ನವದೆಹಲಿ: ಕೊರೊನಾವೈರಸ್ ಲಾಕ್‌ಡೌನ್ ಪರಿಣಾಮವಾಗಿ ತಮ್ಮ ಊರುಗಳಿಗೆ ತೆರಳಿದ್ದ ವಲಸೆ ಕಾರ್ಮಿಕರು ಈಗ ಮತ್ತೆ ಕೆಲಸ ಅರಸಿ ನಗರಗಳತ್ತ ತೆರಳುತ್ತಿದ್ದಾರೆ ಎಂದು ರೈಲ್ವೆ ಮಂಡಳಿಯ ಅಧ್ಯಕ್ಷ ವಿ.ಕೆ.ಯಾದವ್ ಶುಕ್ರವಾರ ಹೇಳಿದ್ದಾರೆ.
ಉತ್ತರ ಪ್ರದೇಶ, ಬಿಹಾರದ ಜನರು ಮುಂಬೈ ಮತ್ತು ಬೆಂಗಳೂರು ಕಡೆಗೆ ಹೋಗುತ್ತಿರುವುದು ಬಹಳ ಪ್ರೋತ್ಸಾಹದಾಯಕವಾಗಿದೆ. ಭಾರತೀಯ ರೈಲ್ವೆ ನಿರ್ವಹಿಸುತ್ತಿರುವ 230 ವಿಶೇಷ ಪ್ರಯಾಣಿಕರ ರೈಲುಗಳಲ್ಲಿನ ಬೇಡಿಕೆಯ ಮಾದರಿಯನ್ನು ಸರ್ಕಾರ ಗಮನಿಸಿರುವುದರಿಂದ ಈ ಹೇಳಿಕೆ ನೀಡುತ್ತಿದ್ದೇನೆ. ಬೇಡಿಕೆ ಹೆಚ್ಚಿರುವ ಮಾರ್ಗಗಳಲ್ಲಿ ಮುಂದಿನ ದಿನಗಳಲ್ಲಿ ರೈಲುಗಳನ್ನು ಹೆಚ್ಚಿಸಲಾಗುವುದು ಎಂದು ಅವರು ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಆರ್ಥಿಕತೆಯು ಪುನರುಜ್ಜೀವನಗೊಳ್ಳುತ್ತಿದೆ ಎಂಬುದಕ್ಕೆ ಇದು ಉತ್ತಮ ಸಂಕೇತವಾಗಿದೆ. ಇನ್ಮುಂದೆ ನಾವು ವಿಶೇಷ ರೈಲುಗಳನ್ನು ಹೆಚ್ಚಿಸುತ್ತೇವೆ. ಪೂರ್ಣ ಪ್ರಮಾಣದಲ್ಲಿ ರೈಲುಗಳನ್ನು ಓಡಿಸುವವರೆಗೆ ಸಮಯ ತೆಗೆದುಕೊಳ್ಳುತ್ತದೆ. ಕೋವಿಡ್ -19 ಹರಡುವಿಕೆಯ ಸ್ಥಿತಿ ಮುಂದೆ ಏನು ಎಂಬುದರ ಮೇಲೆ ಪೂರ್ಣ ಪ್ರಮಾಣದ ರೈಲು ಪ್ರಯಾಣ ಅವಲಂಬಿತವಾಗಿರುತ್ತದೆ ಎಂದು ಯಾದವ್ ಹೇಳಿದ್ದಾರೆ.

ಮಾರ್ಚ್ 24 ರಿಂದ ಕೋವಿಡ್ -19 ತಡೆ ಸಲುವಾಗಿ ರಾಷ್ಟ್ರವ್ಯಾಪಿ ಲಾಕ್‌ಡೌನ್ ಘೋಷಣೆಯಾದ ನಂತರ ಭಾರತೀಯ ರೈಲ್ವೆ ತನ್ನ 12,000 ಕ್ಕೂ ಹೆಚ್ಚು ಪ್ಯಾಸೆಂಜರ್ ರೈಲುಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿತು. ರೈಲ್ವೆ ಸಚಿವಾಲಯವು ಮೇ ತಿಂಗಳಲ್ಲಿ ಶ್ರಮಿಕ್ ರೈಲುಗಳನ್ನು ರೈಲುಗಳನ್ನು ಘೋಷಿಸಿತು ಮತ್ತು ಜೂನ್ 1 ರಿಂದ 200 ಪ್ರಯಾಣಿಕರ ವಿಶೇಷ ಎಕ್ಸ್‌ಪ್ರೆಸ್ ರೈಲುಗಳು ಕಾರ್ಯಾಚರಣೆಯನ್ನು ಪ್ರಾರಂಭಿಸಿತು.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications