For Quick Alerts
ALLOW NOTIFICATIONS  
For Daily Alerts

ಮುಂದಿನ 6 ತಿಂಗಳಿನಲ್ಲಿ ದೆಹಲಿಯ ಎಲ್ಲಾ ಸರ್ಕಾರಿ ಕಾರುಗಳು, ಎಲೆಕ್ಟ್ರಿಕ್ ಕಾರುಗಳಾಗಿ ಬದಲಾಗಲಿವೆ!

|

ದೆಹಲಿ ಸರ್ಕಾರವು ಸುತ್ತೋಲೆಯನ್ನು ಹೊರಡಿಸಿದ್ದು, ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಳಸುತ್ತಿರುವ ಕಾರುಗಳನ್ನು ಎಲೆಕ್ಟ್ರಿಕ್ ಕಾರುಗಳಾಗಿ ಬದಲಾಯಿಸಲು ಯೋಜಿಸಿದೆ.

ಈ ಸುತ್ತೋಲೆಯಲ್ಲಿ ಸರ್ಕಾರದ ಎಲ್ಲಾ ಪೆಟ್ರೋಲ್, ಡೀಸೆಲ್ ವಾಹನಗಳನ್ನು ಮುಂದಿನ 6 ತಿಂಗಳಲ್ಲಿ ಎಲೆಕ್ಟ್ರಿಕ್ ವಾಹನಗಳಾಗಿ ಬದಲಿಸಲಾಗುವುದು ಎಂದು ತಿಳಿಸಲಾಗಿದೆ. ದೆಹಲಿಯನ್ನು ಎಲೆಕ್ಟ್ರಿಕ್ ವಾಹನಗಳ ಕೇಂದ್ರವನ್ನಾಗಿ ಮಾಡಲು ಸರ್ಕಾರವು ನಿರ್ಧರಿಸಿದೆ ಎಂದು ಮನೀಶ್ ಸಿಸೋಡಿಯಾ ಟ್ವೀಟ್ ಮಾಡಿದ್ದಾರೆ.

ದೆಹಲಿಯ ಎಲ್ಲಾ ಸರ್ಕಾರಿ ಕಾರುಗಳು ಎಲೆಕ್ಟ್ರಿಕ್ ಕಾರುಗಳಾಗಿ ಬದಲಾಗಲಿವೆ

ದೆಹಲಿ ಸರ್ಕಾರವು ಅಧಿಕೃತವಾಗಿ ಸುಮಾರು 2,000 ಕಾರುಗಳನ್ನು ಬಳಸುತ್ತಿದೆ. ಈ ಎಲ್ಲಾ ಕಾರುಗಳನ್ನು ಎಲೆಕ್ಟ್ರಿಕ್ ಕಾರುಗಳಾಗಿ ಬದಲಾಯಿಸಲಾಗುತ್ತದೆ. ಈ ಕ್ರಮವು ಇತರೆ ರಾಜ್ಯಗಳಿಗೂ ಪ್ರೇರಣೆ ಆಗಲಿದೆ ಎಂದು ಸರ್ಕಾರವು ತಿಳಿಸಿದೆ.

ತಮಿಳುನಾಡಿನಲ್ಲಿ ಸದ್ಯದಲ್ಲೇ ಓಲಾ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಉತ್ಪಾದನೆತಮಿಳುನಾಡಿನಲ್ಲಿ ಸದ್ಯದಲ್ಲೇ ಓಲಾ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಉತ್ಪಾದನೆ

ದೆಹಲಿ ಸರ್ಕಾರವು ಕೇಂದ್ರ ಸರ್ಕಾರದ ಎನರ್ಜಿ ಎಫ್‌ಸಿಎನ್‌ಸಿ ಸರ್ವೀಸಸ್ ಲಿಮಿಟೆಡ್ (ಇಇಎಸ್ಎಲ್) ನಿಂದ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಲಿದೆ ಎಂದು ತಿಳಿಸಲಾಗಿದೆ. ಎಲ್ಲಾ ಎಲೆಕ್ಟ್ರಿಕ್ ವಾಹನಗಳಲ್ಲಿ ಜಿಪಿಎಸ್ ಆಧಾರಿತ ನ್ಯಾವಿಗೇಷನ್ ಸಿಸ್ಟಂ ಬಳಸಲಾಗುವುದು.

English summary

All Delhi Government Vehicles To Switch To Electric Within 6 Months

All petrol, diesel and CNG vehicles of the Delhi government will be replaced with electric ones within six months, the Arvind Kejriwal government
Story first published: Saturday, February 27, 2021, 12:42 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X