ಜಗತ್ತಿನ ಬಹುದೊಡ್ಡ ಇ-ಕಾಮರ್ಸ್ ಕಂಪನಿ ಅಮೆಜಾನ್ನ ಸಿಇಒ ಹಾಗೂ ವಿಶ್ವದ ಶ್ರೀಮಂತ ವ್ಯಕ್ತಿಯಾಗಿರುವ ಜೆಫ್ ಬೇಜೋಸ್ ತಮ್ಮ ಅಧಿಕಾರ ಸ್ಥಾನದಿಂದ ಇಂದು (ಜುಲೈ 5) ಕೆಳಗಿಳಿದಿದ್ದಾರೆ.
ಬೇಜೋಸ್ ತಮ್ಮ ಸಿಇಒ ಸ್ಥಾನವನ್ನು ಅಮೆಜಾನ್ ವೆಬ್ ಸೇವೆಗಳ ಮುಖ್ಯಸ್ಥ ಆಂಡಿ ಜಾಸ್ಸಿಗೆ ಹಸ್ತಾಂತರಿಸಿದ್ದಾರೆ. ಇನ್ಮುಂದೆ ಅವರು ಕಂಪನಿಯ ಕಾರ್ಯನಿರ್ವಾಹಕ ಅಧ್ಯಕ್ಷರ ಪಾತ್ರವನ್ನು ನಿರ್ವಹಿಸಲಿದ್ದಾರೆ.
ವಿಶ್ವದ ಶ್ರೀಮಂತ ವ್ಯಕ್ತಿಯಾಗಿರುವ ಬೇಜೋಸ್ ಅವರು ಇದೀಗ ಅಮೆಜಾನ್ ಸಿಇಒ ಸ್ಥಾನದಿಂದ ಕೆಳಗಿಳಿದ ಬಳಿಕ ಅವರ ಮುಂದಿನ ಕಾರ್ಯವೇನು ಎಂಬುದು ಕುತೂಹಲಕ್ಕೆ ಎಡೆಮಾಡಿದೆ.

ಇನ್ನು ಅವರು ಹೊಂದಿರುವ ಬ್ಲೂ ಒರಿಜಿನ್ ಬಾಹ್ಯಾಕಾಶ ಕಂಪನಿ ಮೂಲಕ ಜುಲೈ 20ರಂದು ತನ್ನ ಬಹುದಿನಗಳ ಕನಸನ್ನು ನನಸು ಮಾಡಿಕೊಳ್ಳಲು ಬಾಹ್ಯಾಕಾಶಕ್ಕೆ ಜಿಗಿಯಲಿದ್ದಾರೆ.
ಬಾಹ್ಯಾಕಾಶ ಪರಿಶೋಧಾನಾ ಕಂಪನಿಯಾದ ಬ್ಲೂ ಒರಿಜಿನ್ನ ಮೊದಲ ಮಾನವ ಬಾಹ್ಯಾಕಾಶ ಹಾರಾಟದ ಮಿಷನ್ನಲ್ಲಿ ಜೆಫ್ ಬೇಜೋಸ್ ಕೂಡ ಬುಕ್ ಮಾಡಿದ್ದು, ಜುಲೈ 20ರಂದು ಬಾಹ್ಯಾಕಾಶಕ್ಕೆ ಹಾರಲಿದ್ದಾರೆ.
ತನ್ನ ಬಹುನೆಚ್ಚಿನ ಕಂಪನಿಯಾದ ಬ್ಲೂ ಒರಿಜಿನ್ಸ್ಗೆ ಶತಕೋಟಿ ಡಾಲರ್ಗಳು ಮತ್ತು ಲೆಕ್ಕವಿಲ್ಲದಷ್ಟು ಗಂಟೆಗಳ ಕಾಲ ಕಾರ್ಯ ನಿರ್ವಹಣೆ ಬಳಿಕ ಜೆಫ್ ಬಾಹ್ಯಾಕಾಶಕ್ಕೆ ಹೋಗುವ ಸಾಹಕ್ಕೆ ಕೈ ಹಾಕಿದ್ದಾರೆ. ಜೊತೆಗೆ ವ್ಯಾಪಕ ಶ್ರೇಣಿಯ ಜನರಿಗೆ ಬಾಹ್ಯಾಕಾಶ ಪ್ರಯಾಣವನ್ನು ಹೆಚ್ಚು ಪ್ರವೇಶಿಸುವಂತೆ ಮಾಡುವತ್ತ ಗಮನಹರಿಸುವುದು ಕಂಪನಿಯ ಗುರಿಯಾಗಿದೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications