ಅಯೋಧ್ಯೆಯ ರಾಮ ಮಂದಿರದಲ್ಲಿ ಜನವರಿ 22 ರಂದು ಮಹಾಮಸ್ತಕಾಭಿಷೇಕ ನಡೆದಿದೆ. ಇದಾದ ಬಳಿಕ ಅಯೋಧ್ಯೆಗೆ ಭಕ್ತಾಧಿಗಳು ಸಾವಿರಾರು ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಈ ನಡುವೆ ಅಯೋಧ್ಯೆಗೆ ವಾಯು ಸಂಪರ್ಕವನ್ನು ಹೆಚ್ಚಿಸಲು ಮತ್ತು ಯಾತ್ರಾರ್ಥಿಗಳ ಆಗಮನಕ್ಕೆ ಅನುಕೂಲವಾಗುವಂತಹ ಕ್ರಮವನ್ನು ಕೇಂದ್ರ ಸರ್ಕಾರವು ಕೈಗೊಂಡಿದೆ.
ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಗುರುವಾರ ಉತ್ತರ ಪ್ರದೇಶದ ಅಯೋಧ್ಯೆಗೆ 8 ಹೊಸ ವಿಮಾನ ಮಾರ್ಗಗಳನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸಮ್ಮುಖದಲ್ಲಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ನಾಗರಿಕ ವಿಮಾನಯಾನ ಖಾತೆ ರಾಜ್ಯ ಸಚಿವ ವಿಕೆ ಸಿಂಗ್ ಕೂಡಾ ಉಪಸ್ಥಿತರಿದ್ದರು. ಯಾವೆಲ್ಲ ನಗರಕ್ಕೆ ವಿಮಾನ ಎಂಬ ಬಗ್ಗೆ ಇಲ್ಲಿದೆ ವಿವರ ಮುಂದೆ ಓದಿ....

ಹೊಸ ವಿಮಾನ ಮಾರ್ಗಗಳ ವಿವರ
ಹೊಸ ವಿಮಾನ ಮಾರ್ಗಗಳು ಅಯೋಧ್ಯೆಯನ್ನು ದೆಹಲಿ, ಚೆನ್ನೈ, ಅಹಮದಾಬಾದ್, ಜೈಪುರ, ಪಾಟ್ನಾ, ದರ್ಭಾಂಗ, ಮುಂಬೈ ಮತ್ತು ಬೆಂಗಳೂರು ನಗರದೊಂದಿಗೆ ಸಂಪರ್ಕಿಸುತ್ತದೆ. ರಾಮಮಂದಿರದಲ್ಲಿ ಇತ್ತೀಚೆಗೆ ನಡೆದ ಪ್ರಾಣ ಪ್ರತಿಷ್ಠಾ ಸಮಾರಂಭದಿಂದ ಹೊರಹೊಮ್ಮಿದ ಅಪಾರ ಬೇಡಿಕೆಯು ಅಯೋಧ್ಯೆಯ ಪ್ರವಾಸೋದ್ಯಮ ಸಾಮರ್ಥ್ಯವನ್ನು ಹೆಚ್ಚಿಸಿದೆ. ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಹೊಸ ಮಾರ್ಗವನ್ನು ಹಾಕಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಸಿಂಧ್ಯಾ, ಅಯೋಧ್ಯೆ ಸಾಮಾನ್ಯ ತಾಣವಲ್ಲ. ಪ್ರಪಂಚದ ಮೂಲೆ ಮೂಲೆಗಳಿಂದ ಭಗವಾನ್ ರಾಮನ ಭಕ್ತರ ನಂಬಿಕೆ ಮತ್ತು ಗೌರವವು ಅದರೊಂದಿಗೆ ಸಂಪರ್ಕ ಹೊಂದಿದೆ. ವಿಮಾನ ನಿಲ್ದಾಣವು ಪ್ರವಾಸಿಗರಿಗೆ ನಗರದ ಮೊದಲ ಪರಿಚಯವಾಗಿದೆ. ಇದಕ್ಕಾಗಿಯೇ ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಅಯೋಧ್ಯಾಧಾಮವನ್ನು ರಾಮಾಯಣದ ಕಥೆಗಳನ್ನು ಚಿತ್ರಿಸುವ ಕಲಾಕೃತಿಯೊಂದಿಗೆ ಅದರ ಸಂಸ್ಕೃತಿಯನ್ನು ಪ್ರತಿಬಿಂಬಿಸಲು ಅಭಿವೃದ್ಧಿಪಡಿಸಲಾಗಿದೆ ಎಂದು ಹೇಳಿದರು.
ಪಿಎಂ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಉತ್ತರ ಪ್ರದೇಶದಲ್ಲಿ ಕಾರ್ಯಾಚರಣೆಯ ವಿಮಾನ ನಿಲ್ದಾಣಗಳ ಸಂಖ್ಯೆ ಐದರಿಂದ 10 ಕ್ಕೆ ದ್ವಿಗುಣಗೊಂಡಿದೆ ಎಂದು ಸಿಂಧಿಯಾ ಹೇಳಿದರು. ಇನ್ನೂ ಐದು ವಿಮಾನ ನಿಲ್ದಾಣಗಳು ಶೀಘ್ರದಲ್ಲೇ ಕಾರ್ಯಾರಂಭ ಮಾಡಲಿದ್ದು, ವರ್ಷಾಂತ್ಯದ ವೇಳೆಗೆ ರಾಜ್ಯದ ಒಟ್ಟು ವಿಮಾನ ನಿಲ್ದಾಣಗಳ ಸಂಖ್ಯೆ 16ಕ್ಕೆ ಏರಲಿದ್ದು, ವಿಶ್ವ ದರ್ಜೆಯ ಜೆವಾರ್ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣವೂ ಸೇರಲಿದೆ. ಅಯೋಧ್ಯೆಯಿಂದ ಕಾರ್ಯನಿರ್ವಹಿಸದ ಯಾವುದೇ ವಿಮಾನಯಾನ ಸಂಸ್ಥೆಗಳು ಉಳಿಯುವುದಿಲ್ಲ ಎಂದು ಅವರು ಭರವಸೆ ನೀಡಿದರು.
ಸ್ಪೈಸ್ ಜೆಟ್ ಈ ಮಾರ್ಗಗಳಲ್ಲಿ ಕಾರ್ಯಾಚರಣೆ
ಡಿಸೆಂಬರ್ 2023 ರಲ್ಲಿ, ಅಯೋಧ್ಯಾ ಧಾಮದಲ್ಲಿ ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು 350 ಕೋಟಿ ರೂಪಾಯಿ ವೆಚ್ಚದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ಸಮ್ಮುಖದಲ್ಲಿ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು.


Click it and Unblock the Notifications