ನಟ ಅಲ್ಲು ಅರ್ಜುನ್‌ಗೆ ರಿಲೀಫ್​​! ಹೈಕೋರ್ಟ್‌ನಿಂದ ಮಧ್ಯಂತರ ಜಾಮೀನು; ಈಗ 'ಪುಷ್ಪ' ರಾಜ್ ಎಲ್ಲಿದ್ದಾರೆ?

ಪುಷ್ಪ 2 ಚಿತ್ರದ ಪ್ರದರ್ಶನದ ವೇಳೆ ಸಂಧ್ಯಾ ಥಿಯೇಟರ್‌ನಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ನಟ ಅಲ್ಲು ಅರ್ಜುನ್​ಗೆ ತೆಲಂಗಾಣ ಹೈಕೋರ್ಟ್​ ಇಂದು ಮಧ್ಯಂತರ ಜಾಮೀನು ನೀಡಿದೆ.

ಡಿಸೆಂಬರ್ 4ರಂದು ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಪುಷ್ಪ 2 ಚಿತ್ರದ ಪ್ರದರ್ಶನದ ವೇಳೆ ಕಾಲ್ತುಳಿತ ಉಂಟಾಗಿ ಮಹಿಳೆಯೊಬ್ಬರು ಮೃತಪಟ್ಟು, ಆಕೆಯ ಮಗ ಗಂಭೀರವಾಗಿ ಗಾಯಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹೈದರಾಬಾದ್ ಪೊಲೀಸರು ನಟ ಅಲ್ಲು ಅರ್ಜುನ್‌ ಅವರನ್ನು ಬಂಧಿಸಿದ್ದರು. ನಟ ಅಲ್ಲು ಅರ್ಜುನ್ ಅವರನ್ನುಇದಕ್ಕೂ ಮುನ್ನ ನಾಂಪಲ್ಲಿ ಕೋರ್ಟ್‌ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಹೀಗಾಗಿ, ಪೊಲೀಸರು ನಟನನ್ನು ಚಂಚಲ್‌ಗುಡ ಜೈಲಿಗೆ ರವಾನಿಸಲು ಸಿದ್ಧತೆ ನಡೆಸುತ್ತಿದ್ದರು.

ನಟ ಅಲ್ಲು ಅರ್ಜುನ್‌ಗೆ ರಿಲೀಫ್​​! ಹೈಕೋರ್ಟ್‌ನಿಂದ ಮಧ್ಯಂತರ ಜಾಮೀನು

ನಾಂಪಲ್ಲಿ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಆದೇಶಿಸಿತ್ತಾದರೂ, ಹೈಕೋರ್ಟ್​​ನಿಂದ ಮಧ್ಯಂತರ ಜಾಮೀನು ಮಂಜೂರಾಗಿದೆ. ಪತ್ರಕರ್ತ ಅರ್ನಬ್ ಗೋಸ್ವಾಮಿ ಪ್ರಕರಣದಲ್ಲಿ ಬಾಂಬೆ ಕೋರ್ಟ್ ನೀಡಿದ ತೀರ್ಪಿನ ಆಧಾರದ ಮೇಲೆ ಹೈಕೋರ್ಟ್ ಈ ಆದೇಶ ಹೊರಡಿಸಿದೆ.

ಅಲ್ಲು ಅರ್ಜುನ್ ಅರೆಸ್ಟ್ ಆಗಲು ಕಾರಣವೇನು?

ಡಿಸೆಂಬರ್ 4ರಂದು ಸಂಧ್ಯಾ ಸಿನಿಮಾ ಥಿಯೇಟರ್‌ನಲ್ಲಿ ಮಧ್ಯರಾತ್ರಿ ವೇಳೆ ನಡೆದ ಪ್ರೀಮಿಯರ್ ಶೋ ವೇಳೆ ರೇವತಿ ಎಂಬ ಮಹಿಳೆ ಸಾವನ್ನಪ್ಪಿದ್ದಳು. ಆಗ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದರು. ಈ ವೇಳೆಯಲ್ಲಿ ಅಲ್ಲು ಅರ್ಜುನ್ ಯಾವುದೇ ಸುರಕ್ಷತೆ ಕ್ರಮ ತಗೆದುಕೊಳ್ಳದೇ ಥಿಯೇಟರ್‌ಗೆ ಆಗಮಿಸಿದ್ದರು. ನಾಯಕನನ್ನು ನೋಡಲು ಜನರು ಗೇಟ್‌ನತ್ತ ನುಗ್ಗಿದ್ದರು. ಈ ವೇಳೆ ಕಾಲ್ತುಳಿತ ಉಂಟಾಗಿತ್ತು. ಹೀಗಾಗಿ ಅರ್ಜುನ್ ವಿರುದ್ಧ 105, 118 (5) ಸೆಕ್ಷನ್ ಅಡಿಯಲ್ಲಿ ದೂರು ದಾಖಲೆಯಾಗಿತ್ತು.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+