ಇತ್ತೀಚೆಗಷ್ಟೇ ಮಾರುತಿ ಕಂಪನಿಯು 2020 ಜನವರಿಯಿಂದ ಕಾರುಗಳ ಬೆಲೆಯನ್ನು ಹೆಚ್ಚಿಸಲಿದೆ ಎಂದು ಘೋಷಿಸಿತ್ತು. ಇದೀಗ ದೇಶದ ಅಗ್ರಮಾನ್ಯ ವಾಹನ ತಯಾರಿಕಾ ಕಂಪನಿ ಟಾಟಾ ಕೂಡ ಕಾರುಗಳ ಬೆಲೆ ಏರಿಕೆ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ.
ಬಿಎಸ್ VI ನಿಯಮಾವಳಿಗಳಿಗೆ ಅನುಗುಣವಾಗಿ ಎಂಜಿನ್‌ಗಳನ್ನು ಮೇಲ್ದರ್ಜೆಗೇರಿಸಬೇಕಾಗಿರುವುದರಿಂದ 2020 ಜನವರಿಯಿಂದ ತಾನು ತಯಾರಿಸುವ ಕಾರುಗಳ ಬೆಲೆಯನ್ನು ಹೆಚ್ಚಿಸುವುದಾಗಿ ತಿಳಿಸಿದೆ. ಪ್ರಸ್ತುತ ಕಂಪನಿಯು 4.39 ಲಕ್ಷ ಬೆಲೆಯ ಟಿಯಾಗೊದಿಂದ ಹಿಡಿದು 16.85 ಲಕ್ಷ (ದೆಹಲಿ ಶೋ ರೂಂ ಬೆಲೆ) ರುಪಾಯಿಯ ಎಸ್‌ಯುವಿ ಹೆರಿಯರ್ ತನಕ ಕಾರುಗಳನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸುತ್ತಿದೆ.

'ಬಿಎಸ್-VI ಉತ್ಪನ್ನಗಳು ಬರುತ್ತಿರುವುದರಿಂದ, ಜನವರಿಯಿಂದ ಕಾರುಗಳ ಬೆಲೆ ಹೆಚ್ಚಾಗಲಿದೆ' ಎಂದು ಟಾಟಾ ಮೋಟಾರ್ಸ್ ಅಧ್ಯಕ್ಷ ಮಯಾಂಕ್ ಪರೀಕ್ ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ. ಆದರೆ ಯಾವ ಕಾರು ಬೆಲೆಯಲ್ಲಿ ಎಷ್ಟು ಹೆಚ್ಚಳವಾಗಲಿದೆ ಎಂದು ಬಹಿರಂಗಪಡಿಸಿಲ್ಲ. ಆದರೆ ಜನವರಿ ತಿಂಗಳಿನಿಂದ ಕಾರುಗಳ ಬೆಲೆ ದೊಡ್ಡ ಮಟ್ಟಿಗೆ ಹೆಚ್ಚಳವಾಗಲಿದೆ ಎಂಬ ಸುಳಿವು ನೀಡಿದ್ದಾರೆ.
ಮಂಗಳವಾರ (ಡಿಸೆಂಬರ್ 3) ಮಾರುತಿ ಕಂಪನಿಯು ಹೆಚ್ಚುತ್ತಿರುವ ವೆಚ್ಚವನ್ನು ಸರಿದೂಗಿಸಲು ಕಾರುಗಳ ಬೆಲೆ ಏರಿಕೆ ಮಾಡುವುದಾಗಿ ಘೋಷಿಸಿತು. ಇದಾದ ಬಳಿಕ ಟಾಟಾ ಕೂಡ ಬೆಲೆ ಏರಿಕೆಯತ್ತ ಮುಖಮಾಡಿದೆ. ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಪ್ರೈ. ಲಿಮಿಟೆಡ್ ಮತ್ತು ಮಹೀಂದ್ರಾ ಮತ್ತು ಮಹೀಂದ್ರಾ ಲಿಮಿಟೆಡ್, ಟೊಯೊಟೋ ಕೂಡ ಇದನ್ನು ಅನುಸರಿಸುವ ಸಾಧ್ಯತೆಯಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications