ಅದಾನಿ ಗ್ರೂಪ್ ಸ್ಟಾಕ್ ಮಾರುಕಟ್ಟೆಯಲ್ಲಿ ವಂಚನೆಯನ್ನು ಮಾಡಿದೆ ಎಂಬ ವರದಿಯ ಬಳಿಕ ಅದಾನಿ ಸ್ಟಾಕ್‌ಗಳು ಭಾರೀ ಇಳಿಕೆ ಕಂಡಿದೆ. ಅದಾನಿ ಗ್ರೂಪ್‌ಗೆ ನಷ್ಟ ಉಂಟಾಗಿದೆ. ಅದಾನಿ ಗ್ರೂಪ್ ಮಂಗಳವಾರ 7,374 ಕೋಟಿ ರೂಪಾಯಿಗಳ ಪ್ರಿಪೇಯ್ಡ್ ಷೇರು-ಬೆಂಬಲಿತ ಹಣಕಾಸು ಸಂಸ್ಥೆಗಳ ಸಾಲವನ್ನು ಮರುಪಾವತಿ ಮಾಡಿದೆ. ಹೂಡಿಕೆದಾರರ ವಿಶ್ವಾಸವನ್ನು ಮರಳಿ ಪಡೆಯಲು ಸಾಲವನ್ನು ಕಡಿಮೆ ಮಾಡುವುದರ ಮೇಲೆ ಕೇಂದ್ರೀಕೃತವಾಗಿದೆ.
ಈ ಎಲ್ಲ ಬೆಳವಣಿಗೆಯೂ ಹಿಂಡನ್‌ಬರ್ಗ್ ವರದಿಯ ಬಳಿಕ ನಡೆದಿದೆ. ಹಿಂಡನ್‌ಬರ್ಗ್ ವರದಿಯ ಬಳಿಕ ಅದಾನಿ ಗ್ರೂಪ್‌ನ 10 ಪಟ್ಟಿ ಮಾಡಲಾದ ಕಂಪನಿಗಳ ಸ್ಟಾಕ್‌ಗಳು ಮಾರುಕಟ್ಟೆಯಲ್ಲಿ ಭಾರೀ ನಷ್ಟಕ್ಕೆ ಒಳಗಾಗಿದೆ. ಆದರೆ ಅದಾನಿ ಗ್ರೂಪ್ ಹಿಂಡನ್‌ಬರ್ಗ್ ವರದಿಯನ್ನು ನಿರಾಕರಿಸಿದೆ. ಆದರೂ ಸ್ಟಾಕ್ ಮಾರುಕಟ್ಟೆಯಲ್ಲಿ ಅದಾನಿ ಗ್ರೂಪ್‌ಗೆ ಭಾರೀ ನಷ್ಟ ಉಂಟಾಗಲಿದೆ. ಅದಾನಿ ಗ್ರೂಪ್ ನಂತರ ಸಾಲವನ್ನು ಕಡಿಮೆ ಮಾಡುವ ಕಾರ್ಯತಂತ್ರಕ್ಕೆ ಆದ್ಯತೆ ನೀಡಲು ನಿರ್ಧರಿಸಿದೆ.

ಗುಂಪು ಇತ್ತೀಚೆಗೆ ಹಾಂಗ್ ಕಾಂಗ್ ಮತ್ತು ಸಿಂಗಾಪುರದಲ್ಲಿ ರೋಡ್‌ಶೋವನ್ನು ನಡೆಸಿದ್ದು, ಅಲ್ಲಿ ಹೂಡಿಕೆದಾರರಿಗೆ ತನ್ನ ಸಾಲವನ್ನು ಪೂರೈಸಲು ಉತ್ತಮ ಸ್ಥಾನದಲ್ಲಿದೆ ಎಂದು ಅದಾನಿ ಗ್ರೂಪ್ ಭರವಸೆ ನೀಡಿದೆ. ಅದಾನಿ ಗ್ರೂಪ್ ಮಾರ್ಚ್ 7 ರಿಂದ 15 ರವರೆಗೆ ದುಬೈ, ಲಂಡನ್ ಮತ್ತು ಯುನೈಟೆಡ್ ಸ್ಟೇಟ್ಸ್‌ನಲ್ಲಿ ಹೆಚ್ಚಿನ ರೋಡ್‌ಶೋಗಳನ್ನು ನಡೆಸಲು ನಿರ್ಧರಿಸಲಾಗಿದೆ.
ಸಾಲ ಮರುಪಾವತಿ ಮಾಡುವ ಮಾಹಿತಿ
ಅದಾನಿ ಎಂಟರ್‌ಪ್ರೈಸಸ್ ಶೇಕಡ 4ರಷ್ಟು ಅಂದರೆ 31 ಮಿಲಿಯನ್ ಷೇರುಗಳನ್ನು ರಿಲೀಸ್ ಮಾಡಲಿದೆ ಎಂದು ಈ ಬಗ್ಗೆ ಮಾಹಿತಿ ನೀಡಿದ ಅದಾನಿ ಗ್ರೂಪ್ ಸ್ಟೇಟ್‌ಮೆಂಟ್‌ನಲ್ಲಿ ತಿಳಿಸಿದೆ. ಅದಾನಿ ಪೋರ್ಟ್ಸ್ ಮತ್ತು ವಿಶೇಷ ಇಕಾನಮಿಕ್ ಜೋನ್ 155 ಮಿಲಿಯನ್ ಅಥವಾ ಶೇಕಡ 11.8ರಷ್ಟು ಷೇರುಗಳನ್ನು ಬಿಡುಗಡೆ ಮಾಡಲಿದೆ. ಅದಾನಿ ಗ್ರೀನ್ ಎನರ್ಜಿ ಮತ್ತು ಅದಾನಿ ಟ್ರಾನ್ಸ್‌ಮಿಷನ್ ಕ್ರಮವಾಗಿ ಶೇಕಡ 1.2ರಷ್ಟು, ಶೇಕಡ 4.5ರಷ್ಟು ಸ್ಟಾಕ್ ಅನ್ನು ರಿಲೀಸ್ ಮಾಡಲಿದ್ದಾರೆ.
ಅದಾನಿ ಗ್ರೂಪ್ ಸ್ಟಾಕ್ ಮಾರುಕಟ್ಟೆಯಲ್ಲಿ ವಂಚನೆ ಮಾಡಿದೆ ಎಂದು ಹಿಂಡನ್‌ಬರ್ಗ್ ವರದಿಯ ಬಳಿಕ ಸ್ಟಾಕ್ ಮಾರುಕಟ್ಟೆಯಲ್ಲಿ ಅದಾನಿ ಗ್ರೂಪ್ ನಷ್ಟವನ್ನು ಕಂಡಿದೆ. ಆದರೆ ಕಳೆದ ಎರಡು ದಿನಗಳಿಂದ ಅದಾನಿ ಗ್ರೂಪ್ ಸ್ಟಾಕ್ ಭಾರೀ ಏರಿಕೆಯಾಗುತ್ತಿದೆ. ಅದಾನಿ ಎಂಟರ್‌ಪ್ರೈಸಸ್ ಸ್ಟಾಕ್ ಶೇಕಡ 30ರಷ್ಟು ಏರಿಕೆಯಾಗಿದೆ. ಅದಾನಿ ಗ್ರೂಪ್‌ನ ನಿವ್ವಳ ಆದಾಯವು 39,000 ಕೋಟಿ ರೂಪಾಯಿ ಏರಿಕೆಯಾಗಿ, 7.50 ಲಕ್ಷ ಕೋಟಿ ರೂಪಾಯಿಗೆ ತಲುಪಿದೆ.
ಹಿಂಡನ್‌ಬರ್ಗ್ ವರದಿ ಏನು ಹೇಳಿದೆ?
