ಬುಧವಾರ ಟ್ವೀಟ್ ಮಾಡಿದೆ.

14 ರಾಜ್ಯಗಳಲ್ಲಿ ಆಂಧ್ರಪ್ರದೇಶ, ಅಸ್ಸಾಂ, ಕೇರಳ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳ, ಕರ್ನಾಟಕ, ಮಹಾರಾಷ್ಟ್ರ, ಹರ್ಯಾಣ, ಒಡಿಶಾ, ತೆಲಂಗಾಣ, ಜಾರ್ಖಂಡ್, ಗೋವಾ, ಉತ್ತರಾಖಂಡ್ ಮತ್ತು ಪಂಜಾಬ್ ಸೇರಿವೆ.


Click it and Unblock the Notifications