ಮಹೀಂದ್ರಾ ಗ್ರೂಪ್ ಅಧ್ಯಕ್ಷ ಸ್ಥಾನವನ್ನು ತ್ಯಜಿಸಲಿದ್ದಾರೆ ಆನಂದ್ ಮಹೀಂದ್ರಾ
ಮಹಿಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ 2020ಕ್ಕೆ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎಂದು ಕಂಪನಿಯ ಆಡಳಿತ ಮಂಡಳಿ ಶುಕ್ರವಾರ ಪ್ರಕಟಣೆ ಹೊರಡಿಸಿದೆ. ಮಹೀಂದ್ರ ಗ್ರೂಪ್ ಕಾರ್ಯ ನಿರ್ವಾಹಕ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದು, ಸಂಸ್ಥೆಯ ಮಾರ್ಗದರ್ಶಿಯಾಗಿ ಮತ್ತು ಆಡಳಿತ ಮಂಡಳಿಯಲ್ಲಿ ಸೇವೆ ಸಲ್ಲಿಸಲಿದ್ದಾರೆ.
ಸೆಬಿ ಮಾರ್ಗಸೂಚಿಗಳ ಪ್ರಕಾರ ಆನಂದ್ ಮಹೀಂದ್ರಾ 2020 ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಮಹಿಂದ್ರಾ ಗ್ರೂಪ್ ಕಾರ್ಯ ನಿರ್ವಾಹಕ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎಂದು ಮಹೀಂದ್ರಾ ಸಂಸ್ಥೆಯು ಹೇಳಿಕೆಯನ್ನು ಬಿಡುಗಡೆ ಮಾಡಿದೆ.

ಡಿಸೆಂಬರ್ 20, 2019ರಂದು ಮಹೀಂದ್ರಾ ಗ್ರೂಪ್‌ನ ಆಡಳಿತ ಮಂಡಳಿಯ ಸಭೆ ನಡೆಯಲಿದ್ದು, ಆನಂದ್ ಮಹೀಂದ್ರಾ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದು ಸಂಸ್ಥೆಯ ಮಾರ್ಗದರ್ಶಿಯಾಗಿ ಮತ್ತು ಆಡಳಿತ ಮಂಡಳಿಯಲ್ಲಿ ಸೇವೆ ಸಲ್ಲಿಸುವ ಕುರಿತು ಅಧಿಕೃತ ಪ್ರಕಟಣೆ ಹೊರ ಬೀಳಲಿದೆ.
ಪವನ್ ಗೋಯೆಂಕಾ ಅವರನ್ನು ಏಪ್ರಿಲ್ 1ರಿಂದ ಮತ್ತೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗುವುದು.