Anna Bhagya: ಅನ್ನಭಾಗ್ಯ ಯೋಜನೆಯ ಹಣ ಡೆಪಾಸಿಟ್ ಆಗಿದೆಯೇ ಹೀಗೆ ಚೆಕ್ ಮಾಡಿ

ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಅನ್ನ ಭಾಗ್ಯ ಯೋಜನೆಯಡಿ ಫಲಾನುಭವಿಗಳ ಖಾತೆಗೆ ನೇರ ಬ್ಯಾಂಕ್ ವರ್ಗಾವಣೆ ಸೇವೆಯನ್ನು ಸೋಮವಾರ, ಜುಲೈ 10, 2023 ರಿಂದ ಪ್ರಾರಂಭಿಸಿದೆ. ಅನ್ನ ಭಾಗ್ಯ ಯೋಜನೆಯಡಿ, ಕರ್ನಾಟಕ ಸರ್ಕಾರವು ಫಲಾನುಭವಿಗಳಿಗೆ ಪ್ರತಿ ಕೆಜಿಗೆ 34 ರೂಪಾಯಿಗಳ ದರದಲ್ಲಿ ನಗದು ಪಾವತಿಸಲು ನಿರ್ಧರಿಸಿದೆ.

ಆರಂಭದಲ್ಲಿ ಈ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಕರ್ನಾಟಕ ಸರ್ಕಾರವು 10 ಕೆಜಿ ಅಕ್ಕಿಯನ್ನು ನೀಡಲು ನಿರ್ಧಾರ ಮಾಡಿತ್ತು. ಆದರೆ ಅದಾದ ಬಳಿಕ ಅಕ್ಕಿ ಕೊರತೆಯ ಬೆನ್ನಲ್ಲೇ ಯೋಜನೆಯಲ್ಲಿ ಕೊಂಚ ಬದಲಾವಣೆಯನ್ನು ಸರ್ಕಾರ ಮಾಡಿದ್ದು, 5 ಕೆಜಿ ಅಕ್ಕಿಯನ್ನು ನೀಡಲಾಗುವುದು ಎಂದು ಹೇಳಿದೆ. ಉಳಿದ 5 ಕೆಜಿಯ ಅಕ್ಕಿಯ ಬದಲಾಗಿ ಪ್ರತಿ ಕೆಜಿಗೆ 34 ರೂಪಾಯಿಗಳ ದರದಲ್ಲಿ ನಗದನ್ನು ಸರ್ಕಾರ ಪಾವತಿಸುತ್ತಿದೆ.

 ಅನ್ನಭಾಗ್ಯ ಯೋಜನೆಯ ಹಣ ಡೆಪಾಸಿಟ್ ಆಗಿದೆಯೇ ಹೀಗೆ ಚೆಕ್ ಮಾಡಿ

ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್‌ದಾರರಿಗೆ ಹಣವನ್ನು ಜಮೆ ಮಾಡಲಾಗುತ್ತಿದೆ. ಬಿಪಿಎಲ್ ಕುಟುಂಬದ ಮುಖ್ಯಸ್ಥರ ಆಧಾರ್ ಸಂಖ್ಯೆಗಳಿಗೆ ಲಿಂಕ್ ಮಾಡಲಾದ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಹಣವನ್ನು ನೇರವಾಗಿ ವರ್ಗಾಯಿಸಲಾಗುತ್ತದೆ. ಆದರೆ ಹಲವಾರು ಮಂದಿಗೆ ಹಣ ಜಮೆಯಾಗುತ್ತಿಲ್ಲ ಎಂದು ಸುದ್ದಿಯಾಗಿದೆ. ನಿಮ್ಮ ಖಾತೆಗೆ ಹಣ ಜಮೆಯಾಗಿದೆಯೇ ಎಂದು ಚೆಕ್ ಮಾಡುವುದು ಹೇಗೆ ಎಂಬ ವಿವರ ಇಲ್ಲಿದೆ ಮುಂದೆ ಓದಿ...

ದುಡ್ಡು ಅಕೌಂಟ್‌ಗೆ ಬಂದಿದೆಯಾ ಚೆಕ್ ಮಾಡಿ

'ಅನ್ನಭಾಗ್ಯ' ಫಲಾನುಭವಿಗಳು ಅಂಚೆ ಇಲಾಖೆಯಲ್ಲಿ ಉಳಿತಾಯ ಖಾತೆ ತೆರೆಯಲು ಅವಕಾಶವಿದೆ. ಫೋಸ್ಟ್‌ಮನ್‌ಗೆ ಅಗತ್ಯ ದಾಖಲೆ ಒದಗಿಸಿ ಮನೆ ಬಾಗಿಲಿನಲ್ಲೇ ಸೇವೆ ಪಡೆಯಬಹುದಾಗಿದೆ. ಈ ಸೇವೆಗಾಗಿ ಅಂಚೆ ಇಲಾಖೆ 'ಡಿ ಕ್ಯೂಬ್ ' ಆ್ಯಪ್ ಪರಿಚಯಿಸಿದೆ. ಆಧಾರ್ ಕಾರ್ಡ್, ಪಾನ್ ಕಾರ್ಡ್ ಮತ್ತು 2 ಪಾಸ್‌ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ 500 ರೂ. ಪಾವತಿಸಿ ಕೂಡಲೇ ಖಾತೆ ಮಾಡಿಸಿಕೊಳ್ಳಬಹುದಾಗಿದೆ. ಸರ್ಕಾರದ ಯೋಜನೆಗಳ ನೇರನಗದು ವರ್ಗವಣೆಗಾಗಿ ಅಂಚೆ ಎಸ್.ಬಿ. ಖಾತೆಗೆ ಆಧಾರ್ ಸೀಡಿಂಗ್ ಮಾಡಲಾಗುವುದು ಎಂದು ಇಲಾಖೆ ತಿಳಿಸಿದೆ.

