ಗುಡ್‌ನ್ಯೂಸ್‌: ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಏರಿಕೆ

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕೇಂದ್ರ ಸರ್ಕಾರವು ಬುಧವಾರ ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ (ಡಿಎ) ಏರಿಕೆ ಮಾಡಲಾಗುವುದು ಎಂದು ಘೋಷಣೆ ಮಾಡಿದೆ. ಬುಧವಾರ (ಮಾರ್ಚ್ 30) ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಯ ಪ್ರಕಾರ, ಡಿಎಯನ್ನು ಶೇಕಡ ಮೂರರಷ್ಟು ಏರಿಕೆ ಮಾಡಲಾಗುತ್ತದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ (ಡಿಎ) ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆ (ಡಿಆರ್) ಹೆಚ್ಚುವರಿ ಕಂತು ಬಿಡುಗಡೆ ಮಾಡಲು ಅನುಮೋದನೆ ನೀಡಿದೆ.

ಜನವರಿ 1, 2022ರಿಂದಲೇ ಈ ಹೆಚ್ಚಳವು ಜಾರಿಗೆ ಬರಲಿದೆ. ಈ ಹಿಂದೆ ತುಟ್ಟಿಭತ್ಯೆ ಶೇಕಡ 31 ಇದ್ದು, ಡಿಎ ಹೆಚ್ಚಳದ ಬಳಿಕ ಶೇಕಡ 34ಕ್ಕೆ ಏರಿಕೆ ಆಗಿದೆ. ಡಿಎ ಹೆಚ್ಚಳವು ಕೇಂದ್ರ ಸರ್ಕಾರಿ ನೌಕರರಿಗೆ ಮಾತ್ರವಲ್ಲದೆ ಕೇಂದ್ರ ಸರ್ಕಾರದ ಪಿಂಚಣಿದಾರರಿಗೆ ಮತ್ತು ಕೇಂದ್ರ ಸರ್ಕಾರದಿಂದ ಪಿಂಚಣಿ ಪಡೆಯುವ ಕುಟುಂಬ ಪಿಂಚಣಿದಾರರಿಗೆ ಪ್ರಯೋಜನವನ್ನು ನೀಡುತ್ತದೆ.

 ಗುಡ್‌ನ್ಯೂಸ್‌: ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಏರಿಕೆ

ತುಟ್ಟಿಭತ್ಯೆಯು ಒಟ್ಟಾಗಿ ವರ್ಷಕ್ಕೆ ರೂ.9,544.50 ಕೋಟಿಗಳಾಗಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸುಮಾರು 47.68 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 68.62 ಲಕ್ಷ ಪಿಂಚಣಿದಾರರಿಗೆ ಇದರ ಪ್ರಯೋಜನ ಲಭ್ಯವಾಗಲಿದೆ. ಈ ಹಿಂದೆ ಕೊರೊನಾ ವೈರಸ್‌ ಸಾಂಕ್ರಾಮಿಕ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ಡಿಎ ಹಾಗೂ ಡಿಆರ್‌ ಸ್ಥಗಿತ ಮಾಡಿದ್ದವು.

 ಗುಡ್‌ನ್ಯೂಸ್‌: ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಏರಿಕೆ

ಸರ್ಕಾರವು ಜುಲೈ 1, 2021 ರಿಂದ ಡಿಎ ಮತ್ತೆ ಆರಂಭ ಮಾಡಿದೆ. ಈ ಸಂದರ್ಭದಲ್ಲಿ ಡಿಎಯನ್ನು ಶೇಕಡ 17ರಿಂದ ಶೇಕಡ 28ರಷ್ಟು ಏರಿಕೆ ಮಾಡಲಾಗಿದೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಕೇಂದ್ರ ಸರ್ಕಾರವು ತನ್ನ ನೌಕರರ ತುಟ್ಟಿಭತ್ಯೆಯನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರಿ ಉದ್ಯೋಗಿಗಳು ಮತ್ತು ಪಿಂಚಣಿದಾರರಿಗೆ ಶೇಕಡಾ 3ರಷ್ಟು ಡಿಎ ಭತ್ಯೆ (Dearness Allowance) ಹೆಚ್ಚಿಸಲು ಕೇಂದ್ರ ಸಚಿವ ಸಂಪುಟ ಅನುಮೋದಿಸಿದೆ.

7 ನೇ ಆಯೋಗದ ಶಿಫಾರಸ್ಸಿನ ಪ್ರಕಾರ ಕೇಂದ್ರ ಸರ್ಕಾರದ ಉದ್ಯೋಗಿಗಳಿಗೆ ಡಿಎ ಅಥವಾ ತುಟ್ಟಿಭತ್ಯೆಯು ಸಾಮಾನ್ಯವಾಗಿ ವರ್ಷಕ್ಕೆ ಎರಡು ಭಾರೀ ಹೆಚ್ಚಳ ಆಗುತ್ತದೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+