ಲೋಹದ ಹಕ್ಕಿಗಳ ಹಾರಾಟಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು,ಏಷ್ಯಾದ ಅತಿದೊಡ್ಡ ಏರೋ ಶೋ( Aero Show) 15 ನೇ ಆವೃತ್ತಿಗೆ ದಿನಗಣನೆ ಶುರುವಾಗಿದೆ. ಏರೋ ಶೋ ಇರುವ ಕಾರಣ ವಾಯುಪ್ರದೇಶವನ್ನು ಮುಚ್ಚುವ ಪರಿಷ್ಕೃತ ಸಮಯ ಪಟ್ಟಿಯನ್ನು ಕೆಐಎ ಪ್ರಕಟಿಸಿದೆ.
ಹೌದು,ಲೋಹದ ಹಕ್ಕಿಗಳ ಹಾರಾಟ ಫೆಬ್ರವರಿ 5 ರಿಂದ 14ರವರೆಗೆ ನಡೆಯಲಿದೆ ಈ ದಿನಗಳಲ್ಲಿ ಕೆಲ ಅವಧಿಗಳಲ್ಲಿ ವಾಯುಪ್ರದೇಶವನ್ನು ಮುಚ್ಚುವುದಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ಮಾಹಿತಿಯನ್ನು ತಿಳಿಸಿದೆ.

ಈಗಲೇ ಏರೋ ಇಂಡಿಯಾ ಕಾರ್ಯಕ್ರಮದ ಸಿದ್ಧತೆಗಳು ನಡೆಯುತ್ತಿರುವುದರಿಂದ ಈ ನಿರ್ಬಂಧಗಳು ಈ ಪ್ರದೇಶದಲ್ಲಿ ವಿಮಾನ ಸಂಚಾರದ ಮೇಲೆ ಪರಿಣಾಮವನ್ನು ಬೀರುತ್ತವೆ. ಮುಂದಿನ ತಿಂಗಳು ಫೆಬ್ರವರಿ 10 ರಿಂದ 14 ರವರೆಗೆ ನಡೆಯಲಿದೆ.
ಏರೋ ಇಂಡಿಯಾ ಪ್ರದರ್ಶನ ನಡೆಯಲಿರುವುದರಿಂದ ಬಿಎಲ್‌ಆರ್ ವಿಮಾನ ನಿಲ್ದಾಣದ ಮೂಲಕ ಪ್ರಯಾಣಿಸುವ ಪ್ರಯಾಣಿಕರು ಆಯಾ ವಿಮಾನಯಾನ ಸಂಸ್ಥೆಯು ಸೂಚಿಸಿದಂತೆ ಪರಿಷ್ಕೃತ ವಾಯುಪ್ರದೇಶ ಮುಚ್ಚುವ ಸಮಯ ಮತ್ತು ವಿಮಾನ ವೇಳಾಪಟ್ಟಿಗಳ ಕುರಿತು ಮಾಹಿತಿಯನ್ನು ತಿಳಿಸಿದೆ. ಇದನ್ನು ಗಮನದಲಿಟ್ಟುಕೊಂಡು ವಿಮಾನಯಾನದ ಟಿಕೆಟ್ ಬುಕ್ ಮಾಡಿಕೊಂಡು ಸಂಚಾರ ಮಾಡಬೇಕೆಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು (ಬಿಎಲ್‌ಆರ್ ವಿಮಾನ ನಿಲ್ದಾಣ) ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.
ಪರಿಷ್ಕೃತ ಸಮಯದ ವೇಳಾಪಟ್ಟಿಯ ವಿವರ ಹೀಗಿದೆ
*ಫೆಬ್ರವರಿ 5, 6 ಮತ್ತು 8ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 12ರವರೆಗೆ ಮತ್ತು ಮಧ್ಯಾಹ್ನ 3ರಿಂದ 4.30
*ಫೆಬ್ರವರಿ 7 ಬೆಳಿಗ್ಗೆ 9ರಿಂದ 11ರವರೆಗೆ ಮತ್ತು ಮಧ್ಯಾಹ್ನ 3 ರಿಂದ ಸಂಜೆ 4.30
*ಫೆಬ್ರವರಿ 8 ಬೆಳಿಗ್ಗೆ 9ರಿಂದ ಮಧ್ಯಾಹ್ನ 12ರವರೆಗೆ ಮತ್ತು ಮಧ್ಯಾಹ್ನ 3ರಿಂದ 4.30
*ಫೆಬ್ರವರಿ 9 ಬೆಳಿಗ್ಗೆ 9ರಿಂದ 11ರವರೆಗೆ ಮತ್ತು ಮಧ್ಯಾಹ್ನ 3 ರಿಂದ ಸಂಜೆ 4.30
*ಫೆಬ್ರವರಿ 10ರಂದು ಬೆಳಿಗ್ಗೆ 9ರಿಂದ 11.30ರವರೆಗೆ ಮತ್ತು ಮಧ್ಯಾಹ್ನ 2.30ರಿಂದ 3.30
*ಫೆಬ್ರವರಿ 11 ಮತ್ತು 12ರಂದು ಮಧ್ಯಾಹ್ನ 12ರಿಂದ 2.30
*ಫೆಬ್ರವರಿ 13 ಮತ್ತು 14ರಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ12ರವರೆಗೆ ಮತ್ತು ಮಧ್ಯಾಹ್ನ 2.30ರಿಂದ ಸಂಜೆ 5ರವರೆಗೆ ವಾಯುಪ್ರದೇಶವನ್ನು ಮುಚ್ಚಲಾಗುವುದು ಎಂದು ಮಾಹಿತಿಯನ್ನು ತಿಳಿಸಿದೆ.
ಯಲಹಂಕ ವಾಯುಪಡೆ ನಿಲ್ದಾಣದ ಸುತ್ತಮುತ್ತ ಮಾಂಸ ಮಾರಾಟ ನಿಷೇಧ
ಏರೋ ಶೋ ಹಿನ್ನೆಲೆಯಲ್ಲಿ ಜನವರಿ 23 ರಿಂದ ಫೆಬ್ರವರಿ 17 ರವರೆಗೆ ಯಲಹಂಕ ವಾಯುಪಡೆ ನಿಲ್ದಾಣದ 13 ಕಿಮೀ ವ್ಯಾಪ್ತಿಯೊಳಗಿನ ಮಾಂಸದ ಅಂಗಡಿಗಳು ಮತ್ತು ಮಾಂಸಾಹಾರಿ ರೆಸ್ಟೋರೆಂಟ್‌ಗಳನ್ನು ಮುಚ್ಚುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಾರ್ವಜನಿಕ ಸೂಚನೆ ನೀಡಿದೆ.ಫೆಬ್ರವರಿ 10 ರಿಂದ 14 ರವರೆಗೆ ನಡೆಯಲಿರುವ ಏರೋ ಇಂಡಿಯಾ ಪ್ರದರ್ಶನಕ್ಕೆ ಮುನ್ನೆಚ್ಚರಿಕೆಯಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಬಿಎಂಪಿ ಮಾಹಿತಿಯನ್ನು ತಿಳಿಸಿದೆ.
ಏರೋ ಶೋ ಕಾರ್ಯಕ್ರಮದ ಸಮಯದಲ್ಲಿ ವಿಮಾನಗಳ ಮೇಲೆ ಪಕ್ಷಿ ಡಿಕ್ಕಿ ಹೊಡೆಯುವುದನ್ನು ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಬಿಎಂಪಿ ಮೂಲಗಳು ತಿಳಿಸಿವೆ.
ಈ ಆದೇಶವನ್ನು ಉಲ್ಲಂಘಿಸಿದರೆ ಬಿಬಿಎಂಪಿ ಕಾಯ್ದೆ 2020 ಮತ್ತು ಭಾರತೀಯ ವಿಮಾನ ನಿಯಮಗಳು 1937, ನಿಯಮ 91 ರ ಅಡಿಯಲ್ಲಿ ದಂಡ ವಿಧಿಸಲಾಗುವುದು ಎಂದು ಬಿಬಿಎಂಪಿ ಎಚ್ಚರಿಕೆಯ ಸಂದೇಶವನ್ನು ನೀಡಿದೆ.
ಏರ್ ಶೋಗೆ ಆಗಮಿಸುವವರಿಗೆ ಪಾರ್ಕಿಂಗ್ ವ್ಯವಸ್ಥೆ, ಉಚಿತ ಬಸ್ ವ್ಯವಸ್ಥೆಯನ್ನು ವಾಯುಪಡೆ ಮಾಡುತ್ತಿದೆ. 15ನೇ ಆವೃತ್ತಿಯ ಏರ್ ಶೋ ಇದಾಗಿದ್ದು, ಲಕ್ಷಾಂತರ ಜನ ಆಗಮಿಸುವ ನಿರೀಕ್ಷೆ ಇದೆ.
ಏರೋ ಶೋಗೆ ದೇಶ ವಿದೇಶದಿಂದ ಗಣ್ಯರು ಭಾಗಿ
ಏಷ್ಯಾದ ಅತಿದೊಡ್ಡ ಏರೋ ಶೋ ಕಾರ್ಯಕ್ರಮ 1996ರಲ್ಲಿ ಶುರುವಾಗಿತು. ಅವತ್ತಿನಿಂದ ಇಲ್ಲಿಯವರೆಗೂ ಏರೋ ಇಂಡಿಯಾ ಪ್ರದರ್ಶನದ ಸರಣಿಯು ಪ್ರತಿ ಎರಡು ವರ್ಷಕ್ಕೊಮ್ಮೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆಯುತ್ತದೆ.ಈ ಕಾರ್ಯಕ್ರಮದ ಸಮಾವೇಶದಲ್ಲಿ ರಕ್ಷಣಾ ಸಚಿವರು ಹಾಗೂ ರಾಜ್ಯ ಖಾತೆ ರಕ್ಷಣಾ ಸಚಿವರು ಸೇರಿದಂತೆ ರಕ್ಷಣಾ ಸಿಬ್ಬಂದಿ ಮುಖ್ಯಸ್ಥರು ಹಾಗೂ ಮೂರು ಪಡೆಗಳ ಮುಖ್ಯಸ್ಥರು ಮತ್ತು ರಕ್ಷಣಾ ಕಾರ್ಯದರ್ಶಿಗಳು ಭಾಗವಿಹಿಸಲಿದ್ದಾರೆ. ಇವರ ಜೊತೆಗೆ ದೇಶ ವಿದೇಶದಿಂದ ಏರೋ ಶೋ ನೋಡಲು ದೇಶದ ಪ್ರಮುಖ ನಾಯಕರು ಮತ್ತು ಜನರು ಹೆಚ್ಚಾಗಿ ಆಗಮಿಸುತ್ತಾರೆ. ಈ ಬಾರಿಯ ಏರ್ ಶೋ ಆವೃತ್ತಿಯಲ್ಲಿ ಹೊಸ ಪಾಲುದಾರಿಕೆ ರೂಪಿಸಲು ಮತ್ತು ದೇಶೀಯ ಪ್ರಕ್ರಿಯೆಯನ್ನು ವೇಗವಾಗಿ ಹುಡುಕಲು ಕೆಲವು ಯೋಜನೆ ರೂಪಿಸಲಾಗಿದೆ. ಈ ಭಾಗವಾಗಿ ರಕ್ಷಣಾ ಸಚಿವರ ಕಾನ್ಕ್ಲೇವ್, ಉದ್ಯಮ ಸಂಸ್ಥೆಗಳಲ್ಲಿನ ಸಿಇಒಗಳ ಚಿಂತನ ಮಂಥನ ಸಭೆ ಹಾಗೂ ದೇಶೀಯ ಉತ್ಪನ್ನ ಸಾಮರ್ಥ್ಯಗಳ ಪ್ರದರ್ಶನ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತದೆ.
ಏರ್ ಶೋ ವೇಳೆಯಲ್ಲಿ ಭಾರತದ ಮಿತ್ರ ರಾಷ್ಟ್ರಗಳ ರಕ್ಷಣಾ ಸಚಿವರೊಂದಿಗೆ ರಕ್ಷಣಾ ಕ್ಷೇತದ ಸಹಭಾಗಿತ್ವದ ಕುರಿತು ಬಿಆರ್ಐಡಿಜಿಇ ಅಂತರ್‌ರಾಷ್ಟ್ರೀಯ ರಕ್ಷಣೆ ಮತ್ತು ಜಾಗತಿಕದ ಮೂಲಕ ಸ್ಥಿತಿಸ್ಥಾಪಕತ್ವವನ್ನು ನಿರ್ಮಿಸುವುದಕ್ಕಾಗಿ ಸಮಾವೇಶವನ್ನು ಕೂಡ ಹಮ್ಮಿಕೊಳ್ಳಲಾಗಿದೆ.
ಈ ಸಲ ಏರೋ ಶೋ ಹಲವಾರು ಹೊಸ ಹೊಸ ಯೋಜನೆಗಳು, ಸ್ವದೇಶಿ ಉದ್ಯಮಕ್ಕೆ ಬೆಂಬಲ,ಮೇಕ್ ಇನ್ ಇಂಡಿಯಾ, ಹೀಗೆ ಹಲವಾರು ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಲಿದೆ.ಈ ಮೂಲಕ 15ನೇ ಆವೃತ್ತಿಯು ಈ ಬಾರಿ ಹೊಸ ಮೈಲಿಗಲ್ಲು ಸ್ಥಾಪಿಸಲಿದೆ.


Click it and Unblock the Notifications