ಹಂತ 1: ಆಹಾರ ಇಲಾಖೆಯ ವೆಬ್‌ಸೈಟ್‌ಗೆ ಲಾಗಿನ್ ಆಗಿ
ಹಂತ 2: ಇ- ಸರ್ವಿಸ್ ಪೋರ್ಟಲ್‌ನಲ್ಲಿ ಡಿಬಿಟಿ ಎಂದು ಕಾಣಲಿದೆ, ಅದರ ಮೇಲೆ ಕ್ಲಿಕ್ ಮಾಡಿ
ಹಂತ 3: ಸ್ಟೇಟಸ್ ಆಫ್ ಡಿಬಿಟಿ ಅನ್ನು ಆಯ್ಕೆ ಮಾಡಿ
ಹಂತ 4: ನಂತರದ ಪುಟದಲ್ಲಿ ರೇಷನ್‌ ಕಾರ್ಡ್‌ ಸಂಖ್ಯೆ (ಆರ್‌ಸಿ ನಂಬರ್) ಭರ್ತಿ ಮಾಡಿ.
ಹಂತ 5: ಮುಂದುವರೆಯಿರಿ ಎಂಬ ಆಯ್ಕೆಯನ್ನು ಕ್ಲಿಕ್ ಮಾಡಿ
ಹಂತ 6: ಮುಂದಿನ ಪುಟದಲ್ಲಿ ನಿಮ್ಮ ಖಾತೆಗೆ ಹಣ ಜಮೆ ಆಗಲಿದೆಯೇ, ಕ್ರೆಡಿಟ್ ಆಗಿಲ್ಲವೇ ಎಂಬ ಮಾಹಿತಿ ಲಭ್ಯವಾಗಲಿದೆ.

ರಾಜ್ಯ ಸರ್ಕಾರದ ಪ್ರಕಾರ, ಕರ್ನಾಟಕವು 'ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಕುಟುಂಬಗಳ' 1.28 ಕೋಟಿ ಪಡಿತರ ಚೀಟಿಗಳನ್ನು ಹೊಂದಿದೆ. ಈ ಕಾರ್ಡ್‌ಗಳಲ್ಲಿ ಶೇಕಡ 99ರಷ್ಟು ಖಾತೆಗಳಿಗೆ ಆಧಾರ್ ಲಿಂಕ್ ಮಾಡಲಾಗಿದೆ. ಈ ಕಾರ್ಡ್‌ಗಳಲ್ಲಿ ಶೇಕಡ 82ರಷ್ಟು (1.06 ಕೋಟಿ) ಸಕ್ರಿಯ ಬ್ಯಾಂಕ್ ಖಾತೆಗಳೊಂದಿಗೆ ಲಿಂಕ್ ಮಾಡಲಾಗಿದೆ ಎಂದು ಅದು ಹೇಳಿದೆ.

ಆದರೆ 22 ಲಕ್ಷ ಬಿಪಿಎಲ್ ಕುಟುಂಬಗಳು ತಮ್ಮ ಬ್ಯಾಂಕ್ ಖಾತೆಯನ್ನು ಆಧಾರ್ ಸಂಖ್ಯೆಗೆ ಲಿಂಕ್ ಮಾಡದ ಕಾರಣ ತಕ್ಷಣವೇ ಅನ್ನ ಭಾಗ್ಯ ಯೋಜನೆಯಡಿ ಪ್ರಯೋಜನಗಳನ್ನು ಪಡೆಯುವುದಿಲ್ಲ ಈ ಹಿಂದೆ ಸರ್ಕಾರವು ಹೇಳಿದೆ. ಈ ನಡುವೆ ಅನ್ನ ಭಾಗ್ಯ ಯೋಜನೆ ಜಾರಿಯಾದ ಮೊದಲ ಎರಡು ತಿಂಗಳಲ್ಲಿ ಫಲಾನುಭವಿಗಳಿಗೆ ಸುಮಾರು 294 ಕೋಟಿ ರೂಪಾಯಿ ನಗದು ವರ್ಗಾವಣೆಯಾಗಿಲ್ಲ ಎಂದು ಡಿಎಚ್‌ ವರದಿ ಮಾಡಿದೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+