ಹಿಂಡನ್‌ಬರ್ಗ್ ತನಿಖಾ ವರದಿಯು ಅದಾನಿ ಗ್ರೂಪ್ ವಂಚನೆಯನ್ನು ಭಾಗಿಯಾಗಿದೆ. ದಶಕಗಳಿಂದ ವಂಚನೆ ನಡೆಸುತ್ತಿದೆ. ಅದಾನಿ ಗ್ರೂಪ್ ಬಗ್ಗೆ ಸುಮಾರು ಎರಡು ವರ್ಷಗಳ ಕಾಲ ತನಿಖೆಯನ್ನು ನಡೆಸಿ ವರದಿ ನೀಡಲಾಗಿದೆ. ಅದಾನಿ ಗ್ರೂಪ್‌ನ ಹಲವಾರು ವ್ಯಕ್ತಿಗಳ ಸಂದರ್ಶನ ಮಾಡಲಾಗಿದೆ. ಮಾಜಿ ಹಿರಿಯ ಅಧಿಕಾರಿಗಳ ಸಂದರ್ಶನವನ್ನು ಕೂಡಾ ಮಾಡಲಾಗಿದೆ. ದಾಖಲೆಗಳು ನಮ್ಮಲ್ಲಿದೆ ಎಂದು ಹಿಂಡನ್‌ಬರ್ಗ್ ಮಾಹಿತಿ ನೀಡಿದೆ.
ಜನವರಿ 24ರಂದು ವರದಿ ಬಿಡುಗಡೆ ಮಾಡಿರುವ ಹಿಂಡನ್‌ಬರ್ಗ್, ಅದಾನಿ ಗ್ರೂಪ್ ಸ್ಟಾಕ್ ಮಾರುಕಟ್ಟೆಯಲ್ಲಿ ವಂಚನೆ ಮಾಡಿರುವ ಬಗ್ಗೆ ನಾವು ಹಲವಾರು ದಾಖಲೆಗಳನ್ನು ಪರಿಶೀಲನೆ ಮಾಡಿದ್ದೇವೆ. 12ರಷ್ಟು ದೇಶಗಳಿಗೆ ಭೇಟಿ ನೀಡಿ ಸ್ವತಃ ಸ್ಥಳ ಪರಿಶೀಲನೆ ಮಾಡಿದ್ದೇವೆ. ಇದರಿಂದಾಗಿ ಅದಾನಿ ಗ್ರೂಪ್‌ಯು ವಂಚನೆಯನ್ನು ನಡೆಸುತ್ತಿದೆ ಎಂದು ತಿಳಿದುಬಂದಿದೆ ಎಂದು ವರದಿ ಹೇಳಿದೆ.
ಅದಾನಿ ಕುಟುಂಬದ ಸದಸ್ಯರು ಹಾಗೂ ಕಂಪನಿಗೆ ಸಂಬಂಧಿಸಿದ ಅಧಿಕಾರಿಗಳು ಮಾರಿಷಸ್, ಯುಎಇ ಮತ್ತು ಕೆರಿಬಿಯನ್ ದ್ವೀಪಗಳಲ್ಲಿ ಕಡಲಾಚೆಯ ಶೆಲ್ ಘಟಕಗಳನ್ನು ರಚಿಸಲು ಸಹಕರಿಸಿದ್ದಾರೆ. ನಕಲಿ ಅಥವಾ ಕಾನೂನುಬಾಹಿರ ವಹಿವಾಟು ಮತ್ತು ಲಿಸ್ಟೆಡ್ ಕಂಪನಿಗಳಿಂದ ಹಣವನ್ನು ಪಡೆಯುವ ಪ್ರಯತ್ನ ಮಾಡಿದ್ದಾರೆ. ನಕಲಿ ಆಮದು/ರಫ್ತು ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ಹಿಂಡೆನ್‌ಬರ್ಗ್ ತನ್ನ ತನಿಖಾ ವರದಿಯಲ್ಲಿ ತಿಳಿಸಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Bengaluru Gold Rate: ಜಾಗತಿಕ ಉದ್ವಿಗ್ನತೆ ಪರಿಣಾಮ ಚಿನ್ನದ ಬೆಲೆಯಲ್ಲಿ ಏರಿಕೆ-ನಿನ್ನೆಗಿಂತ 9,300 ಕುಸಿತ



Click it and Unblock the Notifications