ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಮೇ ತಿಂಗಳಿನಲ್ಲಿಯೇ 2000 ರೂಪಾಯಿ ನೋಟುಗಳನ್ನು ಚಲಾವಣೆಯಿಂದ ವಾಪಾಸ್ ಪಡೆದಿದೆ. 2000 ರೂಪಾಯಿ ನೋಟು ಹೊಂದಿರುವವರು ಬ್ಯಾಂಕ್‌ಗಳಲ್ಲಿ ನೋಟುಗಳನ್ನು ಬದಲಾವಣೆ ಮಾಡಿಕೊಳ್ಳಬಹುದು ಅಥವಾ ಬ್ಯಾಂಕ್ ಖಾತೆಗೆ ಜಮೆ ಮಾಡಬಹುದು. ಈವರೆಗೆ ಶೇಕಡ 88ರಷ್ಟು ನೋಟುಗಳನ್ನು ಬ್ಯಾಂಕ್‌ಗಳಿಗೆ ಜಮೆ ಮಾಡಲಾಗಿದೆ ಎಂದು ಆರ್‌ಬಿಐ ತಿಳಿಸಿದೆ.
2000 ರೂಪಾಯಿ ನೋಟುಗಳನ್ನು ಬದಲಾವಣೆ ಮಾಡಲು ಅಥವಾ ಬ್ಯಾಂಕ್ ಖಾತೆಗೆ ಜಮೆ ಮಾಡಲು ಸೆಪ್ಟೆಂಬರ್‌ವರೆಗೆ ಅವಕಾಶವಿದೆ. ಜುಲೈ 31 ರವರೆಗಿನ ಮಾಹಿತಿ ಪ್ರಕಾರ ಈವರೆಗೆ ಶೇಕಡ 88ರಷ್ಟು 2000 ರೂಪಾಯಿ ನೋಟುಗಳನ್ನು ಬ್ಯಾಂಕ್‌ಗಳಿಗೆ ಹಿಂತಿರುಗಿಸಲಾಗಿದೆ ಎಂದು ಆರ್‌ಬಿಐ ಮಂಗಳವಾರ ಹೇಳಿದೆ.

