ಇ ಕಾಮರ್ಸ್ ಕಂಪೆನಿ ಅಮೆಜಾನ್ ಸ್ಥಾಪಕ ಮತ್ತು ಸಿಇಒ ಜೆಫ್ ಬೆಜೋಸ್ ಮುಂದಿನ ವಾರ ಭಾರತಕ್ಕೆ ಭೇಟಿ ನೀಡಲಿದ್ದು, ಕೈಗಾರಿಕೋದ್ಯಮಿಗಳನ್ನು ಹೊರತುಪಡಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಧಿಕಾರಿಗಳನ್ನು ಭೇಟಿ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ದೆಹಲಿಯಲ್ಲಿ ಜನವರಿ ಹದಿನೈದು ಮತ್ತು ಹದಿನಾರನೇ ತಾರೀಕು ನಡೆಯಲಿರುವ ಕಾರ್ಯಕ್ರಮದಲ್ಲಿ ಉನ್ನತಾಧಿಕಾರಿಗಳು ಭಾಗವಹಿಸಲಿದ್ದಾರೆ.
ಭಾರತದಲ್ಲಿನ ಸಣ್ಣ ಮತ್ತು ಮಧ್ಯಮ ಗಾತ್ರದ ವ್ಯಾಪಾರ ಕುರಿತಾಗಿ ಚರ್ಚೆ ನಡೆಸಲು ಈ ಕಾರ್ಯಕ್ರಮವು ನಡೆಯಲಿದೆ. ಆದರೆ ಬೆಜೋಸ್ ಕಾರ್ಯಕ್ರಮದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಅಮೆಜಾನ್ ನಿರಾಕರಿಸಿದೆ. ಭಾರತದಲ್ಲಿ ಅಮೆಜಾನ್ ವ್ಯವಹಾರ ದೊಡ್ಡ ಮಟ್ಟದಲ್ಲಿ ಬೆಳವಣಿಗೆ ಕಂಡಿದೆ. ಮತ್ತು ಇದೇ ವೇಳೆ ದೇಶದ ವರ್ತಕರ ಪ್ರತಿಭಟನೆಯನ್ನೂ ಎದುರಿಸುತ್ತಿದೆ.

ಇ ಕಾಮರ್ಸ್ ಕಂಪೆನಿಗಳಾದ ಅಮೆಜಾನ್ ಮತ್ತು ಫ್ಲಿಪ್ ಕಾರ್ಟ್ ವ್ಯಾಪಾರದಲ್ಲಿ ಅನಾರೋಗ್ಯಕರ ಸ್ಪರ್ಧೆಯನ್ನು ಸೃಷ್ಟಿಸುತ್ತಿವೆ ಎಂಬ ಆರೋಪ ಮಾಡಲಾಗುತ್ತಿದೆ. ವಿದೇಶ ಬಂಡವಾಳದ ಇ ಕಾಮರ್ಸ್ ಕಂಪೆನಿಗಳಿಗೆ ಕೇಂದ್ರ ಸರ್ಕಾರವು ಕಳೆದ ವರ್ಷ ನಿಯಮಗಳನ್ನು ಕಠಿಣಗೊಳಿಸಿತ್ತು. ಆ ನಂತರ ಇ ಕಾಮರ್ಸ್ ಕಂಪೆನಿಗಳು ಅನಿವಾರ್ಯವಾಗಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಲೇ ಬೇಕಾಯಿತು.
ಸರ್ಕಾರಿ ಅಧಿಕಾರಿಗಳನ್ನು ಭೇಟಿ ಮಾಡಲಿರುವ ಬೆಜೋಸ್ ನಿಯಮಾವಳಿಗಳ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.
More From GoodReturns

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

LPG Cylinder Shortage Live Updates: ಭಾರತದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ಪಿಎಂ ಮೋದಿ ಮಹತ್ವದ ಸಭೆ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Natural Gas Supply: ದೇಶದಲ್ಲಿ ಅನಿಲ ಕೊರತೆ..ಹೊಸ ಆದೇಶದ ಪ್ರಕಾರ ಯಾರಿಗೆ ಮೊದಲ ಆದ್ಯತೆ ಎಂದು ತಿಳಿಯಿರಿ

LPG ಪೂರೈಕೆಯಲ್ಲಿ ಕೊರತೆ; ದೇಶದಲ್ಲಿ ಎಲ್ಪಿಜಿ ಉತ್ಪಾದನೆ 10% ಹೆಚ್ಚಳ

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

LPG shortage: ಮಧ್ಯಪ್ರಾಚ್ಯದ ಉದ್ವಿಗ್ನತೆ, ಬೆಂಗಳೂರು-ಮುಂಬೈನಲ್ಲಿ LPG ಕೊರತೆ ಆತಂಕ: ರೆಸ್ಟೋರೆಂಟ್ಗಳು ಮುಚ್ಚುವ ಭೀತಿ

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

India Oil: ಇಸ್ರೇಲ್, ಯುಎಸ್ ಮತ್ತು ಇರಾನ್ ನಡುವೆ ವಾರ್! ಭಾರತದ ಕಚ್ಚಾ ತೈಲದ ಮೇಲೆ ಪರಿಣಾಮ ಬೀರಿದ್ದು ಹೇಗೆ?

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ



Click it and Unblock the Notifications