ಬೆಂಗಳೂರು, ಮಾರ್ಚ್ 2: 80 ವರ್ಷದ ಪ್ರಯಾಣಿಕನಿಗೆ ಗಾಲಿಕುರ್ಚಿ ನಿರಾಕರಿಸಿದ್ದಕ್ಕಾಗಿ ಟಾಟಾ ಗ್ರೂಪ್ ಏರ್‌ಲೈನ್ಸ್ ಏರ್ ಇಂಡಿಯಾಕ್ಕೆ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಗುರುವಾರ 30 ಲಕ್ಷ ರೂಪಾಯಿ ದಂಡ ವಿಧಿಸಿದೆ.
ವೃದ್ಧರು ವಿಮಾನದಿಂದ ಟರ್ಮಿನಲ್‌ಗೆ ನಡೆದುಕೊಂಡು ಬಂದು ಮುಂಬೈ ವಿಮಾನ ನಿಲ್ದಾಣದಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದರು. ಫೆಬ್ರವರಿ 12 ರಂದು ಈ ಘಟನೆ ನಡೆದಿತ್ತು. ಹಿರಿಯರಿಗೆ ಗಾಲಿಕುರ್ಚಿ ನೀಡಲು ನಿರಾಕರಿಸಿದ ಕಾರಣ ಏರ್ ಇಂಡಿಯಾಕ್ಕೆ 30 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ ಎಂದು ಡಿಜಿಸಿಎ ಹಿರಿಯ ಅಧಿಕಾರಿಯೊಬ್ಬರು ಗುರುವಾರ ಹೇಳಿದ್ದಾರೆ.

"ತಪ್ಪು ಮಾಡಿದ ಉದ್ಯೋಗಿ(ಗಳ) ವಿರುದ್ಧ ಏರ್‌ಲೈನ್ಸ್ ತೆಗೆದುಕೊಂಡ ಯಾವುದೇ ಕ್ರಮದ ಬಗ್ಗೆ ಏರ್ ಇಂಡಿಯಾ ತಿಳಿಸಿಲ್ಲ ಮತ್ತು ಮುಂದೆ ಇಂತಹ ಘಟನೆಗಳು ಮರುಕಳಿಸುವುದನ್ನು ತಡೆಯಲು ತೆಗೆದುಕೊಂಡ ಸರಿಪಡಿಸುವ ಕ್ರಮಗಳನ್ನು ಸಲ್ಲಿಸಲು ಏರ್‌ಲೈನ್ ವಿಫಲವಾಗಿದೆ" ಎಂದು ಅಧಿಕಾರಿ ಹೇಳಿದರು.
ಈ ತಿಂಗಳ ಆರಂಭದಲ್ಲಿ ಡಿಜಿಸಿಎ ಕ್ಯಾರಿಯರ್‌ಗೆ ಶೋಕಾಸ್ ನೋಟಿಸ್ ನೀಡಿತು. ವಯಸ್ಸಾದ ಪ್ರಯಾಣಿಕರು ಮತ್ತೊಂದು ಗಾಲಿಕುರ್ಚಿಗಾಗಿ ಕಾಯುವುದಕ್ಕಿಂತ ಹೆಚ್ಚಾಗಿ ಗಾಲಿಕುರ್ಚಿಯ ಮೇಲಿರುವ ತನ್ನ ಹೆಂಡತಿಯ ಜೊತೆಗೆ ನಡೆಯಲು ಬಯಸಿದ್ದರು ಎಂದು ಫೆಬ್ರವರಿ 20 ರಂದು ತನ್ನ ಪ್ರತಿಕ್ರಿಯೆಯನ್ನು ಸಲ್ಲಿಸಿತು.
"ಏರುವ ಸಮಯದಲ್ಲಿ ಸಹಾಯದ ಅಗತ್ಯವಿರುವ ಪ್ರಯಾಣಿಕರಿಗೆ ಸಾಕಷ್ಟು ಸಂಖ್ಯೆಯ ಗಾಲಿಕುರ್ಚಿಗಳು ನೀಡಬೇಕು ಎಂದು ಎಲ್ಲಾ ವಿಮಾನಯಾನ ಸಂಸ್ಥೆಗಳಿಗೆ ಸಲಹೆಯನ್ನು ನೀಡಲಾಗಿದೆ" ಎಂದು ಡಿಜಿಸಿಎ ಅಧಿಕಾರಿ ತಿಳಿಸಿದ್ದಾರೆ.
More From GoodReturns

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಸೇಫ್ಟಿ ಕಂಟ್ರೋಲ್ಸ್ ಐಪಿಒ: ಹೂಡಿಕೆದಾರರೇ ಇಂದೇ ಕೊನೆಯ ಅವಕಾಶ!

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಆರ್ಬಿಐ ಪಾಲಿಸಿ: ಇಂದಿನ ನಿರ್ಧಾರ ನಿಮ್ಮ ಹೂಡಿಕೆಯನ್ನು ಬದಲಿಸುತ್ತಾ?

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ

ಹೋಮ್ ಲೋನ್ ಇಎಂಐ ಉಳಿಸಲು ಈ ಟ್ರಿಕ್ ಬಳಸಿ ನೋಡಿ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಚಿನ್ನದ ಬೆಲೆ ಏರಿಕೆ: ಹೂಡಿಕೆದಾರರೇ ಎಚ್ಚರ, ಈ ತಪ್ಪು ಮಾಡಬೇಡಿ!



Click it and Unblock the Notifications