ಹಿಂಪಡೆದ ನೋಟುಗಳೆಷ್ಟು, ಈಗ ಎಷ್ಟಿದೆ?
ಮಾರ್ಚ್ 31ರವರೆಗೆ 3.62 ಲಕ್ಷ ಕೋಟಿ ರೂಪಾಯಿಯಷ್ಟು 2000 ರೂಪಾಯಿ ನೋಟುಗಳು ಚಲಾವಣೆಯಲ್ಲಿತ್ತು, ಆದರೆ ಮೇ 19ರ ವೇಳೆಗೆ ಇದು ಸುಮಾರು 3.56 ಲಕ್ಷ ಕೋಟಿ ರೂಪಾಯಿಗೆ ಇಳಿಕೆಯಾಗಿದೆ. ಬ್ಯಾಂಕ್‌ಗಳ ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಜುಲೈ 31ರವರೆಗೆ ಚಲಾವಣೆಯಿಂದ ಮರಳಿ ಪಡೆದ 2000 ರೂಪಾಯಿ ನೋಟುಗಳ ಒಟ್ಟು ಮೌಲ್ಯವು 3.14 ಲಕ್ಷ ಕೋಟಿ ರೂಪಾಯಿ ಆಗಿದೆ.
ಪ್ರಸ್ತುತ, ಇನ್ನೂ ಚಲಾವಣೆಯಲ್ಲಿ 0.42 ಲಕ್ಷ ಕೋಟಿ ರೂಪಾಯಿಗಳಷ್ಟು 2000 ರೂಪಾಯಿ ನೋಟುಗಳಿದೆ ಎಂದು ಆರ್‌ಬಿಐ ತಿಳಿಸಿದೆ. ಈವರೆಗೆ ಬ್ಯಾಂಕ್‌ಗಳಿಗೆ ಜಮೆ ಮಾಡಲಾದ ಅಥವಾ ವಾಪಾಸ್ ನೀಡಲಾದ 2000 ರೂಪಾಯಿ ನೋಟುಗಳಲ್ಲಿ ಶೇಕಡ 87ರಷ್ಟು ಡೆಪಾಸಿಟ್ ಮಾಡಲಾಗಿದೆ. ಇನ್ನು ಶೇಕಡ 13ರಷ್ಟು ನೋಟುಗಳನ್ನು ಬದಲಾವಣೆ ಮಾಡಲಾಗಿದೆ ಎಂದು ಕೇಂದ್ರ ಬ್ಯಾಂಕ್ ಡೇಟಾ ತಿಳಿಸಿದೆ.
ಕೇಂದ್ರ ನೀತಿ ಆರ್ಥಿಕತೆಗೆ ಪ್ರಭಾವ ಬೀರಿದೆಯೇ?
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) 2000 ರೂಪಾಯಿ ನೋಟಿನ ಬಗ್ಗೆ ಮೇ 19ರಂದು ದೇಶದಲ್ಲಿ ಚಲಾವಣೆಯಲ್ಲಿದ್ದ 2000 ರೂಪಾಯಿ ಮುಖಬೆಲೆಯ ನೋಟು ಚಲಾವಣೆ ಸ್ಥಗಿತಗೊಳಿಸಿ, ಅದನ್ನು ವಾಪಾಸ್ ಪಡೆಯುವುದಾಗಿ ತಿಳಿಸಿದೆ. ಅದಾದ ಬಳಿಕ ಮೇ 23ರಿಂದ ನೋಟು ಬದಲಾವಣೆ ಪ್ರಕ್ರಿಯೆ ಆರಂಭವಾಗಿದೆ. ಈ ನಡುವೆ ಈ ನೋಟು ಚಲಾವಣೆಯಿಂದ ಹಿಂದಕ್ಕೆ ಪಡೆದಿರುವುದು ಆರ್ಥಿಕತೆಯ ಮೇಲೆ ಕೆಟ್ಟ ಪ್ರಭಾವ ಬೀರಿದೆಯೇ ಎಂಬ ಚರ್ಚೆ ಉಂಟಾಗುತ್ತಿದೆ.
ಈ ಬಗ್ಗೆ ಸ್ಪಷ್ಟತೆಯನ್ನು ನೀಡಿರುವ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಗವರ್ನರ್ ಶಕ್ತಿಕಾಂತ್ ದಾಸ್, "2000 ರೂಪಾಯಿ ನೋಟು ಚಲಾವಣೆಯಿಂದ ಹಿಂಪಡೆಯುವ ಘೋಷಣೆಯನ್ನು ಕಳೆದ ತಿಂಗಳು ಆರ್‌ಬಿಐ ಮಾಡಿದೆ. ಆದರೆ ಇದು ದೇಶದ ಆರ್ಥಿಕತೆಯ ಮೇಲೆ ಯಾವುದೇ ನೆಗೆಟಿವ್ ಪ್ರಭಾವವನ್ನು ಉಂಟು ಮಾಡಿಲ್ಲ," ಎಂದು ತಿಳಿಸಿದ್ದಾರೆ.
ಪಿಟಿಐ ನಡೆಸಿದ್ದ ಸಂದರ್ಶನದಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್, "ನಾವು ಒಂದು ವಿಷಯವನ್ನು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ. ನಾವು ಪ್ರಸ್ತುತ 2000 ರೂಪಾಯಿ ನೋಟನ್ನು ಚಲಾವಣೆಯಿಂದ ವಾಪಾಸ್ ಪಡೆಯುತ್ತಿರುವುದು ನಮ್ಮ ದೇಶದ ಆರ್ಥಿಕತೆಯ ಮೇಲೆ ಯಾವುದೇ ನೆಗೆಟಿವ್ ಪ್ರಭಾವವನ್ನು ಉಂಟು ಮಾಡುವುದಿಲ್ಲ," ಎಂದು ಹೇಳಿದ್ದಾರೆ.
More From GoodReturns

ಆರ್‌ಬಿಐ ನಿರ್ಧಾರದ ಮುನ್ನ ನಿಮ್ಮ ಹಣ ಸುರಕ್ಷಿತವೇ?

ಷೇರು ಮಾರುಕಟ್ಟೆ ಕುಸಿತದ ಭೀತಿ: ಹೂಡಿಕೆದಾರರೇ ಎಚ್ಚರವಿರಲಿ!

ಚಿನ್ನದ ಬೆಲೆ ಸ್ಥಿರ: ಆರ್‌ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್‌ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್‌ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಆರ್‌ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಗೃಹ ಸಾಲದ ಇಎಂಐ ಇಳಿಕೆ: ಆರ್‌ಬಿಐ ನಿರ್ಧಾರದ ಅಸಲಿ ಸತ್ಯ

ಆರ್‌ಬಿಐ ರೆಪೋ ದರ ಸ್ಥಿರ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಚಿನ್ನದ ಬೆಲೆ ಏರಿಕೆ: ಹೂಡಿಕೆದಾರರೇ ಎಚ್ಚರ, ಈ ತಪ್ಪು ಮಾಡಬೇಡಿ!

ಆರ್‌ಬಿಐ ರೆಪೋ ದರ: ನಿಮ್ಮ ಇಎಂಐ ಹೊರೆ ಹೆಚ್ಚಾಗುತ್ತಾ?



Click it and Unblock the Notifications