ಕೊರೊನಾವೈರಸ್‌ನಿಂದ ದೇಶಪೂರ್ಣ ಲಾಕ್‌ಡೌನ್ ಹಿನ್ನೆಲೆ ಬಹುತೇಕ ಎಲ್ಲಾ ಉದ್ಯಮಗಳು ನೆಲಕಚ್ಚಿವೆ. ಅದರಲ್ಲೂ ವಿಮಾನಯಾನ ಸಂಸ್ಥೆಗಳು ಕೂಡ ಭಾರೀ ನಷ್ಟ ಅನುಭವಿಸಿವೆ. ಒಂದರ ಬೆನ್ನ ಹಿಂದೆ ಮತ್ತೊಂದು ವಿಮಾನಯಾನ ಸಂಸ್ಥೆಗಳು ಉದ್ಯೋಗಿಗಳ ವೇತನವನ್ನು ಕಡಿತಗೊಳಿಸುತ್ತಿವೆ. ಇನ್ನೂ ಕೆಲವು ಸಂಸ್ಥೆಗಳಂತೂ ಮಾರ್ಚ್ ತಿಂಗಳ ವೇತನವನ್ನು ಕೊಡುವುದೇ ಇಲ್ಲ ಎಂದು ಕೂಡ ಹೇಳಿವೆ.
ಇದೇ ಸಾಲಿಗೆ ಈಗ ಸ್ಪೈಸ್ ಜೆಟ್ ಕೂಡ ಸೇರಿದೆ. ತನ್ನ ಉದ್ಯೋಗಿಗಳ ಮಾರ್ಚ್ ತಿಂಗಳ ವೇತನವನ್ನು 10 ರಿಂದ 30 ಪರ್ಸೆಂಟ್‌ವರೆಗೂ ಕಡಿತಗೊಳಿಸಿದೆ ಎಂದು ಮಂಗಳವಾರ ಪ್ರಕಟಿಸಿದೆ. ಇದರಲ್ಲಿ ಸಿಎಂಡಿ ಅಜಯ್ ಸಿಂಗ್ ವೇತನ ಹೆಚ್ಚು ಕಡಿತಗೊಂಡಿದ್ದು, ಯಾವುದೇ ಉದ್ಯೋಗಿಯನ್ನೂ ಕೆಲಸದಿಂದ ತೆಗೆದು ಹಾಕುವುದಿಲ್ಲ ಎಂದು ವಿಮಾನಯಾನ ಸಂಸ್ಥೆ ಭರವಸೆ ನೀಡಿದೆ.

"ವಿಮಾನಯಾನವು ತನ್ನ ಎಲ್ಲ ಉದ್ಯೋಗಿಗಳಿಗೆ ಉನ್ನತ ಮತ್ತು ಮಧ್ಯಮ ಹಂತಗಳಲ್ಲಿ 10 ರಿಂದ 30 ಪರ್ಸೆಂಟ್ ವೇತನ ಕಡಿತವನ್ನು ಜಾರಿಗೆ ತಂದಿದೆ. ಆದರು ಸ್ಪೈಸ್ ಜೆಟ್‌ನ ಕಡಿಮೆ ವೇತನ ಶ್ರೇಣಿಗಳಲ್ಲಿನ ಉದ್ಯೋಗಿಗಳಿಗೆ ಈ ನಿರ್ಧಾರದಿಂದ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಭರವಸೆ ನೀಡಿದೆ. ಬಿಕ್ಕಟ್ಟಿನ ಹಿನ್ನೆಲೆಯಲ್ಲಿ, ಏರ್‌ಲೈನ್ಸ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಅಜಯ್ ಸಿಂಗ್ ಅವರು ಅತಿ ಹೆಚ್ಚು 30 ಪರ್ಸೆಂಟ್‌ರಷ್ಟು ಸಂಬಳವನ್ನು ಕಡಿತಗೊಳಿಸಲು ನಿರ್ಧರಿಸಿದ್ದಾರೆ "ಎಂದು ಸ್ಪೈಸ್‌ಜೆಟ್ ಹೇಳಿಕೆಯಲ್ಲಿ ತಿಳಿಸಿದೆ.
ಎಲ್ಲಾ ಪ್ರಯಾಣಿಕರ ವಿಮಾನಗಳನ್ನು ಸ್ಥಗಿತಗೊಳಿಸಿದ ಮಾರ್ಚ್ 25 ರಿಂದ 31ರ ಲಾಕ್‌ಡೌನ್ ಅವಧಿಯಲ್ಲಿ ಸ್ಪೈಸ್‌ಜೆಟ್ ನೌಕರರಿಗೆ 'ವೇತನವಿಲ್ಲದೆ ರಜೆ' ಘೋಷಿಸಲು ಒತ್ತಾಯಿಸಲ್ಪಟ್ಟಿದೆ. ಆದರೂ ಈ ಸಮಯದಲ್ಲಿ ಕೆಲಸ ಮಾಡುತ್ತಿರುವ ನೌಕರರಿಗೆ ಈ ನಿಯಮ ಅನ್ವಯವಾಗುವುದಿಲ್ಲ ಮತ್ತು ಈ ಅವಧಿಗೆ ಅವರ ಸಂಬಳವನ್ನು ಮರುಪಾವತಿಸಲಾಗುತ್ತದೆ ಎಂದು ಸಂಸ್ಥೆಯು ಹೇಳಿದೆ .
ಇಂಡಿಗೋ ವಿಮಾನಯಾನ ಸಂಸ್ಥೆಯ ಬಳಿಕ ಗೋ ಏರ್ ಕೂಡ ವೇತನವನ್ನು ಕಡಿತಗೊಳಿಸಿತ್ತು. ಇದರ ಜೊತೆಗೆ ಸ್ಪೈಸ್ ಜೆಟ್ ಕೂಡ ಈ ನಿರ್ಧಾರಕ್ಕೆ ಬಂದಿರುವುದು ನೌಕರರಿಗೆ ಆಘಾತ ನೀಡಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications