ಭಾರತದಲ್ಲಿ ಸಣ್ಣ ಉದ್ಯಮಗಳನ್ನು ಡಿಜಿಟೈಜ್ ಮಾಡಲು 1 ಬಿಲಿಯನ್ ಅಮೆರಿಕನ್ ಡಾಲರ್ (ಭಾರತದ ರುಪಾಯಿಗಳಲ್ಲಿ ಸುಮಾರು 7,083 ಕೋಟಿ) ಹೂಡಿಕೆ ಮಾಡುವುದಾಗಿ ಇ-ಕಾಮರ್ಸ್ ದಿಗ್ಗಜ ಅಮೆಜಾನ್ ಸಿಇಓ ಜೆಫ್ ಬೇಜೋಸ್ ಬುಧವಾರ ಘೋಷಿಸಿದ್ದಾರೆ. ಸಣ್ಣ ಮತ್ತು ಮಧ್ಯಮ ವ್ಯವಹಾರಗಳಿಗೆ ಅಮೆಜಾನ್ ಆಯೋಜಿಸಿರುವ ಎರಡು ದಿನಗಳ ಕಾರ್ಯಕ್ರಮಕ್ಕಾಗಿ ಬೇಜೋಸ್ ಭಾರತದಲ್ಲಿದ್ದಾರೆ.
ದೆಹಲಿಯಲ್ಲಿ ನಡೆದ ಕಂಪನಿಯ ಕಾರ್ಯಕ್ರಮದಲ್ಲಿ ಮಾತನಾಡಿದ ಅಮೆಜಾನ್ ಸಿಇಓ ಜೆಫ್ ಬೇಜೋಸ್ 2025ರ ವೇಳೆಗೆ ಭಾರತ ನಿರ್ಮಿತ 10 ಬಿಲಿಯನ್ ಅಮೆರಿಕನ್ ಡಾಲರ್ ಮೌಲ್ಯದ ಸರಕುಗಳನ್ನು ರಫ್ತು ಮಾಡುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ. ಅಲ್ಲದೆ 21ನೇ ಶತಮಾನವು 'ಭಾರತೀಯ ಶತಮಾನವಾಗಲಿದೆ' ಎಂದರು.

'' ಈ ದೇಶವು ಚೈತನ್ಯ, ಶಕ್ತಿ, ಬೆಳವಣಿಗೆ ಸೇರಿದಂತೆ ವಿಶೇಷವಾದುದನ್ನು ಹೊಂದಿರುವ ಪ್ರಜಾಪ್ರಭುತ್ವವಾಗಿದೆ ಎಂದು ಬೇಜೋಸ್ ಹೇಳಿದ್ದಾರೆ. ಅಮೆಜಾನ್ ಭಾರತದಲ್ಲಿ 5.5 ಬಿಲಿಯನ್ ಅಮೆರಿಕನ್ ಡಾಲರ್ ಹೂಡಿಕೆಯ ಜೊತೆಗೆ ದೇಶವನ್ನು ಪ್ರಮುಖ ಬೆಳವಣಿಗೆಯ ಮಾರುಕಟ್ಟೆಯನ್ನಾಗಿ ನೋಡಲು ಬಯಸುತ್ತೇವೆ ಎಂದಿದ್ದಾರೆ.
ಅಮೆಜಾನ್.ಕಾಮ್ ಸ್ಥಾಪಕ ಜೆಫ್ ಬೆಜೋಸ್ ಭಾರತಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಸಾವಿರಾರು ಸಂಖ್ಯೆಯಲ್ಲಿ ವರ್ತಕರು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಅಮೆಜಾನ್, ಫ್ಲಿಪ್ ಕಾರ್ಟ್ ನೀಡುತ್ತಿರುವ ಭಾರೀ ಪ್ರಮಾಣದ ರಿಯಾಯಿತಿ, ಆಫರ್ ಗಳಿಂದ ನಷ್ಟ ಉಂಟಾಗುತ್ತಿದೆ ಎಂದು ವರ್ತಕರು ಆರೋಪ ಮಾಡಿದ್ದಾರೆ.
More From GoodReturns

Ugadi 2026: ಯುಗಾದಿ ನಂತರ ಈ ರಾಶಿಯವರಿಗೆ ಹಣವೋ ಹಣ; ನೀವೂ ಇದ್ದೀರಾ ನೋಡಿ

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!



Click it and Unblock the Notifications