ಗುವಾಹಟಿ, ಮಾರ್ಚ್ 27: ಅಸ್ಸಾಂನ ಉದಲಗಿರಿ ಜಿಲ್ಲೆಯ ಭೈರಗುರಿಯಲ್ಲಿ ಗ್ರಾಮ ಸಭೆ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ನೋಟುಗಳನ್ನೇ ಹಾಸಿಗೆ ಮಾಡಿಕೊಂಡು ಅದರ ಮೇಲೆ ಮಲಗಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಹಲವಾರು ನೋಟುಗಳ ಕಟ್ಟುಗಳು ವ್ಯಕ್ತಿಯ ದೇಹದ ಮೇಲೂ ಬಿದ್ದಿವೆ. ರಾಜಕಾರಣಿಯನ್ನು ಬೆಂಜಮಿನ್ ಬಾಸುಮತರಿ ಎಂದು ಗುರುತಿಸಲಾಗಿದೆ. ಎಲ್ಲಾ ನೋಟುಗಳು 500 ರೂ., ಎಂದು ಫೋಟೋದಲ್ಲಿ ಕಂಡು ಬಂದಿದೆ.

ಭ್ರಷ್ಟಾಚಾರ ಪ್ರಕರಣದ ಆರೋಪಿ
ಪ್ರಧಾನ ಮಂತ್ರಿಗಳ ವಸತಿ ಯೋಜನೆ ಮತ್ತು ಗ್ರಾಮೀಣ ಉದ್ಯೋಗ ಯೋಜನೆಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಬೋಡೋಲ್ಯಾಂಡ್‌ನ ನಾಯಕ ಬೆಂಜಮಿನ್ ಬಾಸುಮತರಿ ಆರೋಪಿಯಾಗಿದ್ದಾನೆ ಎಂದು ವರದಿಗಳು ತಿಳಿಸಿವೆ. ಪಿಎಂಎವೈ ಮತ್ತು ಎಂಜಿಎನ್‌ಆರ್‌ಇಜಿಎ ಯೋಜನೆಗಳ ಬಡ ಫಲಾನುಭವಿಗಳಿಂದ ಲಂಚ ಪಡೆದಿದ್ದಾರೆ ಎಂದು ಆರೋಪ ಇದೆ.
ಫೋಟೋ ವೈರಲ್ ಆದ ನಂತರ, ಸಾಮಾಜಿಕ ಮಾಧ್ಯಮದಲ್ಲಿ ನೆಟ್ಟಿಗರು ರಾಜಕಾರಣಿ ವಿರುದ್ಧ ಸಿಡಿದೆದ್ದಿದ್ದಾರೆ. ಭ್ರಷ್ಟಾಚಾರ ವಿರೋಧಿ ನಿಲುವಿಗೆ ಹೆಸರುವಾಸಿಯಾದ ಬೋಡೋಲ್ಯಾಂಡ್ ಮೂಲದ ಯುನೈಟೆಡ್ ಪೀಪಲ್ಸ್ ಪಾರ್ಟಿ ಲಿಬರಲ್ (UPPL) ನ ಭಾಗವಾಗಿದ್ದಾರೆಯೇ ಎಂದು ಜನರು ಆತನನ್ನು ಪ್ರಶ್ನಿಸಿದ್ದಾರೆ. ಜನರು ಇಂತಹ ಪ್ರಶ್ನೆಗಳನ್ನು ಎತ್ತುತ್ತಿದ್ದಂತೆ, ಯುಪಿಪಿಎಲ್ ಮುಖ್ಯಸ್ಥ ಪ್ರಮೋದ್ ಬೋರೋ ಈ ವ್ಯಕ್ತಿಗೂ ಪಕ್ಷದೊಂದಿಗೆ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಪ್ರಮೋದ್ ಬೋರೋ ಎಕ್ಸ್‌ನಲ್ಲಿ, "ಬೆಂಜಮಿನ್ ಬಾಸುಮತ್ರಿಯ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಡುತ್ತಿದೆ. 2024 ರ ಜನವರಿ 10 ರಂದು ಅವರನ್ನು ಪಕ್ಷದಿಂದ ಅಮಾನತುಗೊಳಿಸಿದ್ದರಿಂದ ಮತ್ತು 5 ನೇ ಜನವರಿ, 2024 ರಂದು ಯುಪಿಪಿಎಲ್, ಹರಿಸಿಂಗ ಬ್ಲಾಕ್ ಕಮಿಟಿಯಿಂದ ಪತ್ರವನ್ನು ಸ್ವೀಕರಿಸಿದ ನಂತರ ಅವರ ವಿರುದ್ಧ ಶಿಸ್ತು ಕ್ರಮವನ್ನು ತೆಗೆದುಕೊಳ್ಳಲಾಗಿದೆ ಬಾಸುಮತಿಯನ್ನು ಇನ್ನು ಮುಂದೆ UPPL ನೊಂದಿಗೆ ಸಂಬಂಧ ಹೊಂದಿಲ್ಲ ಎಂದು ನಾವು ಸ್ಪಷ್ಟಪಡಿಸಲು ಬಯಸುತ್ತೇವೆ ಎಂದು ಪೋಸ್ಟ್‌ನಲ್ಲಿ ಬರೆದಿದ್ದಾರೆ.
ಫೆಬ್ರವರಿ 10, 2024 ರಂದು ರಾಜಕಾರಣಿಯನ್ನು ವಿಸಿಡಿಸಿ ಅಧ್ಯಕ್ಷ ಸ್ಥಾನದಿಂದ ತೆಗೆದುಹಾಕಲಾಗಿದೆ. ಅವರು ಬಾಸುಮತಿಯನ್ನು UPPL ನೊಂದಿಗೆ ಲಿಂಕ್ ಮಾಡದಂತೆ ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಅವರು ಕೇಳಿಕೊಂಡಿದ್ದಾರೆ. ಅವರ ಕೃತ್ಯಗಳಿಗೆ ಅ ರಾಜಕಾರಣಿಯೇ ಹೊಣೆ ಎಂದು ಹೇಳಿದ್ದಾರೆ.


Click it and Unblock the Notifications