ಏರ್ ಇಂಡಿಯಾವನ್ನು ಮುಚ್ಚಲಾಗುತ್ತದೆ ಎಂಬ ಸುದ್ದಿಯು ಹರಿದಾಡುತ್ತಿದ್ದು, ಇದು ಸುಳ್ಳು ಮಾಹಿತಿಯಾಗಿದ್ದು, ಯಾವುದೇ ಕಾರಣಕ್ಕೂ ವಿಮಾನಯಾನ ಸಂಸ್ಥೆಯನ್ನು ಮುಚ್ಚಲಾಗುವುದಿಲ್ಲ ಎಂದು ಏರ್ ಇಂಡಿಯಾ ಸ್ಪಷ್ಟಪಡಿಸಿದೆ.
ಆರ್ಥಿಕ ಸಂಕಷ್ಟದಲ್ಲಿರುವ ಏರ್ ಇಂಡಿಯಾ ಏರ್ಲೈನ್ಸ್ ಅನ್ನು ಮುಚ್ಚಲಾಗುವುದು, ಸಂಸ್ಥೆಯಿಂದ ಕೇಂದ್ರ ಸರ್ಕಾರ ಬಂಡವಾಳ ಹಿಂತೆಗೆದುಕೊಳ್ಳುವುದು ಎನ್ನುವುದು ವದಂತಿ. ಈ ಸುದ್ದಿಗಳಿಗೆ ಯಾವುದೇ ಆಧಾರವಿಲ್ಲ ಎಂದು ಏರ್ ಇಂಡಿಯಾ ವಾಣಿಜ್ಯ ನಿರ್ದೇಶಕಿ ಮೀನಾಕ್ಷಿ ಮಲ್ಲಿಕ್ ಟ್ರಾವೆಲ್ ಏಂಜೆಂಟ್ಸ್ ಮತ್ತು ವೆಬ್ಸೈಟ್ಗಳಿಗೆ ಪತ್ರದಲ್ಲಿ ತಿಳಿಸಿದ್ದಾರೆ.

''ಮಾರುಕಟ್ಟೆಯಲ್ಲಿ ಏರ್ ಇಂಡಿಯಾ ತನ್ನ ಕಾರ್ಯಾಚರಣೆಯನ್ನು ಮುಚ್ಚುತ್ತಿರಬಹುದು ಎಂಬ ವದಂತಿಗಳಿವೆ. ಈ ವದಂತಿಗಳು ಆಧಾರರಹಿತ ಮತ್ತು ಸತ್ಯಕ್ಕೆ ದೂರವಾಗಿದೆ'' ಎಂದು ಹೇಳಲು ಬಯಸುತ್ತೇನೆ ಎಂದು ಮೀನಾಕ್ಷಿ ಮಲ್ಲಿಕ್ ಹೇಳಿದ್ದಾರೆ. ಜೊತೆಗೆ
ಏರ್ ಇಂಡಿಯಾ ಸೇವಾ ಮಟ್ಟದಲ್ಲಿ ಯಾವುದೇ ರಾಜಿಯಾಗದೆ, ಆರ್ಥಿಕ ಮತ್ತು ಕಾರ್ಯಾಚರಣೆ ಸ್ಥಿತಿಯನ್ನು ಸೂಕ್ತವಾಗಿ ನಿಭಾಯಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯನ್ನು ಖಾಸಗೀಕರಣಗೊಳಿಸದಿದ್ದರೆ ಮುಚ್ಚಲೇಬೇಕಾದ ಪರಿಸ್ಥಿತಿ ಮುಂಬರುವ ದಿನಗಳಲ್ಲಿ ಬರಲಿದೆ ಎಂದು ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಕಳೆದ ವರ್ಷ ನವೆಂಬರ್ 27ರಂದು ಹೇಳಿದ್ದರು. ನಾಗರಿಕ ವಿಮಾನಯಾನ ಸಚಿವಾಲಯವು ಹಣಕಾಸು ಪರಿಸ್ಥಿತಿ ಹೀಗೆ ಮುಂದುವರಿದರೆ ಏರ್ ಇಂಡಿಯಾ ಕಾರ್ಯಾಚರಣೆ ಕಷ್ಟವಾಗಲಿದೆ ಎಂದು ಹೇಳಿತ್ತು.
More From GoodReturns

Bengaluru-Mangaluru Flight: ಬೆಂಗಳೂರು-ಮಂಗಳೂರು ವಿಮಾನ ಪ್ರಯಾಣಿಕರಿಗೆ ಬಂಪರ್ ಸುದ್ದಿ! ಇನ್ಮೇಲೆ ತಡರಾತ್ರಿಯೂ ವಿಮಾನ ಸೇವೆ

ಎಲ್ಲ ಹಣವನ್ನೂ ಒಂದೇ ಬ್ಯಾಂಕ್ನಲ್ಲಿ ಇಡ್ತಿದ್ದೀರಾ? ಒಂದು ತಪ್ಪು ನಿಮ್ಮ ಸಂಪೂರ್ಣ ಉಳಿತಾಯಕ್ಕೆ ಅಪಾಯ!

ICC T20 World Cup: ವಿಶ್ವಕಪ್ ಗೆದ್ದ ಭಾರತಕ್ಕೆ ಬಿಸಿಸಿಐನಿಂದ ಗುಡ್ ನ್ಯೂಸ್; 131 ಕೋಟಿ ಬಹುಮಾನ ಘೋಷಣೆ

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ



Click it and Unblock the Notifications