For Quick Alerts
ALLOW NOTIFICATIONS  
For Daily Alerts

'2020ರ ಮಾರ್ಚ್ ನೊಳಗೆ ಏರ್ ಇಂಡಿಯಾ, ಭಾರತ್ ಪೆಟ್ರೋಲಿಯಮ್ ಮಾರಾಟ'

|

ಏರ್ ಇಂಡಿಯಾ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮಾರಾಟ ಪ್ರಕ್ರಿಯೆ 2020ರ ಮಾರ್ಚ್ ತಿಂಗಳ ಒಳಗೆ ಪೂರ್ಣಗೊಳಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾಗಿ ಟೈಮ್ಸ್ ಅಫ್ ಇಂಡಿಯಾ ವರದಿ ಮಾಡಿದೆ.

 

ನಿರ್ಮಲಾ ಸೀತಾರಾಮನ್ ಮಾತನಾಡಿ, ಸರ್ಕಾರದಿಂದ ನಡೆದ ಅಂತರರಾಷ್ಟ್ರೀಯ ರೋಡ್ ಷೋಗಳಲ್ಲಿ ಏರ್ ಇಂಡಿಯಾ ಖರೀದಿಗೆ ಹೂಡಿಕೆದಾರರು 'ಸಾಕಷ್ಟು ಆಸಕ್ತಿ' ತೋರಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಹಿಂದೆ ಏರ್ ಇಂಡಿಯಾ ಮಾರಾಟಕ್ಕೆ ಮುಂದಾದಾಗ ಹೂಡಿಕೆದಾರರಿಂದ ಸಕಾರಾತ್ಮಕವಾದ ಸ್ಪಂದನೆ ಬಂದಿರಲಿಲ್ಲ. ಆದ್ದರಿಂದ ಮಾರಾಟ ಮುಂದಕ್ಕೆ ಹೋಗಿತ್ತು.

 

ಕ್ಷಿಪ್ರಗತಿಯಲ್ಲಿ ಆರ್ಥಿಕ ಚೇತರಿಕೆ ಕಷ್ಟಸಾಧ್ಯ: ನಿರ್ಮಲಾ ಸೀತಾರಾಮನ್ಕ್ಷಿಪ್ರಗತಿಯಲ್ಲಿ ಆರ್ಥಿಕ ಚೇತರಿಕೆ ಕಷ್ಟಸಾಧ್ಯ: ನಿರ್ಮಲಾ ಸೀತಾರಾಮನ್

ಈ ಆರ್ಥಿಕ ವರ್ಷದಲ್ಲಿ ಒಂದು ಲಕ್ಷ ಕೋಟಿ ರುಪಾಯಿ ಬಂಡವಾಳ ಹಿಂತೆಗೆತದ ಗುರಿ ಇರಿಸಿಕೊಳ್ಳಲಾಗಿದ್ದು, ಆ ಹಿನ್ನೆಲೆಯಲ್ಲಿ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಮತ್ತು ಬಿಪಿಸಿಎಲ್ ಕಂಪೆನಿಗಳ ಮಾರಾಟವು ಪ್ರಮುಖವಾಗಿದೆ.

'2020ರ ಮಾರ್ಚ್ ನೊಳಗೆ ಏರ್ ಇಂಡಿಯಾ, ಭಾರತ್ ಪೆಟ್ರೋಲಿಯಮ್ ಮಾರಾಟ'

"ಈ ವರ್ಷದೊಳಗೆ ಬಂಡವಾಳ ಹಿಂತೆಗೆತ ಪೂರ್ತಿ ಆಗುತ್ತದೆ ಎಂಬ ನಿರೀಕ್ಷೆ ಇತ್ತು. ಆದರೆ ವಾಸ್ತವ ಸ್ಥಿತಿ ಮುಖ್ಯವಾಗುತ್ತದೆ" ಎಂದು ನಿರ್ಮಲಾ ಹೇಳಿದ್ದಾರೆ.

English summary

Air India, BPCL Sale Will Be Completed By March 2020

Union finance minister Nirmala Sitharaman said, Air India BPCL sale will be completed by March 2020.
Story first published: Sunday, November 17, 2019, 17:57 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X